ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಪೊಲೀಸ್‌ ಅಧಿಕಾರಿಗಳ ಮನವಿ

Team Udayavani, Apr 12, 2017, 5:09 PM IST

Z-POLICE-MEETING-2.jpg

ಮಡಿಕೇರಿ: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯವೆಂದು ಡಿವೈಎಸ್‌ಪಿ ಛಬ್ಬಿ, ವೃತ್ತ ನಿರೀಕ್ಷಕರಾದ ಐ.ಪಿ. ಮೇದಪ್ಪ ಹಾಗೂ ಠಾಣಾಧಿಕಾರಿ ಭರತ್‌ ಮನವಿ ಮಾಡಿದ್ದಾರೆ. ಗಾಂಜಾ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳು ವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. 

ನಗರ ಪೊಲೀಸ್‌ ಠಾಣೆಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಪೊಲೀಸ್‌ ಅಧಿಕಾರಿಗಳು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಿಬಂದಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಸಾರ್ವಜನಿಕರು, ವಾಹನ ಮಾಲೀಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮಾತನಾಡಿ ನಗರದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಗಾಂಜಾ ಮತ್ತು ಮದ್ಯ ಪಾನದಿಂದ ಹಾದಿ ತಪ್ಪುತ್ತಿರುವ ಯುವ ಸಮೂಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ನಗರದ ಪ್ರಮುಖ ಪ್ರದೇಶದಲ್ಲೇ ಕೊಲೆ, ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಆದರೂ ಪೊಲೀಸರು ಯಾವುದೇ ಕಠಿನ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿದರು.
 
ರಾತ್ರಿ ಪೊಲೀಸ್‌ ಸಿಬಂದಿಗಳು ಗಸ್ತು ತಿರುಗುತ್ತಿಲ್ಲ. ಮಾದಕ ವ್ಯಸನಿಗಳು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡು ತ್ತಿದ್ದು, ಕೆಲವು ಬಡಾವಣೆಗಳಲ್ಲಿ ಪೋಲಿ-ಪುಂಡರ ಹಾವಳಿ ಹೆಚ್ಚಾಗಿದೆ. ಸಂಶಯಾಸ್ಪದವಾಗಿ ನಡೆದುಕೊಳ್ಳುವ ಮತ್ತು ಸಮಾಜದಲ್ಲಿ ಆತಂಕವನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಕೆಲವು ಆಟೋ ಚಾಲಕರು ನಿಯಮ ಉಲ್ಲಂ ಸುತ್ತಿದ್ದು, ಪೊಲೀಸರು ಇವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಡಿ.ಎಚ್‌. ಮೇದಪ್ಪ ಆಗ್ರಹಿಸಿದರು.

ಕೆಲವು ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿ ರುವ ಬಗ್ಗೆ ದೂರುಗಳಿದ್ದು, ಕಾನೂನು ವ್ಯಾಪ್ತಿಯಲ್ಲಿ ಹೋಂಸ್ಟೇ ನಿಯಮವನ್ನು ಬಿಗಿಗೊಳಿಸಬೇಕು. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಮಾದಕ ಪದಾರ್ಥಗಳು ಮಾರಾಟವಾಗುತ್ತಿದ್ದು, ಆತಂಕ ಸೃಷ್ಟಿಯಾ ಗಿದೆ. ಗಾಂಜಾ ಮಾರಾಟ ಮಾಡುತ್ತಿರುವವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೆಲವೇ ಕ್ಷಣಗಳಲ್ಲಿ ಮಾರಾಟಗಾರನಿಗೆ ಈ ಬಗ್ಗೆ ಮಾಹಿತಿ ರವಾನೆಯಾಗುತ್ತಿದೆ ಎಂದು ಜನರು ಆರೋಪಿಸಿದರು. ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಗರ ದಲ್ಲಿ ಇಸ್ಪೀಟ್‌ ಕ್ಲಬ್‌ಗಳು ಅನಧಿಕೃತವಾಗಿ ಕಾರ್ಯ ನಿರ್ವಹಿಸು ತ್ತಿದ್ದು, ಈ ದಂಧೆಯನ್ನು ನಿಯಂತ್ರಿಸುವಲ್ಲಿಯೂ ಪೊಲೀಸರು ವಿಫ‌ಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.   

ಈ ಸಂದರ್ಭ ಮಾತನಾಡಿದ ಪೊಲೀಸ್‌ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ನಿಷ್ಠೆಯ ಬಗ್ಗೆ ಸಮರ್ಥಿಸಿಕೊಂಡರು. ಎಲ್ಲಾ ಬಡವಾಣೆಗಳಲ್ಲಿ, ಪ್ರತಿಯೊಂದು ಸಂದರ್ಭಗಳಲ್ಲೂ ಪೊಲೀಸರು ಹಾಜರಿರಲು ಸಾಧ್ಯವಿಲ್ಲ. ಸಂಶಯಾಸ್ಪದ ಪ್ರಕರಣಗಳು ನಡೆದರೆ, ಯಾರಾದರು ಸಮಾಜ ಘಾತುಕ ಕೃತ್ಯದಲ್ಲಿ ತೊಡಗಿದ್ದರೆ ಅಥವಾ ಗಾಂಜಾ ಮಾರಾಟ ವಾಗುತ್ತಿದ್ದರೆ ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್‌ ಅಧಿಕಾರಿಗಳು ಮನವಿ ಮಾಡಿದರು. ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವೆಂದರು.
ಹಿರಿಯ ಪತ್ರಕರ್ತರಾದ ಜಿ. ಚಿದ್ವಿಲಾಸ್‌, ಶ್ರೀಧರ್‌ ನೆಲ್ಲಿತ್ತಾಯ ಸೇರಿದಂತೆ ಸಾರ್ವಜನಿಕರು ಹಾಗೂ  ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ನಗರದಲ್ಲಿ  ಪೊಲೀಸ್‌ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.