ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಒಗ್ಗಟ್ಟು ಅಗತ್ಯ


Team Udayavani, Apr 12, 2017, 3:14 PM IST

hub5.jpg

ಧಾರವಾಡ: ಧಾರ್ಮಿಕ ತತ್ವ-ಸಿದ್ಧಾಂತದಡಿ ಜನಮನಕ್ಕೆ ಉತ್ತಮ ಸಂದೇಶ ನೀಡುವ ಸಂಘ-ಸಂಸ್ಥೆಗಳು ಹಾಗೂ ಚಿಂತನ ಮಂಥನದ ಮಂಟಪಗಳು ನಾಡಿನಾದ್ಯಂತ ನಿರ್ಮಾಣವಾದರೆ ಈ ನಾಡು ಕಲ್ಯಾಣ ರಾಜ್ಯ ಆಗುತ್ತದೆ ಎಂದು ಬಸವಧರ್ಮ ಪೀಠದ ಶ್ರೀ ಗಂಗಾಮಾತಾಜಿ ಹೇಳಿದರು. 

ಗುಲಗಂಜಿಕೊಪ್ಪದ ಸೋನಾಪುರದಲ್ಲಿ ಬಸವಧರ್ಮ ಅಭಿವೃದ್ದಿ ಸಂಸ್ಥೆ ವತಿಯಿಂದ ನಿರ್ಮಿಸಿದ ಬಸವ ಮಂಟಪದ ಉದ್ಘಾಟನೆ ಹಾಗೂ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಧಾರವಾಡದಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಈ ಬಸವ ಮಂಟಪ ರಚನೆಯಾಗಿದ್ದು, ಇಲ್ಲಿ ಆಧ್ಯಾತ್ಮಿಕ ಚಿಂತನೆಗಳು ನಿರಂತರವಾಗಿ ನಡೆಯಬೇಕಿದೆ ಎಂದರು. 

ಜನರು ಸತ್ಯ ಶುದ್ಧ ಕಾಯಕ ಮಾಡಿ ಸಮಾಜ ಸೇವೆ ಮಾಡುವುದನ್ನು ರೂಢಿಸಿಕೊಂಡಾಗ ಇಂತಹ ಚಿಂತನೆಗಳು ಹೊರ ಬಂದು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ. ಸದ್ವಿಚಾರ ಚಿಂತನೆಗಳು, ಉಪನ್ಯಾಸಗಳು ಮಂದಿರ, ಮಠ, ಮಂಟಪಗಳಲ್ಲಿ ನಡೆಯುವುದರಿಂದ ಮಕ್ಕಳು ಮುಂದಿನ ಸತ್ಪಜೆಗಳಾಗಲು ಸಾಧ್ಯ ಎಂದರು. 

ಬಸವಾದಿ ಶರಣರ ವಚನ ಚಿಂತನೆ, ಸಂಗೀತ ಕಾರ್ಯಕ್ರಮ ಹಾಗೂ ವಚನ ನೃತ್ಯ ಸೇರಿದಂತೆ ಹಲವಾರು ಧಾರ್ಮಿಕ ಸಮಾರಂಭ ನೆರವೇರಿಸುವ ಉದ್ದೇಶದಿಂದ ಮಂಟಪ ರಚನೆ ಮಾಡಲಾಗಿದೆ. ಜನಮನದಲ್ಲಿ ಆಳವಾದ ಅಧ್ಯಯನ ಮತ್ತು ಮೌಲ್ವಿಕ ತತ್ವಗಳು ಬೇರೂರಬೇಕಿದ್ದು ಸಮಯಾವಕಾಶ ಮಾಡಿಕೊಂಡು ಪ್ರಾರ್ಥನೆ ಹಾಗೂ ಚಿಂತನಾ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು ಎಂದರು. 

ಕುಂಬಳಗೋಡಿನ ಬಸವ ಗಂಗೋತ್ರಿಯ ಶ್ರೀ ಚನ್ನಬಸವಾನಂದ ಸ್ವಾಮೀಜಿ ಅವರು ವಚನ ತಾಂಬೂಲ ನೆನಪಿನ ಕಾಣಿಕೆ ಬಿಡುಗಡೆಗೊಳಿಸಿದರು. ಅಕ್ಕಮಹಾದೇವಿ ಅನುಭಾವ ಪೀಠದ ಶ್ರೀ ಸತ್ಯಾದೇವಿ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ನೀಲಾಂಬಿಕೆ ಇಂಗಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸೂರ್ಯಕಾಂತ ಶೀಲವಂತ ಷಟಸ್ಥಳ ಧ್ವಜಾರೋಹಣ ನೆರವೇರಿಸಿದರು.

ಲಿಂಗಾಯತ ಧರ್ಮ ಮಹಾಸಭಾ ಅಧ್ಯಕ್ಷ ಕೆ. ಬಸವರಾಜಪ್ಪ, ಕಗ್ಗೊàಡ ರಾಷ್ಟ್ರೀಯ ಬಸವದಳ ಅಧ್ಯಕ್ಷ ಬಸವರಾಜ ಕೊಂಡಗೋಳಿ, ಅಶೋಕ ಶೀಲವಂತ, ಶಿವಾನಂದ ಲೋಲೆನವರ, ಮಂಜುನಾಥ ಚೋಳಪ್ಪನವರ ಇದ್ದರು. ದೇವೆಂದ್ರಪ್ಪ ಇಂಗಳಹಳ್ಳಿ ನಿರೂಪಿಸಿದರು. ಮಂಜುನಾಥ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಮಹಾದೇವ ನ್ಯಾಮತಿ ಸ್ವಾಗತಿಸಿದರು. ಶಿವಾನಂದ ಅಬಲೂರ ವಂದಿಸಿದರು.  

ಟಾಪ್ ನ್ಯೂಸ್

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.