ಸಚಿವರ ಅಭಿವೃದ್ಧಿ ಕಾರ್ಯಕ್ಕೆ ಸಂದ ಜಯ
Team Udayavani, Apr 10, 2017, 3:23 PM IST
ಚಿತ್ತಾಪುರ: ತಾಲೂಕಿನ ವಾಡಿ ಪುರಸಭೆಯ 23 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ನ 13 ಅಭ್ಯರ್ಥಿಗಳು ಗೆಲುವು ಸಾಧಿಧಿಸಿದ್ದಾರೆ. ಇದು 2000 ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಂದ ಜಯವಾಗಿದೆ ಎಂದು ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೇಮೂದ್ ಸಾಹೇಬ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಮತದಾರರು ಕಾಂಗ್ರೆಸ್ ಪರ ಇದ್ದಾರೆ. ಚಿತ್ತಾಪುರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುದಕ್ಕೆ ವಾಡಿ ಪುರಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು.
ವಾಡಿ ಪುರಸಭೆ ಒಟ್ಟು 23 ವಾರ್ಡ್‌ಗಳಲ್ಲಿ 15 ಸ್ಥಾನಗಳನ್ನು ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇತ್ತು. ಆದರೆ ಕೆಲವು ವಾರ್ಡ್‌ಗಳಲ್ಲಿ ಸ್ವಲ್ಪ ಮತಗಳಿಂದ ನಮ್ಮ ಅಭ್ಯರ್ಥಿಗಳು ಸೋತಿದ್ದಾರೆ. ನೀರಿಕ್ಷೆಗೊ ಮೀರಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದರ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದರು.
ಬಿಜೆಪಿಯವರು ಎಷ್ಟೇ ಆಮಿಷ ತೋರಿಸಿದರೂ ವಾರ್ಡ್ ಮತದಾರರು ಮಾತ್ರ ಅದನ್ನ ಲೇಕ್ಕಿಸದೇ ಅಭಿವೃದ್ಧಿಗೆ ಮೆಚ್ಚಿ ಮತ ನೀಡಿದ್ದಾರೆ. ಹೀಗಾಗಿ ಬಿಜೆಪಿ ಪರ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸುವುದರ ಮೂಲಕ ವಾಡಿ ಸರ್ವಾಂಗೀಣ ಅಭಿವೃದ್ಧಿ ಮಾಡಲು ಸಚಿವರ ಕೈ ಹಿಡಿದಿದ್ದಾರೆ ಎಂಬುದಕ್ಕೆ ಪುರಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಶಿವರುದ್ರ ಭೀಣಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಮುಖಂಡರಾದ ಶಂಕ್ರಯ್ಯಸ್ವಾಮಿ ಮದ್ರಕಿ, ಹಣಮಂತ ಸಂಕನೂರ, ಭೀಮಣ್ಣ ಹೋತಿನಮಡಿ, ಮಲ್ಲಿಕಾರ್ಜುನ ಮುಡಬೂಳ, ಇಸ್ಮಾಯಿಲ್‌ಸಾಬ ಕಮರವಾಡಿ, ರವಿ ಚವ್ಹಾಣ, ನಾಗಯ್ಯ ಗುತ್ತೇದಾರ, ಶರಣು ಡೋಣಗಾಂವ, ರಾಜು ಹಿರೇಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.