ನಾಳೆ ಮತ ಎಣಿಕೆ: ಅಭ್ಯರ್ಥಿಗಳಲ್ಲಿ ಢವ ಢವ


Team Udayavani, Apr 12, 2017, 1:04 PM IST

mys2.jpg

ಮೈಸೂರು: ಭಾರೀ ಜಿದ್ದಾಜಿದ್ದಿನಿಂದ ಕೂಡಿದ ನಂಜನಗೂಡು ಉಪ ಚುನಾವಣೆಯ ಮತ ಎಣಿಕೆಗೆ ಇನ್ನೊಂದೇ ದಿನ ಬಾಕಿ ಇದೆ. ಗುರುವಾರ ಬೆಳಗ್ಗೆ 8 ಗಂಟೆಯಿಂದ ನಂಜನಗೂಡಿನ ಜೆಎಸ್‌ಎಸ್‌ ಪ್ರಥಮದರ್ಜೆ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ಮತಯಂತ್ರ ಬಳಸಿರುವುದರಿಂದ ಮಧ್ಯಾಹ್ನದ ವೇಳೆಗೆ ಫ‌ಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಉಪ ಚುನಾವಣೆಯ ಮತದಾನ ಹಾಗೂ ಮತ ಎಣಿಕೆಗೆ ಮಧ್ಯೆ ಮೂರು ದಿನಗಳ ಬಿಡುವು ದೊರೆತಿರುವುದರಿಂದ ಬೆಟ್ಟಿಂಗ್‌ ದಂಧೆಯ ಜತೆಗೆ ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದ ಬಗ್ಗೆ ಯಾವ ಮುಖಂಡ ಎಷ್ಟು ನುಂಗಿದ, ಮತದಾರರಿಗೆ ಯಾವ ಪಕ್ಷ ಎಷ್ಟು ಹಣ ನೀಡಿತು ಎಂಬ ಚರ್ಚೆಗಳು ನಂಜನಗೂಡಿನ ಹಳ್ಳಿಗಳಲ್ಲಿ ಸಾಂಗವಾಗಿ ನಡೆಯುತ್ತಿವೆ. ಜತೆಗೆ ಚುನಾವಣಾ ಫ‌ಲಿತಾಂಶದ ಬಗ್ಗೆ ರಾಜಕೀಯ ಆಸಕ್ತರುಗಳು ತಮ್ಮದೇ ಆದ ಲೆಕ್ಕಾಚಾರಗಳಲ್ಲಿ ತೊಡಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ಚರ್ಚೆಗಳು ನಡೆದಿವೆ. ಕಾಂಗ್ರೆಸ್‌ ಪಕ್ಷದ ಹೆಸರಲ್ಲಿ ಗುಪ್ತಚರ ವರದಿ ಎಂದು ನಂಜನಗೂಡು- ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪೂರ್ವದಲ್ಲೇ ಮತದಾನದ ಗ್ರಾಫಿಕ್ಸ್‌ ಹರಿಬಿಡಲಾಗಿತ್ತು.

ಅದರಂತೆ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಶೇ.54, ಬಿಜೆಪಿ ಶೇ.40 ಹಾಗೂ ಇತರರು ಶೇ.6ರಷ್ಟು ಮತಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ಶೇ.51, ಬಿಜೆಪಿ ಶೇ.41 ಹಾಗೂ ಇತರರು ಶೇ.8ರಷ್ಟು ಮತಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಮತದಾನದ ನಂತರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಪಾಳಯ ನಂಜನಗೂಡು ಕ್ಷೇತ್ರದಲ್ಲಿ ನಡೆದಿರುವ ಒಟ್ಟಾರೆ ಮತದಾನದ ಪ್ರಮಾಣವನ್ನು ಜಾತೀವಾರು ಲೆಕ್ಕಾಚಾರದಿಂದ ಅಳೆದು ಏಳು ಸಾವಿರ ಮತಗಳ ಅಂತರದಿಂದ ಗೆಲುವು ನಮ್ಮದೇ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡು ಬೀಗುತ್ತಿದೆ.

