ಹೆಸ್ಕಾಂ ಕುಂದುಕೊರತೆ ಸಭೆ


Team Udayavani, Apr 12, 2017, 3:19 PM IST

hub6.jpg

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿ ನಗರ ವಿಭಾಗದ ವ್ಯಾಪ್ತಿಯ ಪಿ.ಬಿ. ರಸ್ತೆ ನ್ಯೂ ಇಂಗ್ಲಿಷ್‌ ಸ್ಕೂಲ್‌ ಹಿಂಭಾಗದ ನಗರ ಉಪ ವಿಭಾಗ ನಂ.2ರಲ್ಲಿ ಮಂಗಳವಾರ ನಡೆದ ಗ್ರಾಹಕರ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಐವರು ಗ್ರಾಹಕರು ವಿದ್ಯುತ್‌ ಸಮಸ್ಯೆ ಹಾಗೂ ಬಿಲ್‌ ಗಳಿಗೆ ಸಂಬಂಧಿಸಿ ಪರಿಹಾರ ಒದಗಿಸಬೇಕೆಂದು ಕೋರಿ ಮನವಿ ಸಲ್ಲಿಸಿದರು. 

ಸಭೆಯಲ್ಲಿ ಇಬ್ಬರು ಗ್ರಾಹಕರು ವಿದ್ಯುತ್‌ ಬಿಲ್‌ನಲ್ಲಿ ಹೆಚ್ಚಿಗೆ ಮೊತ್ತ ನಮೂದಿಸಲಾಗಿದೆ ಅದನ್ನು ಪರಿಶೀಲಿಸಿ ಸರಿಪಡಿಸಿ ಕೊಡಬೇಕೆಂದು ಹಾಗೂ ಇನ್ನುಳಿದವರು ರೀಡಿಂಗ್‌ನಲ್ಲಿ ಆದ ತಪ್ಪುಗಳನ್ನು ಸರಿಪಡಿಸಿ ಕೊಡಬೇಕೆಂದು, ಮನೆಯಲ್ಲಿದ್ದರೂ ಡೋರ್‌ ಲಾಕ್‌ ಎಂದು ನಮೂದಿಸಿ ಬಿಲ್‌ ಕೊಟ್ಟಿದ್ದಾರೆ.

ಅದನ್ನು ಸರಿಪಡಿಸಬೇಕೆಂದು ಕೋರಿದರು. ಡಾ|ಪಾಟೀಲ ಎಂಬುವರು ಇಸಿಎಸ್‌ ವ್ಯವಸ್ಥೆ ಪ್ರಕಾರ ಬಿಲ್‌ ಪಾವತಿಸುತ್ತಿದ್ದರೂ ಮೀಟರ್‌ ರೀಡಿಂಗ್‌ಗೆ ಬಂದವರು ಬಿಲ್‌ ತುಂಬಿಲ್ಲ. ಬಾಕಿ ಹಣವಿದೆ ಎಂದು ಹೇಳಿ ಪ್ಯೂಸ್‌ ತೆಗೆದುಕೊಂಡು ಹೋಗುತ್ತಿದ್ದಾರೆ. ಇಸಿಎಸ್‌ ಪ್ರಕಾರ ಬಿಲ್‌ ತುಂಬಿದರೂ 2-3 ಸಲ ಪ್ಯೂಸ್‌ ತೆಗೆದುಕೊಂಡು ಹೋಗಿದ್ದಾರೆ.

ಇದನ್ನು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಹೇಳದೆ ಕೇಳದೆ ಒಮ್ಮೆಲೆ ಪ್ಯೂಸ್‌ ತೆಗೆದು ವಿದ್ಯುತ್‌ ಕಡಿತ ಮಾಡಿದರೆ ನಾನು ಆಸ್ಪತ್ರೆ ನಡೆಸುವುದಾದರೂ ಹೇಗೆ, ರೋಗಿಗಳನ್ನು ತಪಾಸಿಸುವುದಾದರೂ ಹೇಗೆ? ಇದನ್ನು ಪರಿಶೀಲಿಸಿ ಸರಿಪಡಿಸಿ ಎಂದು ಮನವಿ ಮಾಡಿದರು. 

ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ವಸಂತಕುಮಾರ ರಾಠೊಡ ಅವರು ಸಂಬಂಧಪಟ್ಟವರನ್ನು ತಕ್ಷಣ ಕರೆಯಿಸಿ, ಗ್ರಾಹಕರು ಇಸಿಎಸ್‌ ವ್ಯವಸ್ಥೆಯಡಿ ಬಿಲ್‌ ಪಾವತಿಸಿದರೂ ಅವರ ವಿದ್ಯುತ್‌ ಸಂಪರ್ಕ ಏಕೆ ಕಡಿತ ಮಾಡಲಾಗುತ್ತಿದೆ. ಈ ಕುರಿತು ಸಂಬಂಧಿಸಿದ ಮೀಟರ್‌ ರೀಡಿಂಗ್‌ ಸಿಬ್ಬಂದಿಗೆ ತಿಳಿಸಿ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು. 

ಆಗ ಕಿರಿಯ ಸಹಾಯಕ ಬಸವರಾಜ ಅವರು, ಇಸಿಎಸ್‌ ವ್ಯವಸ್ಥೆಯಡಿ ಪಾವತಿಯಾದ ಬಿಲ್‌ ಸಂಸ್ಥೆಯಲ್ಲಿ ತಡವಾಗಿ ದಾಖಲಾಗುತ್ತಿದೆ. ಹೀಗಾಗಿ ಈ ಸಮಸ್ಯೆ ಆಗುತ್ತಿದೆ. ಮೀಟರ್‌ ರೀಡಿಂಗ್‌ನವರಿಗೆ ಸರಿಯಾಗಿ ದಾಖಲಾತಿಗಳನ್ನು ಪರಿಶೀಲಿಸುವಂತೆ, ವಿದ್ಯುತ್‌ ಕಡಿತ ಗೊಳಿಸದಂತೆ ತಿಳಿಸಲಾಗುವುದು ಎಂದರು. 

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.