ಸಿಡಿಲಬ್ಬರದ ಮಳೆಗೆ ಮತ್ತೆ ಮೂವರು ಬಲಿ
Team Udayavani, Apr 10, 2017, 10:11 AM IST
ಬೆಂಗಳೂರು: ಬಳ್ಳಾರಿ, ಹುಣಸೂರು, ಕಾಪು ಸೇರಿದಂತೆ ರಾಜ್ಯದ ಕೆಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ಸಿಡಿಲಬ್ಬರದ ಮಳೆಗೆ ಮೂವರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಎನ್‌ಆರ್ ಪುರ ತಾಲೂಕಿನ ಸೀತೂರಿನಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಸುಬ್ರಹ್ಮಣ್ಯ (10) ಎಂಬ ಬಾಲಕ ಮೃತಪಟ್ಟಿದ್ದಾನೆ. ಮನೆಯ ಕಿಟಕಿ ಪಕ್ಕದಲ್ಲಿ ಈತ ಮಲಗಿದ್ದ. 11.30ರ ಸುಮಾರಿಗೆ ಸಿಡಿಲಿನ ಶಬ್ಧ ಕೇಳಿದ್ದು, ತಕ್ಷಣ ಬಾಲಕ ಚೀರಿಕೊಂಡ. ಪಾಲಕರು ಬಂದು ನೋಡಿದಾಗ ಬಾಲಕ ತೀವ್ರ ಅಸ್ವಸ್ಥನಾಗಿದ್ದ. ತಕ್ಷಣವೇ ಆತನನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ. ಇದೇ ವೇಳೆ, ಸಿಡಿಲು ಬಡಿದು ಬಾಲಕನ ತಾಯಿ ಸುಮಾ ಹಾಗೂ ಈತನ ಸಹೋದರಿ ಪ್ರಾರ್ಥನಾರಿಗೆ ಕೈ ಹಾಗೂ ಕುತ್ತಿಗೆ ಭಾಗದಲ್ಲಿ ಉರಿ ಕಾಣಿಸಿಕೊಂಡಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಶನಿವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಮನೆ ಮೇಲಿನ ಸಿಮೆಂಟ್ ಶೀಟ್‌ಗಳು ಹಾರಿ ಬಿದ್ದು ಮನೆಯೊಳಗೆ ಮಲಗಿದ್ದ ಸಣ್ಣ ಮಾರೆಪ್ಪ (65)ಎಂಬುವರು ಮೃತಪಟ್ಟಿದ್ದಾರೆ. ಇದೇ ಪ್ರದೇಶದ ರಾಜಮ್ಮ (25) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ನಗರದ ಬಹುತೇಕ ವಾರ್ಡ್‌ಗಳಲ್ಲಿ ಬೃಹತ್ ಮರ-ಗಿಡಗಳೆಲ್ಲ ಧರೆಗುರುಳಿದ್ದು, ನೂರಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ರಾತ್ರಿಯೆಲ್ಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಮನೆ ಹೊರಗಡೆ ನಿಲ್ಲಿಸಲಾಗಿದ್ದ ಕಾರು, ದ್ವಿಚಕ್ರ ವಾಹನಗಳ ಮೇಲೆ ಮರ-ಗಿಡಗಳು ಉರುಳಿ ಜಖಂಗೊಂಡಿವೆ. ಹಂಪಿಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಯಲಾದ ಬಾಳೆ, ಮಾವಿನ ಫಸಲು ನಾಶಗೊಂಡಿದೆ.
ಕರಾವಳಿಯಲ್ಲೂ ಮಳೆಯಾಗಿದ್ದು, ಉಡುಪಿ ಜಿಲ್ಲೆ ಕಾಪುವಿನಲ್ಲಿ ತೆಂಗಿನ ಮರಗಳು ಮನೆಗಳ ಮೇಲೆ ಉರುಳಿ ಬಿದ್ದು, ಸುಮಾರು 6 ಲಕ್ಷ ರೂ. ಸೊತ್ತು ನಷ್ಟ ಸಂಭವಿಸಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸಮೀಪ ಸತತ ಎರಡು ಗಂಟೆಗಳ ಕಾಲ ಮಳೆ ಸುರಿದಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.