ಲಾರಿ ಚಾಲಕನ ಮೇಲೆ ಹಲ್ಲೆ ; ಹಣ ಲೂಟಿ
Team Udayavani, Apr 10, 2017, 4:40 PM IST
ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಎಂಜಿರದಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿದ ಘಟನೆ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರಿನಿಂದ ಉಡುಪಿಗೆ ಸಿಮೆಂಟ್ ಲೋಡ್ ಹೇರಿಕೊಂಡು ಬರುತ್ತಿದ್ದ ಲಾರಿ ಚಾಲಕ ಚಿಕ್ಕಮಗಳೂರು ನಿವಾಸಿ ರಾಘವೇಂದ್ರ (40) ಹಲ್ಲೆಗೊಳಗಾದವರು. ರಾಘವೇಂದ್ರ ಬೆಂಗಳೂರಿನಿಂದ ಸಿಮೆಂಟ್ ತುಂಬಿದ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಎಂಜಿರ ಬಳಿ ಮೂತ್ರಶಂಕೆಗೆಂದು ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿದ್ದರು. ಪುನಃ ಲಾರಿಯನ್ನು ಏರುವ ವೇಳೆಗೆ ಬೆಂಗಳೂರು ಕಡೆಯಿಂದ ಬಂದ ಕೆಂಪು ಬಣ್ಣದ ಮಹಿಂದ್ರಾ ಕಾರಿನಿಂದ ಇಳಿದ ಐವರ ತಂಡ ಏಕಾಏಕಿ ಚಾಲಕನ ಮೇಲೆ ಹಲ್ಲೆ ನಡೆಸಿತು. ತಮಿಳು ಭಾಷೆ ಮಾತನಾಡುತ್ತಿದ್ದ ಅವರು ರಾಘವೇಂದ್ರ ಅವರ ಕಾಲು, ಎದೆ, ಬೆನ್ನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದರು. ಪ್ರತಿರೋಧ ಒಡ್ಡಿದ್ದರಿಂದ ಚಾಲಕನ ಮೇಲೆ ಕಾಲಿನಿಂದ ತುಳಿದು ಹಲ್ಲೆ ನಡೆಸಿ 17,000 ರೂ. ನಗದು, ಮೊಬೈಲ್, ಎಟಿಎಂ ಕಾರ್ಡ್ ಮೊದಲಾದವುಗಳನ್ನು ಕಸಿದುಕೊಂಡು ಮಂಗಳೂರು ಕಡೆಗೆ ಪರಾರಿಯಾದರು. ಗಾಯ ಗೊಂಡ ಚಾಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹಲ್ಲೆ ನಡೆಸಿ ಪರಾರಿಯಾಗುವ ವೇಳೆ ಆರೋಪಿಗಳು ಮೊಬೈಲ್ ಫೋನ್ ಒಂದನ್ನು ಬಿಟ್ಟು ಹೋಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಮೂಲಕ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ದರೋಡೆ
ಸಕಲೇಶಪುರದಿಂದ ಉಪ್ಪಿನಂಗಡಿ ವರೆಗೆ ಹೆದ್ದಾರಿಯ ಅಲ್ಲಲ್ಲಿ ನಿರ್ಜನ ಪ್ರದೇಶಗಳಿರುವುದರಿಂದ ಈ ಭಾಗದಲ್ಲಿ ದರೋಡೆ ಇನ್ನಿತರ ದುಷ್ಕೃತ್ಯಗಳು ನಡೆಯುತ್ತಿದ್ದು ಎರಡು ದಿನಗಳ ಹಿಂದೆ ಶಿರಾಡಿ ಬಳಿ ದರೋಡೆ ನಡೆದು ಲಕ್ಷಾಂತರ ರೂ. ದೋಚಿದ ಘಟನೆ ಬೆನ್ನಿಗೇ ಪ್ರಕರಣ ಮರುಕಳಿಸಿರುವುದು ರಾತ್ರಿ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಇತ್ತೀಚೆಗೆ ಹೈವೇ ಪ್ಯಾಟ್ರೋಲ್ ವಾಹನ ಕಾರ್ಯಾಚರಣೆಗೆ ಇಳಿದಿದ್ದರೂ ರಾತ್ರಿ ವೇಳೆ ಈ ಭಾಗದಲ್ಲಿ ಕಾಣಿಸುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಾರೆ. ಅಕ್ಕಪಕ್ಕದಲ್ಲಿ ಮನೆಗಳಿದ್ದರೂ ದರೋಡೆ ನಡೆದಿರುವುದು, ತೀರಾ ತಡರಾತ್ರಿಯ ಮೊದಲೇ ದರೋಡೆ ನಡೆಸಿರುವುದನ್ನು ಗಮನಿಸಿದರೆ ಈ ಭಾಗದಲ್ಲಿ ದರೋಡೆಕೋರರ ತಂಡ ಸಕ್ರಿಯವಾಗಿರುವ ಅನುಮಾನ ಕಾಣುತ್ತಿದೆ.
ರಾತ್ರಿ ವೇಳೆ ಮರಳು, ಡಾಮರು, ಡೀಸೆಲ್ ಕಳವು ಮೊದಲಾದ ಅಕ್ರಮ ಚಟುವಟಿಕೆಗಳನ್ನು ನಡೆಸುವ ತಂಡಗಳು ಈ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್‌ಪಿ ರವೀಶ್ ಸಿ.ಆರ್., ಧರ್ಮಸ್ಥಳ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಪಿಎಸ್‌ಐ ರಾಮ ನಾಯಕ್ ಹಾಗೂ ನೆಲ್ಯಾಡಿ ಹೊರ ಠಾಣಾ ಸಿಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.