“ಉತ್ತಮ ಚಿಕಿತ್ಸೆ ಸಿಗದಿದ್ದರೆ ಸರ್ಕಾರಿ ಆಸ್ಪತ್ರೆ ಮುಚ್ಚಿಸಲು ಸಿದ್ಧ

Team Udayavani, Apr 12, 2017, 11:22 AM IST

170411kpn70.jpg

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸೆಯ ಗುಣಮಟ್ಟ ಹಾಗೂ ಸೇವೆಗಳ ಬಗ್ಗೆ ಸಮಾಜದಲ್ಲಿ ನಕಾರಾತ್ಮಕ ಧೋರಣೆ ಬೆಳೆದು ಬಿಟ್ಟಿದೆ.ಒಂದು ವೇಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಿದರೆ ಅವುಗಳನ್ನು ಮುಚ್ಚಿಸಲು ಸಿದಟಛಿ ಎಂದು ಆರೋಗ್ಯ ಸಚಿವ ರಮೇಶ್‌ಕುಮಾರ್‌ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ “ಕರ್ನಾಟಕ ಹೆಲ್ತ್‌ಕೇರ್‌ ಸಮ್ಮಿಟ್‌-2017′ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಬರುವ ಕಾಯಿಲೆಗಳಿಗೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡುವ
ಚಿಕಿತ್ಸಾ ವಿಧಾನ ಮತ್ತು ಔಷಧಿಗಳು ಒಂದೇ ಆಗಿರುತ್ತದೆ. ಆದರೂ, ಖಾಸಗಿ ಆಸ್ಪತ್ರೆಗಳ ಬಗ್ಗೆಯೇ ಜನರಲ್ಲಿ ಹೆಚ್ಚು ವಿಶ್ವಾಸ. ಹಾಗಾದರೆ, ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾದವರಿಗೆ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ವಾ? ಜನರ ಪ್ರಾಣ ಉಳಿಸುವ ಕೆಲಸ ಸರ್ಕಾರಿ ಆಸ್ಪತ್ರೆಗಳಿಂದ ಆಗುತ್ತಿಲ್ವಾ ಎಂದು ಪ್ರಶ್ನಿಸಿದರು.

“ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಮಾಜದಲ್ಲಿ ನಕರಾತ್ಮಕ ಧೋರಣೆ ಬೆಳೆದು ಬಿಟ್ಟಿದೆ. ಆ ರೀತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಸಾಬೀತಾದರೆ, ಅಂತಹ ಆಸ್ಪತ್ರೆಯನ್ನು ಮುಚ್ಚಿಸಲು ನಾನು ಸಿದ್ಧ’ ಎಂದರು. ಆರೋಗ್ಯ ಕ್ಷೇತ್ರವನ್ನು ಸೇವಾ ವಲಯದಬದಲಿಗೆ ಉದ್ಯಮವನ್ನಾಗಿ ನೋಡಿದರೆ, ಕೆಳಹಂತದ ಜನರಿಗೆ ಆರೋಗ್ಯ ಸೇವೆ ನೀಡುವುದು ಕಷ್ಟ.ಕಾರ್ಪೋರೇಟ್‌ ಹಾಗೂ ಖಾಸಗಿ ಸಂಸ್ಥೆ ಯವರು ಆರೋಗ್ಯ ಕ್ಷೇತ್ರವನ್ನು ಸೇವಾ ವಲಯ ಎಂದು ಅಥವಾ ಉದ್ಯಮ ಎಂದು ಭಾವಿಸಿದ್ದಾರೆ ಅನ್ನುವುದು ಸ್ಪಷ್ಟವಾಗ ಬೇಕು.

ಒಂದೊಮ್ಮೆ ಆರೋಗ್ಯ ಕ್ಷೇತ್ರವನ್ನು ಉದ್ಯಮ ವಲಯ ಎಂದು ಭಾವಿಸಿ ಬಿಟ್ಟರೆ ಸಮಾಜದಲ್ಲಿನ ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವುದು ಕಷ್ಟವಾಗುತ್ತದೆ. ಆರೋಗ್ಯ ವಲಯ ಎಂದಿಗೂ ವ್ಯಾಪಾರ ಆಗಬಾರದುಎಂದರು.ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ನಿರ್ದೇಶಕ ಡಾ.ಕೆ.ರಾಜೇಶ್ವರ್‌ ರಾವ್‌, ಕೇರಳ ರಾಜ್ಯದ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಟೀಚರ್‌, ನ್ಯೂ ಇಂಡಿಯಾ ಇನ್ಸೂರೆನ್ಸ್‌ ಕಂಪನಿಯ ನಿರ್ದೇಶಕಿ ಡಿ.ಎಲ್‌. ಅಲವೇಲು, ಡಾ.ರತನ್‌ ಕೇಲ್ಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.