ಉಪ ಸಮರ; ನಂಜನಗೂಡು, ಗುಂಡ್ಲುಪೇಟೆ “ಕೈ” ವಶ, BSYಗೆ ಮುಖಭಂಗ
Team Udayavani, Apr 13, 2017, 11:51 AM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದು, ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿಯ ಶ್ರೀನಿವಾಸ ಪ್ರಸಾದ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ(63,486 ಮತ) ಅವರು 17, 560 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಗುಂಡ್ಲುಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ನಿರಂಜನ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವಪ್ರಸಾದ್ ಅವರು 12,077 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಎಸ್ ವೈ, ಶ್ರೀನಿವಾಸ್ ಪ್ರಸಾದ್ ಮುಖಭಂಗ:
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಂಜನಗೂಡು, ಗುಂಡ್ಲುಪೇಟೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಅಲ್ಲದೇ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ಹಿನ್ನೆಲೆಯಲ್ಲಿ 2 ಕ್ಷೇತ್ರದಲ್ಲಿಯೂ ಬಿಜೆಪಿ ಸೋತಿರುವುದು ಯಡಿಯೂರಪ್ಪಗೆ ಹಿನ್ನಡೆಯಾದಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಶ್ರೀನಿವಾಸ್ ಪ್ರಸಾದ್ ನಂಜನಗೂಡು ಕ್ಷೇತ್ರದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.
ನಂಜನಗೂಡು ಕ್ಷೇತ್ರ:
ಕಳಲೆ ಕೇಶವಮೂರ್ತಿ(ಕಾಂಗ್ರೆಸ್) 77, 568 ಮತ
ಶ್ರೀನಿವಾಸ್ ಪ್ರಸಾದ್(ಬಿಜೆಪಿ) 58, 144
ಗೆಲುವಿನ ಅಂತರ: 19, 228
ಗುಂಡ್ಲುಪೇಟೆ ಕ್ಷೇತ್ರ:
ಗೀತಾ ಮಹದೇವಪ್ರಸಾದ್(ಕಾಂಗ್ರೆಸ್) 90, 258
ನಿರಂಜನ್ ಕುಮಾರ್ (ಬಿಜೆಪಿ) 79, 381
ಗೆಲುವಿನ ಅಂತರ: 10,877
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.