ಪುತ್ತೂರಿನಲ್ಲಿ  ಡ್ರಗ್ಸ್‌  ಜಾಲದ ಕರಿನೆರಳು

Team Udayavani, Apr 11, 2017, 12:27 PM IST

drugs.jpg

ಪುತ್ತೂರು: ನಗರದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾದಕ ದ್ರವ್ಯ ಮಾರಾಟ ಜಾಲ ವ್ಯವಹರಿಸುತ್ತಿದೆ ಎಂದು ಕಳೆದ ಕೆಲವು ವರ್ಷಗಳಿಂದ ವ್ಯಕ್ತವಾಗಿರುವ ಅನುಮಾನಕ್ಕೆ ಗಾಂಜಾ ಸೇವನೆ ಪ್ರಕರಣಗಳು ಪುಷ್ಟಿ ನೀಡಿವೆ.  ನೂರಾರು ವಿದ್ಯಾರ್ಥಿಗಳು ಅಮಲು ಪದಾರ್ಥ ಸೇವನೆ ಚಟಕ್ಕೆ ಬಿದ್ದಿರುವ ಅನುಮಾನ ದಟ್ಟವಾಗಿದೆ.

ಕೆಲವು ದಿನಗಳ ಹಿಂದೆ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು. ಕಳೆದ ವರ್ಷ ನಗರದ ಕಾಲೇಜೊಂದರ ಪರಿಸರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ್ದರು. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ 15ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದವು.

ಆರೋಪಿಗಳಿಗಿಲ್ಲ  ಭಯ
ಈ ಡ್ರಗ್ಸ್‌ ಜಾಲದಲ್ಲಿ ಬಂಧಿತರಾಗುವ ಆರೋಪಿಗಳನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಆದರೆ ಪ್ರಕರಣದ ಗಂಭೀರತೆ ಅರಿತು ಡ್ರಗ್ಸ್‌ನ ಮೂಲ ಎಲ್ಲಿಯದ್ದು ಎಂಬ ತನಿಖೆ ನಡೆದಿದ್ದರೆ ಸತ್ಯಾಂಶ ಹೊರ ಬರುತ್ತಿತ್ತು. ಜಾಮೀನು ಸಿಗುತ್ತದೆ ಎಂಬ ಕಾರಣಕ್ಕೆ ಆರೋಪಿಗಳೂ ತಲೆ ಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಅಮಲು ಪದಾರ್ಥ ಸಾಗಾಟ, ಪೂರೈಕೆ ಎಗ್ಗಿಲ್ಲದೆ ಸಾಗಿದೆ. ಹದಿಹರೆಯದವರು ಬಲಿಯಾಗುತ್ತಿದ್ದಾರೆ. ಇಷ್ಟಾದರೂ ಪೊಲೀಸ್‌ ಇಲಾಖೆ ಮಾತ್ರ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪೋಷಕರು ಸೇರಿದಂತೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸ್ಥಾನದಲ್ಲಿಯೇ ವಿಲೇ!
ನಗರದ ಮುಖ್ಯ ಬಸ್‌ ನಿಲ್ದಾಣದ ಬಳಿ, ನೆಲ್ಲಿಕಟ್ಟೆ ಹಳೆ ಶಾಲಾ ಕಟ್ಟಡದ ಸಮೀಪ ಗಾಂಜಾ ವ್ಯವಹಾರ ನಡೆಸಿ ವಿದ್ಯಾರ್ಥಿಗಳನ್ನು ಖೆಡ್ಡಾಕ್ಕೆ ಬೀಳಿಸಲಾಗುತ್ತಿದೆ ಎನ್ನುವ ಆತಂಕಕಾರಿ ವಿಚಾರಗಳು ಹರಿದಾಡುತ್ತಿವೆ. ಅನುಮಾನಕ್ಕೆ ಸಾಕ್ಷಿಯೆಂಬಂತೆ ನೆಲ್ಲಿಕಟ್ಟೆಯಲ್ಲಿ ಕುಸಿಯುವ ಹಂತಕ್ಕೆ ತಲುಪಿರುವ ಹಳೆ ಕಟ್ಟಡದೊಳಗೆ ಅಮಲು ಪದಾರ್ಥ, ಸಿಗರೇಟು ತುಂಡುಗಳು ಕಂಡುಬಂದಿವೆ. ಈ ಕಟ್ಟಡದ ಸುತ್ತ ರಾತ್ರಿ ವೇಳೆ ಪೊಲೀಸ್‌ ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದರು. ನಿರ್ಜನವಾಗಿರುವ ಈ ಕಟ್ಟಡದೊಳಗೆ ಅಕ್ರಮ ವ್ಯವಹಾರ ನಡೆಯುವ ಬಗ್ಗೆ ಈ ಹಿಂದೆಯೇ ಅನುಮಾನ ವ್ಯಕ್ತವಾಗಿತ್ತು.

ವಿದ್ಯಾರ್ಥಿಗಳೇ ಗುರಿ
ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮಲು ಪದಾರ್ಥ ಪೂರೈಸಲಾಗುತ್ತಿದೆ. ವಾರದ ನಿರ್ದಿಷ್ಟ ದಿನ, ಸಮಯದಲ್ಲಿ ಕಾಲೇಜು ಪರಿಸರ, ಪಿ.ಜಿ. ಮೊದಲಾದೆಡೆ ಮಾರಾಟ ಮಾಡಲಾಗುತ್ತಿದೆ. ನಗರದಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಕೆಲವು ಪೇಯಿಂಗ್‌ ಗೆಸ್ಟ್‌ಗಳ ಬಳಿ ಡ್ರಗ್ಸ್‌ ಮಾರಾಟ ಸುರಕ್ಷಿತವೆನಿಸಿದೆ. ಕಾಲೇಜು ಪರಿಸರ, ಪಿ.ಜಿ.ಗಳ ಬಳಿ ಮಾರಾಟ ಮಾಡಿದರೆ, ಅದು ಪೊಲೀಸರ ಗಮನಕ್ಕೂ ಬರುವುದಿಲ್ಲ ಅನ್ನುವುದು ಡ್ರಗ್ಸ್‌ ಮಾರಾಟದಾರರಿಗೂ ಚೆನ್ನಾಗಿ ಅರಿವಿದೆ.

ಹೊರರಾಜ್ಯದಿಂದ ಪೂರೈಕೆ?
ಅಮಲು ಪದಾರ್ಥದ ಬಹು ದೊಡ್ಡ ಜಾಲವೇ ಹಬ್ಬಿದೆ. ಕೇರಳ- ಪುತ್ತೂರು ಕೇಂದ್ರೀಕೃತವಾಗಿ ಸಾಗಾಟ ನಡೆಸುತ್ತಿರುವ ಅನುಮಾನ ಮೂಡಿದೆ. ದರ್ಬೆ, ಕೂರ್ನಡ್ಕ, ನೆಲ್ಲಿಕಟ್ಟೆ, ಬೊಳುವಾರು, ನೆಹರೂನಗರ ಸೇರಿದಂತೆ ಆಯ್ದ ಭಾಗವನ್ನು ಗುರಿಯಾಗಿಸಿ ಡ್ರಗ್ಸ್‌ ಪೂರೈಸಲಾಗುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.