ಪಾಕ್ ಆಟಗಾರರಿಗೆ ಐಪಿಎಲ್‌ನಲ್ಲಿ ಅವಕಾಶ ನೀಡಿ: ನಟ ರಿಷಿ ಕಪೂರ್
Team Udayavani, Apr 6, 2017, 10:26 AM IST
ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಪಾಕಿಸ್ಥಾನ ಆಟಗಾರರಿಗೆ ಅವಕಾಶ ನೀಡುವಂತೆ ಬಾಲಿವುಡ್ ನಟ ರಿಷಿ ಕಪೂರ್ ಟ್ವೀಟರ್‌ನಲ್ಲಿ ಮನವಿ ಮಾಡಿದ್ದಾರೆ. “ಐಪಿಎಲ್‌ನಲ್ಲಿ ವಿಶ್ವದ ವಿವಿಧ ದೇಶಗಳ ಆಟಗಾರರಿದ್ದಾರೆ. ಈ ಬಾರಿ ಅಫ್ಘಾನ್ ಆಟಗಾರರು ಕೂಡ ಪದಾ ರ್ಪಣೆ ಮಾಡುತ್ತಿದ್ದಾರೆ. ಹಾಗೇ ಪಾಕಿಸ್ಥಾನ ಆಟಗಾರರಿಗೂ ಅವಕಾಶ ನೀಡಿ’ ಎಂದು ಮನವಿ ಮಾಡಿದ್ದಾರೆ. 2008ರ ಐಪಿಎಲ್ ಆವೃತ್ತಿಯ ಅನಂತರ ಪಾಕಿಸ್ಥಾನ ಆಟಗಾರರಿಗೆ ಅವಕಾಶ ನೀಡಲಾಗಿಲ್ಲ. ಈ ಬಗ್ಗೆ ಆಗಾಗ ಕೂಗು ಕೇಳಿಬರುತ್ತದೆ. ಆದರೆ ಎರಡೂ ರಾಷ್ಟ್ರಗಳ ನಡುವಿನ ಬಿಕ್ಕಟ್ಟು ಇದಕ್ಕೆ ಅಡ್ಡಿಯಾಗಿದೆ. ಒಮ್ಮೆ ಅವಕಾಶ ನೀಡಿದರೆ ದೇಶದಲ್ಲಿ ಗಲಭೆಗಳು ಆರಂಭವಾಗುತ್ತವೆ ಎಂಬ ಹಿನ್ನೆಲೆಯಲ್ಲಿ ಐಪಿಎಲ್‌ನಲ್ಲಿ ಪಾಕ್ ಆಟಗಾರರಿಗೆ ಅವಕಾಶ ನೀಡುತ್ತಿಲ್ಲ. ಇದೇ ಮೊದಲ ಬಾರಿಗೆ ಅಫ್ಘಾನಿಸ್ಥಾನದ ಮೊಹಮ್ಮದ್ ನಬಿ ಮತ್ತು ರಶೀದ್ ಖಾನ್ ಐಪಿಎಲ್ ಪ್ರವೇಶಿಸಿದ್ದಾರೆ. ಇಬ್ಬರೂ ಸನ್ ರೈಸರ್ ಹೈದರಾಬಾದ್ ತಂಡದ ಪರ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.