ಕಾಂಗ್ರೆಸ್ ವಿಜಯೋತ್ಸವ: ಗೆದ್ದವರ ಸಂಭ್ರಮಾಚರಣೆ
Team Udayavani, Apr 10, 2017, 3:28 PM IST
ವಾಡಿ: ಪಟ್ಟಣದ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಸಂಭ್ರಮ ಮುಗಿಲು ಮುಟ್ಟಿತು.
ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಯ ತೀವ್ರ ಪೈಪೋಟಿ ಮಧ್ಯೆ ಜಯಭೇರಿ ಬಾರಿಸಿದ ವಾರ್ಡ್ 13ರ ನೇತಾಜಿ ನಗರದ ಬಿಜೆಪಿ ಅಭ್ಯರ್ಥಿ ಭೀಮಶಾ ಜಿರೋಳಿ ಕಣ್ಣೀರು ಸುರಿಸಿ ಬೆಂಬಲಿಗರನ್ನು ಅಪ್ಪಿಕೊಂಡ ದೃಶ್ಯ ಕಂಡು ಬಂದಿತು.
ಗೆಲುವಿನ ಘೋಷಣೆಯಾಗುತ್ತಿದ್ದಂತೆ ಖುಷಿಯಿಂದ ಕುಣಿದು ಕುಪ್ಪಳಿಸಿದ್ದು ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು, ಅಂಬೇಡ್ಕರ್ ವೃತ್ತಕ್ಕೆ ಬಂದು ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಬಾಜಾ ಭಜಂತ್ರಿಗಳು ಮತ್ತು ಹಲಿಗೆಗಳೊಂದಿಗೆ ತಮ್ಮ ಬಡಾವಣೆಗಳಿಗೆ ತೆರಳಿ ಸಂಭ್ರಮಿಸಿದರು. ನೂರಾರು ಜನ ಕಾರ್ಯಕರ್ತರು ಹಾಗೂ ಬೆಂಬಲಿಗರು ವಿಜಯೋತ್ಸವದಲ್ಲಿ ಪಾಲ್ಗೊಂಡು ಪರಸ್ಪರ ಗುಲಾಲು ಎರಚಿಕೊಂಡು ಸಂತಸಪಟ್ಟರು. ಕಾಂಗ್ರೆಸ್ ಮತ್ತು ಬಿಜೆಪಿಯ ಮುಖಂಡರು ಅಭ್ಯರ್ಥಿಗಳನ್ನು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ಹೊಸ ಸೇರ್ಪಡೆ
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.