ಪೊಲೀಸ್‌ ವಶದಲ್ಲಿ ಆರೋಪಿ ಸಾವು; ಪ್ರಕರಣ ಸಿಐಡಿ ತನಿಖೆ


Team Udayavani, Apr 10, 2017, 11:43 AM IST

lockup-death.jpg

ಬೆಂಗಳೂರು: ಸಂಪಿಗೆಹಳ್ಳಿ ಠಾಣೆ ಪೊಲೀಸರ ವಶದಲ್ಲಿದ್ದ ಮೊಬೈಲ್‌ ಕಳವು ಆರೋಪಿಯೊಬ್ಬ ಶನಿವಾರ ತಡರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಈ ಸಂಬಂಧ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದ ರಮೇಶ್‌(35) ಮೃತಪಟ್ಟವರು. 

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ದೂರುದಾರ ಪ್ರವೀಣ್‌ ನಾಗವಾರ ಜಂಕ್ಷನ್‌ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಕೂಗಿಕೊಂಡು ಬಂದ ರಮೇಶ್‌ ತುರ್ತು ಸಮಸ್ಯೆಯಿದ್ದು,  ಕರೆ ಮಾಡಬೇಕಿದೆ. ನಿಮ್ಮ ಮೊಬೈಲ್‌ ಕೊಡುವಂತೆ ಮನವಿ ಮಾಡಿದ್ದಾನೆ. ಗಾಬರಿಗೊಂಡು ಬಂದು ರಮೇಶ್‌ಗೆ ಸಮಸ್ಯೆ ಇರಬಹುದೆಂದು ಭಾವಿಸಿದ ಪ್ರವೀಣ್‌ ಮೊಬೈಲ್‌ ನೀಡಿದ್ದಾರೆ. ಕರೆ ಮಾಡಿ ಕೆಲ ನಿಮಿಷ ಮಾತನಾಡಿದ ರಮೇಶ್‌ ಕ್ಷಣಾರ್ಧದಲ್ಲಿ ಮೊಬೈಲ್‌ ಜತೆ ಪರಾರಿಯಾಗಲು ಯತ್ನಿಸಿದ್ದಾನೆ.

ಈ ಸಂದರ್ಭದಲ್ಲಿ ಪ್ರವೀಣ್‌ ಕೂಗಿಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಬೆನ್ನಟ್ಟಿ ರಮೇಶ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಮೊಬೈಲ್‌ ವಾಪಸ್‌ ಪಡೆದಿದ್ದಾರೆ. ಆದರೂ ಸುಮ್ಮನಾಗದ ಕೆಲ ಸಾರ್ವಜನಿಕರು ರಮೇಶ್‌ ಮೇಲೆ ಇನ್ನಷ್ಟು ಹಲ್ಲೆ ಮಾಡಿದ್ದಾರೆ. ತೀವ್ರ ಹಲ್ಲೆಯಿಂದ ತಪ್ಪಿಸಿಕೊಂಡ ಆರೋಪಿ ಹತ್ತಿರದಲ್ಲಿದ್ದ ಜಾಹಿರಾತು ಫ‌ಲಕದ ಕಂಬ ಏರಿದ್ದಾನೆ.

ಬಳಿಕ ರಕ್ಷಣೆ ನೀಡುವಂತೆ ಕೂಗಿಕೊಂಡಿದ್ದ. ಅಷ್ಟರಲ್ಲಿ ಸಾರ್ವಜನಿಕರೊಬ್ಬರು ಪೊಲೀಸ್‌ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸಂಪಿಗೆಹಳ್ಳಿ ಸಬ್‌ಇನ್‌ಸ್ಪೆಕ್ಟರ್‌ ಶಿವಕುಮಾರ್‌ ಮತ್ತು ಕಾನ್‌ಸ್ಟೆಬಲ್‌ ಸೋಮಶೇಖರ್‌ ಹಾಗೂ ಹೊಯ್ಸಳ ಸಿಬ್ಬಂದಿ ಕಂಬ ಏರಿದ್ದ ರಮೇಶ್‌ನನ್ನು, ರಕ್ಷಣೆ ನೀಡುವುದಾಗಿ ಭರವಸೆ ನೀಡಿ ಕೆಳಗೆ ಇಳಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಠಾಣೆಯಲ್ಲಿದ್ದ ರಮೇಶ್‌ ಇದಕ್ಕಿದ್ದಂತೆ ಅಸ್ವಸ್ಥಗೊಂಡು ಬಿದ್ದಿದ್ದ. ಕೂಡಲೇ ಪೊಲೀಸರು ಯಲಹಂಕದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಚಿಕಿತ್ಸೆ ನೀಡಿದ ವೈದ್ಯರು ರಮೇಶ್‌ ಮದ್ಯ ಸೇವಿಸಿದ್ದಾರೆ ಎಂದು ದೃಢಪಡಿಸಿದ್ದರು. ನಂತರ ಆರೋಪಿಯನ್ನು ಮತ್ತೆ ಠಾಣೆಗೆ ಕರೆದೊಯ್ಯಲಾಗಿತ್ತು. 

2 ಗಂಟೆ ಸುಮಾರಿಗೆ ರಮೇಶ್‌ ಮತ್ತೆ ಅಸ್ವಸ್ಥನಾಗಿದ್ದು, ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಮೇಶ್‌ ಪರಿಸ್ಥಿತಿ ಗಂಭೀರವಾಗಿದ್ದರಿಂದ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಈ ಸಲಹೆ ಮೇರೆಗೆ ಪೊಲೀಸರು, ಮತ್ತೂಂದು ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ನೀಡಲು ಮುಂದಾದ ವೈದ್ಯರು ರಮೇಶ್‌ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.