ಅವರ ಲೆಕ್ಕಾಚಾರದ ಪ್ರಕಾರ ಒಟ್ಟು ಚಲಾಯಿತ ಮತಗಳು 156531. ಹೀಗಾಗಿ ಗೆಲುವಿಗೆ ಬೇಕಿರುವುದು 78266 ಮತಗಳು. ಜಾತೀವಾರು ಮತದಾನದ ಪ್ರಕಾರ ಲಿಂಗಾಯಿತರು (ಶೇ.86), ಎಸ್‌.ಸಿ( ಶೇ.84), ಎಸ್‌ಟಿ(ಶೇ.80), ಉಪ್ಪಾರ (ಶೇ.79) ಹಾಗೂ ಇತರೆ ಶೇ.52 ಮತದಾನವಾಗಿದೆ. ಲಿಂಗಾಯಿತರಲ್ಲಿ 48160 ಮಂದಿ ಮತದಾನ ಮಾಡಿದ್ದು ಈ ಪೈಕಿ ಶೇ.30ರಷ್ಟು (14448 ಮತಗಳು) ಕಾಂಗ್ರೆಸ್‌ ಪಾಲಾಗಲಿದೆ. ಲಿಂಗಾಯಿತರ ಶೇ.70ರಷ್ಟು ಮತಗಳನ್ನು (33712 ಮತ) ಬಿಜೆಪಿ ನಿರೀಕ್ಷಿಸಿದೆ. ಪ. ಜಾತಿಯ 42000 ಮತದಾರರು ಮತದಾನ ಮಾಡಿದ್ದು, ಇದರಲ್ಲಿ 12600 (ಶೇ.30) ಕಾಂಗ್ರೆಸ್‌ ಪಾಲಾಗಿದ್ದರೆ, ಬಿಜೆಪಿ 29400 (ಶೇ.70) ಮತಗಳನ್ನು ನಿರೀಕ್ಷಿಸಿದೆ.

ಪರಿಶಿಷ್ಟ ಪಂಗಡದ 21600 ಮಂದಿ ಮತದಾನ ಮಾಡಿದ್ದು, ಇದರಲ್ಲಿ ಕಾಂಗ್ರೆಸ್‌ 11880 (ಶೇ.65), ಬಿಜೆಪಿ 9720 (ಶೇ.45) ಮತಗಳನ್ನು ನಿರೀಕ್ಷಿಸಿದೆ. ಇನ್ನು ಉಪ್ಪಾರ ಸಮುದಾಯದ 18170 ಮಂದಿ ಮತದಾನ ಮಾಡಿದ್ದು, ಇದರಲ್ಲಿ 12340 (ಶೇ.70) ಕಾಂಗ್ರೆಸ್‌ ಪಾಲಾಗಿದ್ದರೆ, 5451 (ಶೇ.30) ಮತಗಳನ್ನು ಬಿಜೆಪಿ ನಿರೀಕ್ಷಿಸಿದೆ. ಇತರೆ ಸಮುದಾಯಗಳವರ 28600 ಮತದಾನದ ಪೈಕಿ ಕಾಂಗ್ರೆಸ್‌ 24310 (ಶೇ.85) ಹಾಗೂ ಬಿಜೆಪಿ 4290 (ಶೇ.15) ಮತಗಳನ್ನು ನಿರೀಕ್ಷಿಸಿದೆ. ಈ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್‌ 75967 ಮತಗಳನ್ನು ನಿರೀಕ್ಷಿಸಿದ್ದರೆ, ಬಿಜೆಪಿ 82573 ಮತಗಳನ್ನು ನಿರೀಕ್ಷಿಸಿದೆ ಎಂದು ಹೇಳಲಾಗಿದೆ.

3 ಪ್ರತ್ಯೇಕ ವರದಿ: ಜತೆಗೆ ಉಪ ಚುನಾವಣೆ ಫ‌ಲಿತಾಂಶದ ಬಗ್ಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಮೂರು ಪ್ರತ್ಯೇಕ ವರದಿಗಳನ್ನು ಪಡೆದಿವೆ ಎಂದು ಹೇಳಲಾಗುತ್ತಿದೆ.ರಾಜ್ಯ ಗುಪ್ತಚರ ಇಲಾಖೆ ವರದಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ – ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ಆದರೆ, ಅಂತಿಮವಾಗಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಕೇಂದ್ರ ಗುಪ್ತಚರ ಸಂಸ್ಥೆ ಹಾಗೂ ಬಿಜೆಪಿಯ ಬೂತ್‌ ಮಟ್ಟದ ಏಜೆಂಟರ ವರದಿಯ ಪ್ರಕಾರ ನಂಜನಗೂಡು-ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಹೇಳಲಾಗಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಲೆಕ್ಕಾಚಾರಗಳು ಏನೇ ಇದ್ದರೂ ಅಧಿಕೃತ ಫ‌ಲಿತಾಂಶಕ್ಕೆ ಗುರುವಾರದವರೆಗೆ ಕಾಯಲೇಬೇಕಿದೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.