ರಿಯಾಲ್ಟಿ ಸಂಸ್ಥೆ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಆದೇಶ
Team Udayavani, Apr 6, 2017, 12:24 PM IST
ಬೆಂಗಳೂರು: ಡ್ರೀಮ್ಸ್ ಇಂಡಿಯಾ ಇನ್ ಫ್ರಾ ಇಂಡಿಯಾ ಲಿ, ಟಿಜಿಎಸ್ ಸೇರಿದಂತೆ ಮೂರು ರಿಯಲ್ ಎಸ್ಟೇಟ್ ಸಂಸ್ಥೆಗಳ ಹೆಸರಿನಲ್ಲಿ ಸಾವಿರಾರು ಗ್ರಾಹಕರಿಗೆ ನೂರಾರು ಕೋಟಿ ರೂ. ವಂಚಿಸಿದ ಪ್ರಕರಣ ಸಂಬಂಧ ಸಿಐಡಿ ಅಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸಾರ್ವಜನಿಕರಿಂದ ವಂಚನೆ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ನಡುವೆ ಸರಕಾರ ಆರೋಪಿಗಳ ಆಸ್ಥಿ ಮುಟ್ಟುಗೋಲಿಗೆ ಆದೇಶಿಸಿದೆ.
ಭಾರೀ ಪ್ರಮಾಣದ ಈ ವಂಚನೆ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿಗೆ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿರುವ ಸಿಐಡಿ ಹಿರಿಯ ಅಕಾರಿಗಳು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಮೂವರು ಡಿವೈಎಸ್ಪಿಗಳ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ. ಈಗಾಗಲೇ ಡ್ರೀಮ್ಸ್ ಇಂಡಿಯಾ ಇನ್ಫ್ರಾ ಇಂಡಿಯಾ ಲಿಮಿಟೆಡ್ನ ನಿರ್ದೇಶಕ ಅನೂಪ್ನನ್ನು ಬಂಸಿ ವಿಚಾರಣೆ ನಡೆಸಲಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರ ಮಾಹಿತಿಗೆ: ವಂಚಕ ಸಂಸ್ಥೆಗಳಲ್ಲಿ ಹಣ ತೊಡಗಿಸಿರುವ ಗ್ರಾಹಕರು ಆರೋಪಿಗಳ ಬಗ್ಗೆ ಮಾಹಿತಿ ನೀಡಲು ಸಿಐಡಿ ಕಚೇರಿಯಲ್ಲಿ ವಿಶೇಷ ಸೆಲ್ ತೆರೆಯಲಾಗಿದೆ. ದೂರವಾಣಿ ಮೂಲಕ (080-22094451) ಸಾರ್ವಜನಿಕರು ಮಾಹಿತಿ ನೀಡಬಹುದು. ಅಲ್ಲದೇ, ಕಂಪನಿ ಹಾಗೂ ನಿರ್ದೇಶಕರು ಹೊಂದಿರುವ ಸ್ಥಿರಾಸ್ತಿ, ಚರಾಸ್ಥಿ, ಬ್ಯಾಂಕ್ ಖಾತೆಗಳ ವಿವರಗಳನ್ನು ಸಾರ್ವಜನಿಕರು ಗುಪ್ತವಾಗಿ ಇ-ಮೇಲ್ ಮೂಲಕ ([email protected]) ಕಳುಹಿಸಬಹುದು.
ಡ್ರೀಮ್ಸ್ ಇಂಡಿಯಾ ಇನ್ಫ್ರಾ ಇಂಡಿಯಾ ಲಿ, ಟಿಜಿಎಸ್ ಕನ್ಸ್ಟ್ರಕ್ಷನ್ ಪ್ರç.ಲಿ, ಗೃಹ ಕಲ್ಯಾಣ ಪ್ರç.ಲಿ ಹೆಸರಿನಲ್ಲಿ ನಕಲಿ ರಿಯಲ್ ಎಸ್ಟೇಟ್ ಸಂಸ್ಥೆಗಳನ್ನು ಸ್ಥಾಪಿಸಿ, ಮಾದ್ಯಮಗಳಲ್ಲಿ ಆಕರ್ಷಕ ಜಾಹಿರಾತುಗಳನ್ನು ನೀಡಿ, ಸಾವಿರಾರು ಮಂದಿಯನ್ನು ನಂಬಿಸಿ ಕೋಟ್ಯಾಂತರ ರೂ. ಸಂಗ್ರಹಿಸಲಾಗಿತ್ತು. ಕಡೆಗೆ ನಿವೇಶನ ನೀಡದೆ ಹಾಗೂ ಹಣವನ್ನೂ ಹಿಂದಿರುಗಿಸದೆ ವಂಚಿಸಿದ್ದರು. ಈ ಸಂಬಂಧ ಮಡಿವಾಳ ಠಾಣೆಯೊಂದರಲ್ಲೇ 82 ವಂಚನೆ ಮೊಕದ್ದಮೆಗಳು ದಾಖಲಾಗಿದ್ದವು.
ಈ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಸಚಿನ್ ನಾಯಕ್ ಸೇರಿ 13 ಮಂದಿಯನ್ನು ಪೊಲೀಸರು ಬಂಸಿದ್ದರು. ಪ್ರಕರಣ ಪ್ರಮುಖ ಆರೋಪಿ ಸಚಿನ್ ನಾಯಕ್ (39) ಮಹರಾಷ್ಟ್ರ ಮೂಲದವನಾಗಿದ್ದು, 3-4 ಹೆಸರುಗಳ ಮೂಲಕ ವಂಚನೆ ಮಾಡುತ್ತಿದ್ದ. ನಂತರ ತನ್ನ ಪತ್ನಿಯರಾದ ದಿಶಾ ಚೌಧರಿ ಹಾಗೂ ಮಂದೀಪ್ ಕೌರ್ ಹೆಸರಿನಲ್ಲಿ ಎರಡು ರಿಯಲ್ ಎಸ್ಟೇಟ್ ಕಂಪನಿಗಳು ಹಾಗೂ ಮಜೂಂದಾರ್ ಸತಪರ್ಣಿ ಎಂಬುವವರ ಹೆಸರಿನಲ್ಲಿ ಮತ್ತೂಂದು ಸಂಸ್ಥೆ ಸ್ಥಾಪಿಸಿ ಸಾವಿರಾರು ಮಂದಿಗೆ ವಂಚಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.