ಲೀಡರ್‌ ಮಾಡುವ “ಲೀಡ್‌’


Team Udayavani, Apr 11, 2017, 3:50 AM IST

10-josh-5.jpg

ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು ಪ್ರತಿಯೊಬ್ಬ ಜಿಲ್ಲಾಧಿಕಾರಿಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಲೆಂದೇ “ಲೀಡ್‌’ ಎಂಬ ಒಂದು ನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ಕೇಂದ್ರ ಹಾಗು ರಾಜ್ಯ ಸರ್ಕಾರಗಳ ನೀತಿ ಹಾಗು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಜಿಲ್ಲಾಡಳಿತದ ಮೂಲಕ ಅಥವಾ ಅದರ ಸಹಾಯದಿಂದ ಕಾರ್ಯಾನ್ವಿತಗೊಳಿಸಲಾಗುತ್ತದೆ. 1992ರಲ್ಲಿ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಕೇಂದ್ರೀಕರಣದ ಆಶಯವನ್ನು ಸಾಕಾರಗೊಳಿಸಲು ಪಂಚಾಯತಿ ರಾಜ್‌ ಕಾಯ್ದೆಯನ್ನು ಜಾರಿಗೊಳಿಸಿತು. ಅಂದಿನಿಂದ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿನ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಪಂಚಾಯಿತಿ ರಾಜ್‌ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ಆದರೆ ಪಂಚಾಯಿತಿ ರಾಜ್‌ ಸಂಸ್ಥೆಗಳಿಗೆ ಈ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತದ ಸಹಾಯ ಬಹಳ ಮುಖ್ಯ. ಜಿಲ್ಲೆಯ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳ ಹೊಣೆ ಜಿಲ್ಲಾಧಿಕಾರಿಯ ಮೇಲಿರುತ್ತದೆ. ಇವರ ಅಡಿಯಲ್ಲಿ ಒಂದು ಜಿಲ್ಲೆಯ ಪ್ರಗತಿಪರ ಕಾರ್ಯಗಳನ್ನು ಜಾರಿಗೊಳಿಸಲಾಗುತ್ತದೆ. ಆದರೆ ಹೆಚ್ಚುತ್ತಿರುವ ಸರ್ಕಾರದ ಕಾರ್ಯಗಳು ಮತ್ತು ಜನರ ಬೇಡಿಕೆಗಳು ಜಿಲ್ಲಾಧಿಕಾರಿಯ ಕೆಲಸವನ್ನು ಹೆಚ್ಚಿಸಿದೆ. ಒಂದು ಜಿಲ್ಲೆಯಲ್ಲಿ ಒಬ್ಬ ಜಿಲ್ಲಾಧಿಕಾರಿ ನೂರಕ್ಕೂ ಹೆಚ್ಚು ಸಮಿತಿಗಳ ಆಧ್ಯಕ್ಷರಾಗಿರುತ್ತಾರೆ. ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಮಾನವ ಸಂಪನ್ಮೂಲದ ಕೊರತೆಯಿದೆ. ಇದೆಲ್ಲದರ ನಡುವೆ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು ಪ್ರತಿಯೊಬ್ಬ ಜಿಲ್ಲಾಧಿಕಾರಿಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಲೆಂದೇ “ಲೀಡ್‌’ ಎಂಬ ಒಂದು ನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ಏನಿದು “ಲೀಡ್‌’ ?
ಜಿಲ್ಲೆಯಲ್ಲಿನ ಮಾನವ ಸಂಪನ್ಮೂಲದ ಕೊರತೆಯನ್ನು ನಿವಾರಿಸುವ ಜೊತೆಗೆ ಉತ್ಸಾಹಿ ಯುವಕರಿಗೆ ಜಿಲ್ಲೆಯಲ್ಲಿನ ಪ್ರಗತಿಪರ, ನೂತನ ಅಭಿವೃದ್ಧಿ ಕಾರ್ಯಗಳಲ್ಲಿ ಜಿಲ್ಲಾಧಿಕಾರಿಯ ಜೊತೆಗೆ ಕೆಲಸ ಮಾಡುವ ಅವಕಾಶವನ್ನು ಈ “ಲೀಡ್‌’ ಕಾರ್ಯಕ್ರಮವು ಒದಗಿಸುತ್ತದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಮತ್ತು ಜಿಲ್ಲಾಧಿಕಾರಿಗೆ ನೂತನ ಅಭಿವೃದ್ಧಿ ಕಾರ್ಯಗಳಲ್ಲಿ ನೆರವು ನೀಡಲು ಈ ಕಾರ್ಯಕ್ರಮದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಪ್ರಮುಖ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಈ ಅಭ್ಯರ್ಥಿಗಳು ಸಹಾಯ ಮಾಡುತ್ತಾರೆ. ಸಾರ್ವಜನಿಕ ರಂಗದಲ್ಲಿ ಕೆಲಸ ಮಾಡುವ ಮತ್ತು ಸಮರ್ಥ ನಾಯಕತ್ವ ಗುಣಗಳನ್ನು ಹೊಂದಿದ ಯುವಕರಿಗೆ ಈ ಕಾರ್ಯಕ್ರಮವು ದೇಶದ ಅಭಿವೃದ್ಧಿಯಲ್ಲಿ ಕೆಲಸ ಮಾಡಲು ಅವಕಾಶವನ್ನು ಒದಗಿಸುತ್ತದೆ. ಅಭ್ಯರ್ಥಿಗಳು ನೇರವಾಗಿ ಜಿಲ್ಲಾಧಿಕಾರಿಯ ಕೆಳಗೆ ಕೆಲಸ ಮಾಡುವುದರಿಂದ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಬಹುದು. ಜೊತೆಗೆ ಆಡಳಿತದಲ್ಲಿನ ಹೊಸ ವಿಷಯಗಳನ್ನು ಕಲಿಯಲು ಹೆಚ್ಚಿನ ಅವಕಾಶಗಳಿರುತ್ತವೆ. 

