ದಿಡ್ಡಳ್ಳಿ ಆದಿವಾಸಿಗಳ ಮನೆ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿ ಬಂಧನ
Team Udayavani, Apr 12, 2017, 11:45 AM IST
ಮಡಿಕೇರಿ: ನೆಲೆಗಾಗಿ ಬೆತ್ತಲೆ ಪ್ರತಿಭಟನೆ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕೊಡಗಿನ ದಿಡ್ಡಳ್ಳಿ ಆದಿವಾಸಿಗಳ ನಿವಾಸಗಳ ಮೇಲೆ ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಗುಂಡಿನ ದಾಳಿ ನಡೆಸಿ ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸೋಮವಾರ ತಡರಾತ್ರಿ ದಿಡ್ಡಳ್ಳಿ ಆದಿವಾಸಿಗಳ ನಿವಾಸಗಳ ಮೇಲೆ ದುಷ್ಕರ್ಮಿಗಳು ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದರು. ಸ್ಥಳದಲ್ಲಿ ಸಜೀವ ಗುಂಡು, 5 ವಿವಾದಾತ್ಮಕ ಕೈ ಬರಹಗಳ ಪತ್ರ ದೊರಕಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿದ್ದವು.
ಬಂದೂಕು ದುರ್ಬಳಕೆ ಆರೋಪದಡಿ ಕೊಡಗಿನ ಸಿದ್ಧಾಪುರ ಠಾಣಾ ಪೊಲೀಸರು ಇದು ನಕ್ಸಲೀಯರ ಕೃತ್ಯ ಇರಬೇಕೆಂದು ಶಂಕಿಸಿದ್ದು, ಸ್ವಯಂಪ್ರೇರಿತವಾಗಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 3 ಹಾಗೂ 25 ಎ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ದಿಡ್ಡಳ್ಳಿ ಆದಿವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿರುವುದಾಗಿ ಮಂಗಳವಾರ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದರು.
ಆರೋಪಿ ಬಂಧನ:
ದಿಡ್ಡಳ್ಳಿಯ ಆದಿವಾಸಿಗಳ ಮನೆಗಳ ಮೇಲೆ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಿದ್ಧಾಪುರ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕುಡಿದ ಆಮಲಿನಲ್ಲಿ ದಿಡ್ಡಳ್ಳಿ ನಿವಾಸಿಗಳು ಹಣ ಪಡೆದು ಕಾಫಿ ತೋಟದ ಕೆಲಸಕ್ಕೆ ಬರಲಿಲ್ಲ ಎಂಬ ಆಕ್ರೋಶದಿಂದ ಪೂಣಚ್ಚ ಎಂಬಾತ ಗುಂಡು ಹಾರಿಸಿದ್ದ, ಬಳಿಕ ಪ್ರಕರಣ ತಿರುಚಲು ವಿವಾದಾತ್ಮಕ ಬರಹಗಳುಳ್ಳ ಚೀಟಿಯನ್ನು ಎಸೆದಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಪೂಣಚ್ಚನಿಂದ ಬಂದೂಕು, ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್ ರಾಣ ಬಂಧನ
Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.