ಕಾಂಗ್ರೆಸ್ ಗೆದ್ದರೆ ಜೆಡಿಎಸ್ ಕಾರಣ: ಎಚ್.ವಿಶ್ವನಾಥ್
Team Udayavani, Apr 7, 2017, 12:33 PM IST
ಮೈಸೂರು: ತೀವ್ರ ಕುತೂಹಲ ಮೂಡಿಸಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ರಾಜಕೀಯ ಸಂಸ್ಕೃತಿಯನ್ನೇ ಕೊಂದು ಹಾಕಿವೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಕಿಡಿಕಾರಿದರು.
ಉಪ ಚುನಾವಣೆ ಹಿನ್ನೆಲೆ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು. ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡೆಸುತ್ತಿರುವ ಪ್ರಚಾರವನ್ನು ಗಮನಿಸಿದರೆ, ಇಡೀ ಸನ್ನಿವೇಶವೇ ಕಲುಷಿತಗೊಂಡಿದೆ.
ಎರಡೂ ರಾಷ್ಟ್ರೀಯ ಪಕ್ಷಗಳು ಪಕ್ಷದ ಭಾಷೆ, ಸಂಸ್ಕೃತಿ ಎಲ್ಲದಕ್ಕೂ ಧಕ್ಕೆ ತಂದಿದ್ದು, ಎರಡೂ ಪಕ್ಷಗಳ ಮುಖಂಡರ ಅಬ್ಬರಕ್ಕೆ ತಲೆಯೂ ಇಲ್ಲ, ಮೆದಳು ಇಲ್ಲದಂತಾಗಿದೆ. ಎಲ್ಲಾ ನಾಯಕರುಗಳು ಪರಸ್ಪರ ಏಕವಚನದಲ್ಲಿ ಆರೋಪ-ಪ್ರತ್ಯಾರೋಪ ಮಾಡುತ್ತಿರುವುದು ಖಂಡನೀಯ ಎಂದರು.
ಮಂತ್ರಿಗಳ ಅಗತ್ಯವಿರಲಿಲ್ಲ: ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಬೇಕೆಂಬುದು ತಮ್ಮ ಆಶಯವಾಗಿದ್ದರೂ ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಅದು ಸಾಧ್ಯವಾಗುತ್ತಿಲ್ಲ. ಉಪ ಚುನಾವಣೆಯ ಆರಂಭಕ್ಕೂ ಮುನ್ನ ಉಪ ಚುನಾವಣೆಯನ್ನು ಪ್ರತಿಷ್ಠೆಯ ಕಣವಾಗಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ಗೆ ತಿಳಿಸಿದ್ದೆ.
ಆದರೂ 2 ಕ್ಷೇತ್ರಗಳು ಜಿದ್ದಾಜಿದ್ದಿ ಆಗುವಂತೆ ಮಾಡಿದ್ದು, ಕಾಂಗ್ರೆಸ್‌ನ ಎಲ್ಲಾ ಸಚಿವರು, ಶಾಸಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಉಪ ಚುನಾವಣೆಯಲ್ಲಿ ಮಂತ್ರಿಗಳನ್ನು ಬಳಸಿಕೊಳ್ಳುವ ಅಗತ್ಯವಿರಲಿಲ್ಲ, ಇಡೀ ಸರ್ಕಾರವೇ ಪ್ರಚಾರದಲ್ಲಿ ತೊಡಗಿರುವುದರಿಂದ ಸ್ಥಳೀಯ ಕಾರ್ಯಕರ್ತರಿಗೆ ಕೆಲಸವೇ ಇಲ್ಲದಂತಾಗಿದೆ. ಎಲ್ಲರೂ ಸೇರಿಕೊಂಡು ಕಾಂಗ್ರೆಸ್ ಮುಗಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದಕ್ಕೆ ಜೆಡಿಎಸ್ ಕಾರಣವಾಗಲಿದ್ದು, ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕದಿರುವುದರಿಂದ ಮತ ವಿಭಜನೆಯಾಗದೆ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದರು.
ಲಾಠಿ ಪ್ರಹಾರಕ್ಕೆ ಖಂಡನೆ: ಮಂಗಳೂರಿನಲ್ಲಿ ಪ್ರತಿ¸ಟನಾನಿರತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ಸರಿಯಲ್ಲ. ಪ್ರತಿಭಟನೆ ಪ್ರಜಾಪ್ರ¸ುತ್ವದ ಒಂದು ಭಾಗವಾಗಿದ್ದು, ಧರಣಿ ಕೂತವರ ಮೇಲೆ ಲಾಠಿ ಪ್ರಹಾರ ಮಾಡುವುದು ಮಾನವ ಹಕ್ಕಿನ ಉಲ್ಲಂಘನೆ. ಉತ್ತರ ಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡಿರುವಂತೆ ನಮ್ಮ ರಾಜ್ಯದಲ್ಲೂ ಸಾಲಮನ್ನಾ ಮಾಡಬೇಕಿದೆ ಎಂದು ಆಗ್ರಹಿಸಿದರು.
ಸೋನಿಯಾಗಾಂಧಿ ಭೇಟಿ: ಏ.12ರಂದು ದೆಹಲಿಗೆ ತೆರಳುವ ತಾವು ಏ.15ರಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ಕಾಂಗ್ರೆಸ್‌ನ ವಿದ್ಯಮಾನಗಳ ಬಗ್ಗೆ ವಿವರಣೆ ನೀಡಲಿದ್ದೇನೆ ಎಂದರು. ಸಂವಾದದಲ್ಲಿ ಜಿಲ್ಲಾ ಪರ್ತಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಕೆ.ಜೆ. ಲೋಕೇಶ್‌ಬಾಬು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.