3 ದಿನಗಳ ಅಂತಾರಾಷ್ಟ್ರೀಯ ದ್ರಾಕ್ಷಿರಸ ಉತ್ಸವಕ್ಕೆ ಚಾಲನೆ


Team Udayavani, Apr 8, 2017, 11:55 AM IST

grape-juice.jpg

ಬೆಂಗಳೂರು: ದ್ರಾಕ್ಷಿ ಬೆಳೆಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದ್ರಾಕ್ಷಿರಸ ಮಂಡಳಿ ನಗರದ ನಾಗವಾರ ವರ್ತುಲ ರಸ್ತೆಯಲ್ಲಿರುವ ಮ್ಯಾನ್‌ ಫೋ ಕನ್ವೆಷನ್‌ ಸೆಂಟರ್‌ನಲ್ಲಿ ಆಯೋಜಿಸಿರುವ ಮೂರು ದಿನಗಳ ಅಂತಾರಾಷ್ಟ್ರೀಯ ದ್ರಾಕ್ಷಿರಸ ಉತ್ಸವಕ್ಕೆ ಕೃಷಿ ಸಚಿವ ಕೃಷ್ಣ ಭೈರೇಗೌಡ ಶುಕ್ರವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ವೈನ್‌ ಮಾರಾಟದಲ್ಲಿ ಮಹಾರಾಷ್ಟ್ರ ನಂತರದ ಸ್ಥಾನವನ್ನು ಕರ್ನಾಟಕಕ್ಕೆ ಲಭಿಸಿದೆ. ರಾಜ್ಯದ ಸುಮಾರು 20 ಸಾವಿರ ಹೆಕ್ಟೇರ್‌ನಲ್ಲಿ ದ್ರಾಕ್ಷಿ ಬೆಳೆಯುತ್ತಿದ್ದು, ಈ ಪೈಕಿ ಎರಡು ಸಾವಿರ ಎಕರೆಯಲ್ಲಿ ವೈನ್‌ಗೆ ಬೇಕಿರುವ ದ್ರಾಕ್ಷಿ ಬೆಳೆಯಲಾಗುತ್ತಿದೆ. ನಂದಿ ಬೆಟ್ಟದ ತಪ್ಪಲು,ಬಾಗಲಕೋಟೆ, ಬಿಜಾಪುರಗಳಲ್ಲಿ ವೈನ್‌ಗೆ ಬೇಕಿರುವ ದ್ರಾಕ್ಷಿ ಬೆಳೆಯುತ್ತಿದ್ದಾರೆ ಎಂದು ಹೇಳಿದರು.

ಕರ್ನಾಟಕದ ವೈನ್‌ಗೆ ದೇಶದ ಇತರೆ ರಾಜ್ಯಗಳಲ್ಲಿ ಮಾತ್ರವಲ್ಲದೇ, ವಿದೇಶಗಳಿಂದಲೂ ಬೇಡಿಕೆ ಹೆಚ್ಚಾಗಿದೆ. ಒಟ್ಟಾರೆ ವಾರ್ಷಿಕ 180 ಕೋಟಿ ಮೊತ್ತದ ವಹಿವಾಟು ನಡೆಯುತ್ತಿದೆ ಎಂದು ತಿಳಿಸಿದರು.

ದ್ರಾಕ್ಷಿ ಬೆಳೆಯಲ್ಲ: ರಾಜ್ಯ ವೈನ್‌ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಎಚ್‌.ಕೃಷ್ಣಾರೆಡ್ಡಿ ಮಾತನಾಡಿ, ರಾಜ್ಯದ ವೈನ್‌ಗಳಿಗೆ ಬೆಲೆ ಕಡಿತಗೊಳಿಸುವುದು ಹಾಗೂ ಹೊರರಾಜ್ಯದ ವೈನ್‌ಗಳಿಗೆ ಅಬಕಾರಿ ಸುಂಕ ವಿಧಿಸುವ ಎರಡು ಬೇಡಿಕೆಗಳನ್ನು ದ್ರಾಕ್ಷಿರಸ ಮಂಡಳಿ ಈಡೇರಿಸದಿದ್ದರೆ ಮುಂದಿನ ತಿಂಗಳಿಂದ ದ್ರಾಕ್ಷಿ ಬೆಳೆಯುವುದನ್ನು ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೆ.ಜಿ ದ್ರಾಕ್ಷಿ ಬೆಳೆಯಲು 75-90 ವೆಚ್ಚ ತಗುಲುತ್ತಿದೆ. ಆದರೆ, ರೈತರಿಂದ ಕೇವಲ 45ರಿಂದ 60ಕ್ಕೆ ದ್ರಾಕ್ಷಿ ಖರೀದಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕರ್ನಾಟಕ ದ್ರಾಕ್ಷಿ ರಸ ಮಂಡಳಿ ಅಧ್ಯಕ್ಷ ರವೀಂದ್ರ ಶಂಕರ ಮಿರ್ಜೆ ಮಾತನಾಡಿದರು.

ಮೂರು ದಿನಗಳ ವೈನ್‌ ಉತ್ಸವದಲ್ಲಿ ಸ್ಥಳೀಯ, ರಾಷ್ಟ್ರೀಯ ವೈನ್‌ ಜತೆಗೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವೈನ್‌ಗಳು ಸಿಗಲಿವೆ. 100ರಿಂದ 10 ಸಾವಿರ ರುಪಾಯಿ ವರೆಗಿನ ಏಳು ವರ್ಷದವರೆಗಿನ ಹಳೆಯ ವೈನ್‌ಗಳು ದೊರೆಯಲಿವೆ. ಸುಲ, ಹೆರಿಟೇಜ್‌, ಗ್ರೋವೆರ್‌ ಜಂಪಾ, ರೊಸೊÕà ಸೇರಿದಂತೆ ದೇಶದ 70ಬ್ರಾಂಡ್‌ಗಳು ಹಾಗೂ ಅಮೆರಿಕ,ಜರ್ಮನಿ, ಜಪಾನ್‌, ಆಸ್ಟ್ರೇಲಿಯಾ, ಕ್ಯಾಲಿಪೋರ್ನಿಯಾ ಸೇರಿದಂತೆ ವಿವಿಧ ದೇಶಗಳ ವೈನ್‌ಗಳು ವೈನ್‌ ಪ್ರಿಯರಿಗೆ ಸಿಗಲಿವೆ.

ಟಾಪ್ ನ್ಯೂಸ್

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.