ಜಾತ್ರಾ ಸಂಭ್ರಮಕ್ಕೆ ತೆರೆದುಕೊಳ್ಳುತ್ತಿರುವ ಪುತ್ತೂರು


Team Udayavani, Apr 13, 2017, 2:06 PM IST

1204rjh13.jpg

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾ ತೋಭಾರ ಶ್ರೀ ಮಹಾಲಿಂಗೇಶ್ವರನ ಜಾತ್ರೆ ದೇವ ಸ್ಥಾನದ ಒಳಗಿನ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತ ವಾಗಿಲ್ಲ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿವಿಧ ಕಾರ್ಯಕ್ರಮಗಳು, ರಾರಾಜಿಸುವ ಕಮಾನು, ಕಟೌಟ್‌ಗಳಿಂದ ಮೆರುಗು ಹೆಚ್ಚಿದೆ. 
ನಗರವಂತೂ ತಳಿರು ತೋರಣ, ಮಹಾದ್ವಾರ, ದೇವರ ಕಟೌಟ್‌ಗಳು, ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳ್ಳುತ್ತಿದೆ. ನಗರವನ್ನು ಪ್ರವೇಶಿಸುವ ವಿವಿಧ ಕಡೆಗಳಲ್ಲಿ ಹಾಗೂ ದೇವರು ಸವಾರಿ ತೆರಳುವ ಕಡೆಗಳಲ್ಲಿ ಭಕ್ತರು ಅಳವಡಿಸಿರುವ ಸ್ವಾಗತ ಕಮಾನುಗಳು ಜಾತ್ರೆಯ ಮೆರುಗನ್ನು ಹೆಚ್ಚಿಸಿವೆ.

ಜಾತ್ರೆಯ ಸಂದರ್ಭದಲ್ಲಿ ಎ. 10ರಿಂದ ಎ.18ರ ವರೆಗೆ ರಾತ್ರಿ ಶ್ರೀ ದೇವರ ಪೇಟೆ ಸವಾರಿ ನಡೆಯುತ್ತದೆ. ಎ. 16ರಂದು ಮಾತ್ರ ದೇವರ ಪೇಟೆ ಸವಾರಿ ನಡೆಯುವುದಿಲ್ಲ. 

ಶ್ರೀ ದೇವರ ಪೇಟೆ ಸವಾರಿಯ ಸಂದರ್ಭದಲ್ಲಿ ವಿವಿಧ ಕಟ್ಟೆಗಳಲ್ಲಿ ಪೂಜೆ ನಡೆಯುತ್ತದೆ. ಪೂಜೆ ನಡೆಯುವ ಕಟ್ಟೆಗಳಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಭಕ್ತರು ಆಯೋಜಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಲಂಕಾರಗಳೂ ನಡೆಯುತ್ತವೆ.

ಪೇಟೆ ಸವಾರಿ
ಶ್ರೀ ದೇವರ ಪೇಟೆ ಸವಾರಿ ನೆಲ್ಲಿಕಟ್ಟೆ, ಸಾಲ್ಮರ, ಸೂತ್ರ ಬೆಟ್ಟು, ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು ಏಳ್ನಾಡುಗುತ್ತು, ಬೈಪಾಸ್‌ ಹೆದ್ದಾರಿ, ರಾಧಾಕೃಷ್ಣ ಮಂದಿರ, ಕೋರ್ಟು ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳು ವಾರುಬೈಲು, ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೆಲ್‌ ಸವಾರಿ, ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ, ಬಂಗಾರ್‌ ಕಾಯರ್‌ಕಟ್ಟೆ ಸವಾರಿ ನಡೆಯುತ್ತದೆ.

ಜನಜಂಗುಳಿ
ಜಾತ್ರಾ ಗದ್ದೆಯಲ್ಲಿ ಸಂತೆ ಮಾರುಕಟ್ಟೆ ನಿಧಾನವಾಗಿ ತೆರೆದುಕೊಳ್ಳುತ್ತಿದೆ. ಈ ಮಧ್ಯೆ ನಗರದಲ್ಲಿ ಜನಜಂಗುಳಿಯೂ ಹೆಚ್ಚಾಗಿದೆ. ಮಾಮೂಲಾಗಿ ಸಂಜೆ ಸಮಯದಲ್ಲಿ ನಗರದಲ್ಲಿ ಒಂದಷ್ಟು ಜನಸಂದಣಿ ಕಡಿಮೆಯಾದರೆ ಜಾತ್ರೆಯ ಸಂದರ್ಭದಲ್ಲಿ ದೇವರ ಪೇಟೆ ಸವಾರಿ ನಡೆಯುವುದರಿಂದ ತಡರಾತ್ರಿಯವರೆಗೂ ಜನಸಂದಣಿ ಕಂಡುಬರುತ್ತದೆ. ದೂರದೂರುಗಳಿಂದಲೂ ಭಕ್ತರು ಪೇಟೆ ಸವಾರಿಯನ್ನು ನೋಡಲು ಆಗಮಿಸುತ್ತಿದ್ದಾರೆ.

