ಇಂದಿನಿಂದ ಉಬರ್‌- ಓಲಾ ಟ್ಯಾಕ್ಸಿಗಳೂ ಸಿಗಲ್ಲ

Team Udayavani, Apr 8, 2017, 12:04 PM IST

uber-ola-taxi_0.jpg

ಬೆಂಗಳೂರು: ವಿಮಾ ನಿಯಂತ್ರಣ ಮತ್ತು ಅಭಿವೃದ್ದಿ ಪ್ರಾಧಿಕಾರ (ಐಆರ್‌ಡಿಎ)ವು ಲಾರಿ ಮಾಲಿಕರ ಸಂಘದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಮಾತುಕತೆ ಕೂಡ ವಿಫ‌ಲಗೊಂಡಿದ್ದು, ಇದರ ಬೆನ್ನಲ್ಲೇ ನಗರದಲ್ಲಿ ವಿವಿಧ ಪ್ರಕಾರದ ವಾಹನಗಳ ಮಾಲಿಕರ ಸಂಘಟನೆಗಳು ಹೋರಾಟ ತೀವ್ರಗೊಳಿಸಲು ನಿರ್ಧರಿಸಿವೆ. ಇದರಿಂದ ಶನಿವಾರ ಸಂಚಾರ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. 

ಸಭೆ ವಿಫ‌ಲವಾದ ಬೆನ್ನಲ್ಲೇ ನಗರದಲ್ಲಿರುವ ಆ್ಯಪ್‌ ಆಧರಿತ ಸೇವೆ ಸಲ್ಲಿಸುತ್ತಿರುವ ಟ್ಯಾಕ್ಸಿ ಮಾಲಿಕರು ಶನಿವಾರದಿಂದಲೇ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿವೆ. ಅತ್ತ ಪ್ರವಾಸಿ ವಾಹನಗಳು ಕೂಡ ಇದೇ ಸಿದ್ಧತೆ ನಡೆಸಿದ್ದು, ಸೋಮವಾರದಿಂದ ರಸ್ತೆಗಿಳಿಯದಿರಲು ಚಿಂತನೆ ನಡೆಸಿವೆ. ಈ ಬಗ್ಗೆ ಶನಿವಾರ ಸ್ಪಷ್ಟ ನಿರ್ಧಾರ ಹೊರಬೀಳಲಿದೆ. ಆಟೋರಿಕ್ಷಾ ಚಾಲಕರ ಸಂಘ ಪ್ರತಿಭಟನೆ ಹಮ್ಮಿಕೊಂಡಿದೆ.

ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಓಲಾ-ಉಬರ್‌ ಮತ್ತಿತರ ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿವೆ. ಈ ಪೈಕಿ ತಕ್ಷಣಕ್ಕೆ 25 ಸಾವಿರಕ್ಕೂ ಅಧಿಕ ಟ್ಯಾಕ್ಸಿ ಚಾಲಕರಿಗೆ ಲಾರಿ ಮುಷ್ಕರವನ್ನು ಬೆಂಬಲಿಸಿ ಶನಿವಾರದಿಂದ ರಸ್ತೆಗಿಳಿಯದಿರಲು ಮೊಬೈಲ್‌ ಮೂಲಕ ಸಂದೇಶ ರವಾನಿಸಲಾಗಿದೆ. ಬೆಳಗ್ಗೆ ಉಳಿದವರಿಗೂ ಮನವಿ ಮಾಡಲಾಗುವುದು ಎಂದು ಓಲಾ-ಉಬರ್‌ ಮಾಲಿಕರ ಸಂಘದ ಅಧ್ಯಕ್ಷ ತನ್ವಿರ್‌ ಪಾಷ ತಿಳಿಸಿದ್ದಾರೆ.

