ಎಲ್ಲಾರೆಸ್, ಸುರೇಶ್‌ಗೌಡ ಜೆಡಿಎಸ್ ಸೇರ್ಪಡೆ
Team Udayavani, Apr 11, 2017, 12:11 PM IST
ಬೆಂಗಳೂರು: ಜೆಡಿಎಸ್‌ನಿಂದ ಬೆಳೆದು ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋದವರು ಲೆಕ್ಕವಿಲ್ಲದಷ್ಟು ಮಂದಿ. ಆದರೂ ರಾಜ್ಯದಲ್ಲಿ ಜೆಡಿಎಸ್ ಶಕ್ತಿಯುತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಡಿಎಸ್ ಕಚೇರಿ “ಜೆಪಿ ಭವನ’ದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ಜಿಲ್ಲೆ ನಾಗಮಂಗಲದ ಮಾಜಿ ಶಾಸಕರಾದ ಎಲ್.
ಆರ್.ಶಿವರಾಮೇಗೌಡ, ಸುರೇಶ್‌ಗೌಡ ಅವರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಲಕ್ಷಾಂತರ ಕಾರ್ಯಕರ್ತರು ಹಾಗೂ ಮುಖಂಡರ ಶ್ರಮದಿಂದ ಪಕ್ಷ ಇಂದಿಗೂ ರಾಷ್ಟ್ರೀಯ ಪಕ್ಷಗಳಿಗೆ ಸವಾಲು ಹಾಕುವ ಮಟ್ಟದಲ್ಲಿ ಬೆಳೆದು ನಿಂತಿದೆ. ಪಕ್ಷದಿಂದ ಬೆಳೆದವರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಹೋಟೆಲ್‌ನಲ್ಲಿ ಕುಳಿತು ಇಸ್ಪೀಟ್ ಆಡುತ್ತಾ ಜೆಡಿಎಸ್ ಮುಂದಿನ ಚುನಾವಣೆಯಲ್ಲಿ ಇಂತಿಷ್ಟೇ ಸ್ಥಾನ ಬರುತ್ತೆ ಎಂದು ಹೇಳ್ಳೋರ ಬಗ್ಗೆ ತಲೆಕಡಿಸಿಕೊಳ್ಳುವುದಿಲ್ಲ. ಅವರು ಒಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡಿದರೆ ಸತ್ಯಾಂಶ ಗೊತ್ತಾಗುತ್ತದೆ ಎಂದು ಟೀಕಾಕಾರರಿಗೆ ತಿವಿದ ಕುಮಾರಸ್ವಾಮಿ, ಎಲ್ಲ ವರ್ಗದ ಹಿತ ಕಾಯುವ ಸರ್ಕಾರ ಅಧಿಕಾರಕ್ಕೆ ತರುವ ತಮ್ಮ ಸಂಕಲ್ಪಕ್ಕೆ ರಾಜ್ಯದ ಜನ ಆಶೀರ್ವದಿಸುವ ಭರವಸೆ ಇದೆ. ಈ ವಿಚಾರದಲ್ಲಿ ಎಲ್ಲ ನಾಯಕರು ನನ್ನ ಜತೆಗೂಡಿ ಶ್ರಮಿಸಿ ಎಂದು ಹೇಳಿದರು.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಎಲ್.ಆರ್.ಶಿವರಾಮೇಗೌಡ, ಸುರೇಶ್
ಗೌಡರಿಂದಲೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮಸ್ಯೆಯಾಗಿದೆ. ಇಬ್ಬರಲ್ಲೂ ಇರುವ ಸಣ್ಣ ವ್ಯತ್ಯಾಸವನ್ನು ಬದಿಗಿಟ್ಟು ಎಲ್ಲರ ಜತೆಗೂಡಿ ಪಕ್ಷ ಸಂಘಟನೆ ಮಾಡಬೇಕು. ಜಿಲ್ಲೆಯಲ್ಲಿ ಪಕ್ಷ ತ್ಯಜಿಸಿದವರಿಗೆ ಪಾಠವಾಗುವಂತೆ ಪಕ್ಷ ಸಂಘಟಿಸಿದರೆ ಒಬ್ಬರನ್ನು ವಿಧಾನಸಭೆ, ಇನ್ನೊಬ್ಬರನ್ನು ವಿಧಾನಪರಿಷತ್ ಮೂಲಕ ವಿಧಾನಸೌಧಕ್ಕೆ ಕರೆತರುವ ಜವಾಬ್ದಾರಿ ನಮ್ಮದು
ಎಂದು ದೇವೇಗೌಡರು ಭರವಸೆ ನೀಡಿದರು.
ನಾಗಮಂಗಲದಲ್ಲಿ ಇದೇ 14 ರಂದು ಸಮಾವೇಶ ಮಾಡ್ತಾರಂತೆ. ಅದಕ್ಕಾಗಿ ಹದಿನೈದು ಸಾವಿರ ಕೇಜಿ ಮಟನ್ ಮಾಡ್ತಾರಂತೆ ಎಂದು ಪರೋಕ್ಷವಾಗಿ ಚೆಲುವರಾಯಸ್ವಾಮಿ ಆಯೋಜಿಸಿರುವ ಸಮಾವೇಶ ಕುರಿತು ವ್ಯಂಗ್ಯವಾಡಿದ ದೇವೇಗೌಡರು, ಅದನ್ನು ಸವಾಲಾಗಿ ಸ್ವೀಕರಿಸಿ ಅದಕ್ಕಿಂತ ದೊಡ್ಡ ಕಾರ್ಯಕ್ರಮ ಮಾಡಿ ಎಂದು ಹೇಳಿದರು.
ಸಂಸದ ಪುಟ್ಟರಾಜು, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಅಪ್ಪಾಜಿಗೌಡ, ಶರವಣ ಉಪಸ್ಥಿತರಿದ್ದರು.
ಆಪರೇಷನ್ ಜೆಡಿಎಸ್
ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. 1989ರಲ್ಲಿ ನಾಗಮಂಗಲದಲ್ಲಿ ಪತ್ರಕರ್ತ ಕಂಚನಹಳ್ಳಿ ಗಂಗಾಧರಮೂರ್ತಿ ಕೊಲೆಯಾದಾಗ ಶಿವರಾಮೇಗೌಡರ ವಿರುದ್ಧ ಎಚ್.ಡಿ.ದೇವೇಗೌಡರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪಾದಯಾತ್ರೆ ನಡೆಸಿದ್ದರು. ಇದೀಗ ಅದೇ ಶಿವರಾಮೇಗೌಡರನ್ನು ಜೆಡಿಎಸ್ ಸೇರ್ಪಡೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ನಾಯಕರಾಗಿದ್ದ
ಚೆಲುವರಾಯಸ್ವಾಮಿ ಪಕ್ಷದಿಂದ ಅಮಾನತುಗೊಂಡಿದ್ದರಿಂದ ಆ ಭಾಗದಲ್ಲಿ ಜೆಡಿಎಸ್‌ಗೆ ಶಕ್ತಿ ತುಂಬಿಸಿಕೊಳ್ಳಲು ಕಾಂಗ್ರೆಸ್‌ನಲ್ಲಿದ್ದ ಶಿವರಾಮೇಗೌಡ ಹಾಗೂ ಸುರೇಶ್‌ಗೌಡರನ್ನು “ಆಪರೇಷನ್ ಜೆಡಿಎಸ್’ ಮೂಲಕ ಕರೆತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.