ಭಗವಾನ ಮಹಾವೀರ ಜಯಂತ್ಯುತ್ಸವ
Team Udayavani, Apr 10, 2017, 1:16 PM IST
ಧಾರವಾಡ: ಬದುಕಿ, ಬದುಕಲು ಬಿಡಿ ಎಂಬ ಮಾರ್ಮಿಕ ಮಾತುಗಳಿಂದ ಸಮಾಜದ ಓರೆಕೋರೆಗಳನ್ನು ತಿದ್ದಿದ ಮಹಾವೀರರ ವಿಚಾರಗಳನ್ನು ಇಂದು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಹೇಳಿದರು.
ನಗರದ ಕವಿಸಂನಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ವೇತಾಂಬರ ಮತ್ತು ದಿಗಂಬರ ಜೈನ ಸಮಾಜಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಗವಾನ ಮಹಾವೀರರ 2544ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೈನ ಧರ್ಮದ ಕೊಡುಗೆ ಅಪಾರವಾಗಿದೆ ಎಂದರು. ಸಮಾಜದಲ್ಲಿರುವ ಜೀವ ರಾಶಿಯ ಅಳಿವು ಉಳಿವಿಗಾಗಿ ಅಹಿಂಸಾ ಮಾರ್ಗದಲ್ಲಿ ನಿರಂತರ ಹೋರಾಡಿ ಪ್ರಾಣತ್ಯಾಗ ಮಾಡಿದ ಭಗವಾನ್ ಮಹಾವೀರರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.
ಭಾರತ ಸೇರಿದಂತೆ ವಿಶ್ವಮಟ್ಟದಲ್ಲಿ ಭಯೋತ್ಪಾದನೆ ಪ್ರಮಾಣ ಹೆಚ್ಚಾಗುತ್ತಿರುವುದು ಮಹಾನ್ ನಾಯಕರು ಹಾಕಿಕೊಟ್ಟ ಸನ್ಮಾರ್ಗಕ್ಕೆ ವಿರುದ್ಧವಾಗಿವೆ. ಯುವ ಜನಾಂಗ ಪರಿಶುದ್ಧವಾದ ಮನಸ್ಸಿನಿಂದ ಇಂತಹ ಭಯೋತ್ಪಾದಕ ಕೃತ್ಯಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಬಿ.ಆರ್. ದರೂರ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ವಿ.ಎಸ್. ಮಾಳಿ ಅವರು, ಭಗವಾನ್ ಮಹಾವೀರರ ಸಿದ್ಧಾಂತಗಳ ಕುರಿತು ಉಪನ್ಯಾಸ ನೀಡಿದರು. ಕಪ್ಪತಗುಡ್ಡದ ನಂದಿವೇರಿ ಸಂಸ್ಥಾನ ಮಠದ ಶಿವಕುಮಾರ ಸ್ವಾಮೀಜಿ, ಎಸ್.ಕೆ. ರಂಗಣ್ಣವರ, ತಹಶೀಲ್ದಾರ ಆರ್.ವಿ. ಕಟ್ಟಿ,
ಡಾ| ಜಿನದತ್ತ ಹಡಗಲಿ, ಡಾ| ನಿರಂಜನಕುಮಾರ, ಡಾ| ಅಜಿತಪ್ರಸಾದ, ಡಾ|ಎ.ಬಿ.ಖೋತ್, ದತ್ತಾ ಡೋರ್ಲೆ, ಫತೇಚಂದ ಸೋಲಂಕಿ, ಮೋಹನಲಾಲ ಓಸವಾಲ್, ಅಶೋಕ ಬಾಗಿ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದಲ್ಲಿ ಭಗವಾನ್ ಮಹಾವೀರರ ಭಾವಚಿತ್ರದ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.