ಹಳ್ಳಿಗಳಲ್ಲಿ ಕುಡಿವ ನೀರಿಗಾಗಿ ಪರದಾಟ


Team Udayavani, Apr 12, 2017, 1:28 PM IST

dvg1.jpg

ದಾವಣಗೆರೆ: ರಣ ಬಿಸಿಲು…ಅಂರ್ತಗತವಾಗುತ್ತಿರುವ ಅಂತರ್ಜಲ… ಮತ್ತೆ ಬತ್ತಿದ ಜೀವನದಿ, ಕಾಣೆಯಾದ ಕೆರೆ ಕುಂಟೆಗಳಲ್ಲಿನ ನೀರು.. ಈ ಎಲ್ಲದರ ಪರಿಣಾಮ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ 308ಕ್ಕೂ ಹೆಚ್ಚು ಗ್ರಾಮಗಳಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. 

ಸತತ ಎರಡು ವರ್ಷದ ಮಳೆ ಕೊರತೆ ಜಿಲ್ಲೆಯ ಜನರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ. ನೀರನ್ನು ಈಗ ನಿಜಕ್ಕೂ ಅಮೃತದಂತೆ ಬಳಸುವಂತಾಗುತ್ತಿದೆ. ಟ್ಯಾಂಕರ್‌, ನಲ್ಲಿಯಲ್ಲಿ ನೀರು ಬರುವುದನ್ನೇ ಕಾಯುವುದು, ನೀರು ಬಿಟ್ಟಾಗ ಇದ್ದಬದ್ದ ಪಾತ್ರೆ, ಪಗಡೆ ಎಲ್ಲಾದರಲ್ಲೂ ತುಂಬಿಟ್ಟು ಕೊಂಡು ಮತ್ತೆ ನೀರು ಸಿಗುವ ತನಕ ಅದನ್ನೇ ಎಚ್ಚರಿಕೆಯಿಂದ ಬಳಸಬೇಕಾಗಿದೆ.

ಇದೇ ಸ್ಥಿತಿ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಬಿಗಡಾಯಿಸಲಿದೆ ಎಂಬ ಆತಂಕ ಜನರಲ್ಲಿದೆ. ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಟ್ಯಾಂಕರ್‌, ಖಾಸಗಿ ಬೋರ್‌ವೆಲ್‌ ಮೂಲಕ ನೀರು ಪೂರೈಸುತ್ತಿರುವುದು ಭೀಮನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ…ಎನ್ನುವಂತೆ ಆಗುತ್ತಿದೆ.

ಟ್ಯಾಂಕರ್‌, ಖಾಸಗಿ ಕೊಳವೆಬಾವಿ ಬಾಡಿಗೆ ಪಡೆದು ಸರಬರಾಜು ಮಾಡುತ್ತಿರುವ ನೀರು ತಾತ್ಕಾಲಿಕ ಕ್ರಮವಷ್ಟೆ. ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಅದನ್ನು ಮೀರಿ ಮತ್ತೇನನ್ನೂ ಮಾಡುವ ಸ್ಥಿತಿ ಇಲ್ಲ. ಏಕೆಂದರೆ ಸಾವಿರ ಅಡಿ  ಆಳ ಕೊರೆದರೂ ಸಿಗುತ್ತಿರುವುದು ಧೂಳು ಮಾತ್ರ. ಮುಕ್ಕಾಲು ಇಲ್ಲವೆ ಒಂದಿಂಚು ನೀರು ಸಿಕ್ಕರೂ ಕೆಲವೇ ದಿನಗಳಲ್ಲಿ ಆ ನೀರು ಮಾಯ. ಹಾಗಾಗಿ ಸದ್ಯಕ್ಕಂತೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಅಕ್ಷರಶಃ ಮರೀಚಿಕೆ. 