ಇಂದು ನಿರ್ಧಾರ ಕೈಗೊಳ್ಳಲಿರುವ ಪ್ರವಾಸಿ ವಾಹನಗಳು: ಇತ್ತೀಚೆಗೆ ನಗರದ ಅತಿ ಹೆಚ್ಚು ಜನ ಆ್ಯಪ್‌ ಆಧಾರಿತ ಟ್ಯಾಕ್ಸಿಗಳನ್ನು ಅವಲಂಬಿಸಿದ್ದಾರೆ. ಹಾಗೊಂದು ವೇಳೆ ಸಂಪೂರ್ಣ ಸ್ಥಗಿತಗೊಂಡರೆ, ಇದರ ಬಿಸಿ ತುಸು ಜೋರಾಗಿಯೇ ತಟ್ಟುವ ಸಾಧ್ಯತೆ ಇದೆ. ಅದೇ ರೀತಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರದ ನಡುವೆ ಲಕ್ಷಾಂತರ ಪ್ರವಾಸಿ ವಾಹನಗಳು ಕಾರ್ಯಾಚರಣೆ ಮಾಡುತ್ತವೆ. ಅವೆಲ್ಲವುಗಳ ಸಂಚಾರ ಸ್ಥಗಿತಗೊಂಡರೆ, ಪ್ರಯಾಣಿಕರು ಅಕ್ಷರಶಃ ಪರದಾಟವಾಗಲಿದೆ. ಆದರೆ, ಈ ಬಗ್ಗೆ ಇನ್ನೂ ಪ್ರವಾಸಿ ವಾಹನಗಳ ಮಾಲಿಕರ ಸಂಘ ನಿರ್ಧಾರ ಕೈಗೊಂಡಿಲ್ಲ.   

“ಥರ್ಡ್‌ ಪಾರ್ಟಿ ಇನ್ಷೊರನ್ಸ್‌ ಮೊತ್ತ ಕಡಿಮೆ ಮಾಡುವಂತೆ ಲಾರಿ ಮಾಲಿಕರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಗಳೂರು ಪ್ರವಾಸಿ ವಾಹನಗಳ ಸಂಘ (ಬಿಟಿಟಿಒಎ)ದ ಸಂಪೂರ್ಣ ಬೆಂಬಲ ಇದೆ. ಇದಕ್ಕೆ ಪೂರಕವಾಗಿ ಸೋಮವಾರದಿಂದ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಚಿಂತನೆ ನಡೆದಿದೆ. ಆದರೆ, ಈ ಬಗ್ಗೆ ಶನಿವಾರ ಸಂಘದ ಪದಾಧಿಕಾರಿಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಬಿಟಿಟಿಒಎ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಸ್ಪಷ್ಟಪಡಿಸಿದ್ದಾರೆ. 

ಬಂದ್‌ ಇಲ್ಲ; ಪ್ರತಿಭಟನೆ: ಲಾರಿ ಮುಷ್ಕರಕ್ಕೆ ಆಟೋಗಳ ನೈತಿಕ ಬೆಂಬಲ ಇದೆ. ಮಾತುಕತೆ ವಿಫ‌ಲಗೊಂಡ ಹಿನ್ನೆಲೆಯಲ್ಲಿ ಬೆಳಿಗ್ಗೆ 10ಕ್ಕೆ ಆಟೋ ಚಾಲಕರಿಂದ ನಗರದ ಪುರಭವನದ ಎದುರು ಪ್ರತಿಭಟನೆ ನಡೆಸಲಾಗುವುದು. ನಂತರ ಎಂದಿನಂತೆ ಆಟೋಗಳು ಕಾರ್ಯಾಚರಣೆ ನಡೆಸಲಿವೆ ಎಂದು ಆಟೋರಿಕ್ಷಾ ಚಾಲಕರ ಸಂಘ ಸಿಐಟಿಯು ಅಧ್ಯಕ್ಷ ಮೀನಾಕ್ಷಿ ಸುಂದರಂ ತಿಳಿಸಿದ್ದಾರೆ. 

ಟಾಪ್ ನ್ಯೂಸ್

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.