ಅರ್ಹತೆ ಏನು?
ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ, ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪದವಿಯನ್ನು ಪೂರ್ಣಗೊಳಿಸಿದ ಯುವಕರು ಈ ಕಾರ್ಯಕ್ರಮದ ಲಾಭವನ್ನು ಪಡೆಯಬಹುದು. ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲಗಳನ್ನು ಹೊಂದಿರಬೇಕು ಮತ್ತು ಸಮಸ್ಯೆಗಳನ್ನು ನಿವಾರಿಸುವ, ಸಮರ್ಥ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಾಗು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಗುಣಗಳನ್ನು ಪ್ರದರ್ಶಿಸಬೇಕು. ಅಭ್ಯರ್ಥಿಗಳು 2- 4 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು. ಹಿಂದಿ ಮತ್ತು ಇಂಗ್ಲಿಷ್‌ ಭಾಷಾಜ್ಞಾನ ಚೆನ್ನಾಗಿರಬೇಕು. ಆರೋಗ್ಯ, ಶಿಕ್ಷಣ, ಕುಡಿಯುವ ನೀರು ಮತ್ತು ನಿರ್ಮಲೀಕರಣ, ಜೀವನೋಪಾಯ ಇತ್ಯಾದಿ ಕ್ಷೇತ್ರಗಳಲ್ಲಿ ಅನುಭವವನ್ನು ಹೊಂದಿದ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿಕೊಡಿ- lead.swaniti.com

ಆಯ್ಕೆ ಪ್ರಕ್ರಿಯೆ
ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ತಮ್ಮ ರೆಸ್ಯೂಮೆಯನ್ನು ShOph) ಕೂಡ ಸಲ್ಲಿಸುವುದು ಕಡ್ಡಾಯ. ಎಲ್ಲ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿದ ನಂತರದಲ್ಲಿ ಎರಡನೇ ಹಂತಕ್ಕೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎರಡನೇ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ನಿರ್ದಿಷ್ಟ ಸಮಸ್ಯೆಯ ಮೇಲೆ ಕೆಲಸ ಮಾಡಬೇಕು. ಇದರ ಜೊತೆಗೆ ಅಭ್ಯರ್ಥಿಗಳ ಸಂದರ್ಶನವನ್ನು ಟೆಲಿಫೋನ್‌ ಮೂಲಕ ಅಥವಾ ಸ್ಕೈಪ್‌ (Tm¦th) ಮಾಧ್ಯಮದ ಮೂಲಕ ನಡೆಸಲಾಗುತ್ತದೆ. ಈ ಎಲ್ಲ ಹಂತಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಡೆಯದಾಗಿ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. 

ಕಡೆಯ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೂಕ್ತ ತರಬೇತಿಯ ನಂತರದಲ್ಲಿ ಜಿಲ್ಲಾಧಿಕಾರಿಗಳ ಕೆಳಗೆ ಕೆಲಸ ಮಾಡಲು ಕಳಿಸಲಾಗುತ್ತದೆ. 
ಅರ್ಜಿ ಸಲ್ಲಿಸಲು 17 ಏಪ್ರಿಲ್‌, 2017 ಕಡೆಯ ದಿನಾಂಕವಾಗಿದೆ.

ಕೆಲಸದ ಅವಧಿ ಮತ್ತು ವೇತನ
ಪ್ರತಿ ಅಭ್ಯರ್ಥಿಯೂ ನಿರ್ದಿಷ್ಟ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯವರೆಗೆ ಕೆಲಸ ಮಾಡುತ್ತಾರೆ. ಈ ವೇಳೆಯಲ್ಲಿ ಮಾಸಿಕ ರು. 50,000/- ವೇತನವನ್ನು ಪಡೆಯುತ್ತಾರೆ. ಸಾರ್ವಜನಿಕ ರಂಗದಲ್ಲಿ ಮೂಲಭೂತ ಸಮಸ್ಯೆಗಳನ್ನು ನಿವಾರಿಸುವ ಕಾರ್ಯದಲ್ಲಿ ‘ಲೀಡ್‌’ ಅಭ್ಯರ್ಥಿಗಳು ನೇರವಾಗಿ ಕೆಲಸ ಮಾಡುವುದರಿಂದ ಭವಿಷ್ಯದಲ್ಲಿ ಅಭಿವೃದ್ಧಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಉತ್ತಮ ಕೆಲಸದ ಅವಕಾಶಗಳನ್ನು ಪಡೆಯಬಹುದು. 

ಪ್ರಶಾಂತ್‌. ಎಸ್‌. ಚಿನ್ನಪ್ಪನವರ್‌, ಚಿತ್ರದುರ್ಗ

ಟಾಪ್ ನ್ಯೂಸ್

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.