ನಗರ ಪ್ರದೇಶದಲ್ಲಿ ವಿದ್ಯುತ್‌ ಕಡಿತದ ಸಮಸ್ಯೆ ಸದ್ಯ ಅಷ್ಟಾಗಿ ಇಲ್ಲ. ಆದರೆ, ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಾಟ ಕುಡಿಯುವ ನೀರಿನ ಮೇಲೆ ನೇರ ಪರಿಣಾಮ ಉಂಟು ಮಾಡುತ್ತಿದೆ. ದ್ವಿತೀಯ ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ನಂತರ ನಗರ ಪ್ರದೇಶದಲ್ಲಿ ಅನಿಯಮಿತ ವಿದ್ಯುತ್‌ ಕಡಿತ ಪ್ರಾರಂಭವಾದಲ್ಲಿ ನೀರಿನ ಸಮಸ್ಯೆಯೂ ಹೆಚ್ಚಾಗಲಿದೆ. ಮುಂಬರುವ ದಿನಗಳಲ್ಲಿ ವಿದ್ಯುತ್‌ ಲಭ್ಯತೆಯೇ ಆಧಾರದಲ್ಲಿ ನೀರಿನ ಸಮಸ್ಯೆ ನಿಂತಿದೆ.

ಟ್ಯಾಂಕರ್‌, ಖಾಸಗಿ ಬೋರು: ಬೇಸಿಗೆ ಕಾಲ  ಮುಂದುವರೆಯುತ್ತಿದ್ದಂತೆ ನೀರಿನ ಸಮಸ್ಯೆಯೂ ತೀವ್ರವಾಗುತ್ತಿದೆ. ಜಿಲ್ಲೆಯ 28 ಗ್ರಾಮಗಳಿಗೆ ಟ್ಯಾಂಕರ್‌ನಲ್ಲಿ, 50 ಗ್ರಾಮದಲ್ಲಿ ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಪಡೆದು, ಪೂರೈಕೆ ಮಾಡಲಾಗುತ್ತಿದೆ. ದಾವಣಗೆರೆ ತಾಲೂಕಿನ ಕುರುಡಿ ಮತ್ತು ಪವಾಡ ರಂಗವ್ವನಹಳ್ಳಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಆಲೂರುಹಟ್ಟಿ ಗ್ರಾಮದಲ್ಲಿ ಖಾಸಗಿ ಕೊಳವೆಬಾವಿಯನ್ನು ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಸಲಾಗುತ್ತಿದೆ. ಸದಾ ಬರಪೀಡಿತ ಪ್ರದೇಶ ಜಗಳೂರು ತಾಲೂಕಿನ ಬಿಳಿಚೋಡು, ಉಜ್ಜಪ್ಪ ವಡೇರಹಳ್ಳಿ, ಭೈರನಾಯಕನಹಳ್ಳಿ, ಚಿಕ್ಕಮ್ಮನಹಳ್ಳಿ, ಕೆಳಗೋಟೆ ಕಾನನಕಟ್ಟೆ ಒಳಗೊಂಡಂತೆ 19 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಬಿದರಕೆರೆ, ಚಿಕ್ಕಬನ್ನಿಹಟ್ಟಿ, ಗೊಲ್ಲರಹಟ್ಟಿ, ಗಡಿಮಾಕುಂಟೆ, ಅಸಗೋಡು, ಬೆಣ್ಣೆಹಳ್ಳಿ ಒಳಗೊಂಡಂತೆ 19 ಗ್ರಾಮದಲ್ಲಿ ಖಾಸಗಿ ಕೊಳವೆಬಾವಿ ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಸಲಾಗುತ್ತಿದೆ.

ಶಾಶ್ವತ ಬರಪೀಡಿತ ಹಣೆಪಟ್ಟಿ ಹೊತ್ತಿರುವ ಹರಪನಹಳ್ಳಿ ತಾಲೂಕಿನ ಆಲದಹಳ್ಳಿ, ಕೊರಚರಹಟ್ಟಿ, ಕೆಂಪಾಪುರ ಒಳಗೊಂಡಂತೆ 6 ಗ್ರಾಮಗಳಲ್ಲಿ ಟ್ಯಾಂಕರ್‌ನಲ್ಲಿ ನೀರು ಕೊಡಲಾಗುತ್ತಿದೆ. ವ್ಯಾಸನತಾಂಡ, ಅರಸನಾಳು, ಚಿರಸ್ತಿಹಳ್ಳಿ, ಹಾರಕನಾಳ, ಭೈರಾಪುರ, ಗೌರಿಪುರ, ಹಗರಿಗಜಾಪುರ ಸೇರಿದಂತೆ 22 ಗ್ರಾಮದಲ್ಲಿ ಖಾಸಗಿ ಬೋರ್‌ವೆಲ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 

 *ರಾ.ರವಿಬಾಬು

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.