ಸಮಾನ ವೇತನ ಜಾರಿ ಮೂಲಕ ರಾಜ್ಯ ಮಾದರಿಯಾಗಲಿ
Team Udayavani, Apr 10, 2017, 11:51 AM IST
ಬೆಂಗಳೂರು: ಸಂವಿಧಾನದ ಆಶಯ ಹಾಗೂ ಸುಪ್ರೀಂ ಕೋರ್ಟ್ ಆದೇಶದನ್ವಯ ಗುತ್ತಿಗೆ ಮತ್ತು ಹೊರೆಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೆ ತರುವ ಮೂಲಕ ಕರ್ನಾಟಕವು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಸಿಐಟಿಯು ರಾಜ್ಯ ಘಟಕದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾನ ಕೆಲಸಕ್ಕೆ ಸಮಾನ ವೇತನ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಅರ್ಥ ಬರಬೇಕಾದರೆ ಸಮಾನತೆ ಬರಬೇಕು. ಅದರಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗಬೇಕು. ಇದು ಸಂವಿಧಾನದ ಆಶಯವೂ ಆಗಿದ್ದು, ಅದನ್ನು ಜಾರಿಗೊಳಿಸುವ ಮೂಲಕ ನಮ್ಮ ರಾಜ್ಯ ಇತರ ರಾಜ್ಯಗಳಿಗೆ ಮಾದರಿ ಆಗಲಿ ಎಂದರು.
ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮಾತನಾಡಿ, ಗುತ್ತಿಗೆ ಪದ್ಧತಿ ಎಂಬುದು ನೌಕರರ ಶೋಷಣೆಯ ಅಸ್ತ್ರ. ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೌಕರರು ಅಥವಾ ಕಾರ್ಮಿಕರನ್ನು ನೇಮಿಸಿಕೊಂಡು ಸರಿಯಾಗಿ ವೇತನ, ಭ್ಯತೆ ಹಾಗೂ ಸೌಲಭ್ಯಗಳನ್ನು ಕಲ್ಪಿಸದೆ ಶೋಷಣೆ ಮಾಡಲಾಗುತ್ತಿದೆ. ನೇರ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರರನ್ನು ಕಡೆಗಣಿಸಲಾಗಿದೆ.
ಕಾರ್ಮಿಕ ಕಾಯ್ದೆ ಪ್ರಕಾರ ವೇತನ ಹಾಗೂ ಸೌಲಭ್ಯಗಳು ಸಿಗುತ್ತಿಲ್ಲ. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಸಂಘಟಿಸಿ ರಾಜ್ಯಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿ, ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು. ಆಂಧ್ರಪ್ರದೇಶದ ಗುತ್ತಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಎ.ವಿ.ನಾಗೇಶ್ವರ್‌ರಾವ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.