ಕ್ರೀಡೆಯಿಂದ ಆರೋಗ್ಯ ವೃದ್ಧಿ, ಜಡತ್ವ ನಿವಾರಣೆ: ಕೃಷ್ಣ ಭಟ್
Team Udayavani, Apr 11, 2017, 3:34 PM IST
ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೋಳುಕಟ್ಟೆಯಲ್ಲಿ ನಿರ್ಮಿಸಿದ ಫುಟ್ಬಾಲ್ ಗೋಲ್ ಪೋಸ್ಟ್‌ನ್ನು ಬದಿಯಡ್ಕ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಮಕ್ಕಳ ಬೌದ್ಧಿಕ ಹಾಗೂ ಮಾನಸಿಕ ವಿಕಾಸಕ್ಕೆ ಕ್ರೀಡೆಯೂ ಕಾರಣವಾಗಿದೆ. ಮನುಷ್ಯನಿಗೆ ವ್ಯಾಯಾಮ ಅತೀ ಅಗತ್ಯ. ಕ್ರೀಡೆಯಿಂದ ಆರೋಗ್ಯ ವೃದ್ಧಿ ಹಾಗೂ ಜಡತ್ವ ನಿವಾರಣೆಯಾಗುತ್ತದೆ ಎಂದರು.
ಗ್ರಾಮಪಂಚಾಯತ್ ಸದಸ್ಯೆ ಶಾಂತಾ ಬಾಬು ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಗಾಗಿ ಬದಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ಯುವ ಕ್ರೀಡಾಪಟುಗಳ ತರಬೇತಿಗೆ ಕೇರಳ ರಾಜ್ಯ ಯುವಜನ ಕ್ಷೇಮ ಬೋರ್ಡ್‌ನ ಬದಿಯಡ್ಕ ಪಂಚಾಯತ್ ಯೂತ್ ಸೆಂಟರಿನ ಬದಿಯಡ್ಕ ನ್ಪೋರ್ಟ್ಸ್ ಅಕಾಡೆಮಿಯ ಲಾಂಛನವನ್ನು ಸ್ಥಾಯೀ ಸಮಿತಿ ಅಧ್ಯಕ್ಷ ಅನ್ವರ್ ಓಝೋನ್ ಬಿಡುಗಡೆಗೊಳಿಸಿ ಮಾತನಾಡಿ, ಜಾತಿ ಮತ ಭೇದವಿಲ್ಲದೆ ಸ್ಪರ್ಧಾತ್ಮಕವಾಗಿ ನಡೆಯುವ ಕ್ರೀಡೆಗೆ ಪ್ರೋತ್ಸಾಹವನ್ನು ಮನಗಂಡು ಗ್ರಾಮಪಂಚಾಯತ್ ನೀಡಿದ ಈ ಗೋಲ್ ಬಾಕ್ಸ್ ಕ್ರೀಡಾ ವಿಕಾಸಕ್ಕೆ ನಾಂದಿಯಾಗಲಿ ಎಂದರು. ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ್ ಮಾನ್ಯ, ಪಂ. ಸದಸ್ಯ ಬಾಲಕೃಷ್ಣ ಶೆಟ್ಟಿ, ಹನೀಫ್, ಕೆ.ಕೆ.ಇಬ್ರಾಹಿಂ, ಸಕೀರ್ ಮೊದಲಾದವರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.