ಆಕರ್ಷಕ ಸ್ವಾಗತ
ದೇವರ ಪೇಟೆ ಸವಾರಿಯ ಸಂದರ್ಭದಲ್ಲಿ ದೇವರನ್ನು ಸ್ವಾಗತಿಸುವ ಆಕರ್ಷಕ ಕಮಾನುಗಳು ನಗರದೆಲ್ಲೆಡೆ ಕಂಡುಬರುತ್ತಿದೆ. ಸೀಮೆಯ ಜನತೆ ಪುತ್ತೂರು ಜಾತ್ರೆ ಉತ್ಸವದ ಸಂಭ್ರಮವನ್ನು ಅನುಭವಿಸುತ್ತಾರೆ. ಶ್ರೀ ದೇವರ ಪೇಟೆ ಸವಾರಿ ಸಂದರ್ಭದಲ್ಲಿ ಅಂಗಡಿ ಮುಂಗಟ್ಟುಗಳು, ವ್ಯಾಪಾರಸ್ಥರು, ಮನೆಗಳನ್ನು ಹೊಂದಿರುವವರು ಎಲ್ಲಿಗೂ ತೆರಳದೆ ಶ್ರೀ ದೇವರ ಪೇಟೆ ಸವಾರಿ ದರ್ಶನಕ್ಕೆ ಕಾಯುತ್ತಾರೆ.

ಶ್ರೀ ದೇವರ ಬಲಿ ಉತ್ಸವ
ಪುತ್ತೂರು:
ಶ್ರೀ ಮಹಾಲಿಂಗೇ ಶ್ವರ ದೇವಸ್ಥಾನದಲ್ಲಿ ಜಾತ್ರೆಯ ಅಂಗವಾಗಿ ಬುಧ ವಾರ ಬೆಳಗ್ಗೆ ಶ್ರೀ ದೇವರ ಬಲಿ ಉತ್ಸವ ಬೆಂಡೆ ಮೇಳದೊಂದಿಗೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು, ಬೈಪಾಸ್‌ ಹೆದ್ದಾರಿ, ರಾಧಾಕೃಷ್ಣ ಮಂದಿರವಾಗಿ ಶ್ರೀ ದೇವರ ಪೇಟೆ ಸವಾರಿ ತೆರಳಿ ಕಟ್ಟೆ ಪೂಜೆಗಳನ್ನು ಸ್ವೀಕರಿಸಿ ರಾತ್ರಿ ದೇವಸ್ಥಾನಕ್ಕೆ ಮರಳಿತು.

ಇಂದಿನ ಪೇಟೆ ಸವಾರಿ
ಎ. 13ರಂದು ಮೇಷ ಸಂಕ್ರಮಣದ ದಿನ ಬೆಳಗ್ಗೆ ದೇವಸ್ಥಾನದಲ್ಲಿ ಶ್ರೀ ದೇವರ ಉತ್ಸವ ಬಲಿ, ರಾತ್ರಿ ಉತ್ಸವ ನಡೆಯಲಿದೆ. ಬಳಿಕ ಶ್ರೀ ದೇವರ ಪೇಟೆ ಸವಾರಿಯು ಕೋರ್ಟು ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರುಬೈಲುಗಳಲ್ಲಿ ಕಟ್ಟೆ ಪೂಜೆ ಸ್ವೀಕರಿಸಿ ರಾತ್ರಿ ದೇವಸ್ಥಾನಕ್ಕೆ ಹಿಂದಿರುಗಲಿದೆ.

ನಗರದ ಮಹಮ್ಮಾಯಿ ದೇವಸ್ಥಾನ ರಸ್ತೆಯಲ್ಲಿ ಅಳವಡಿಸಿರುವ ಆಕರ್ಷಕ ಸ್ವಾಗತ ಕಮಾನು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.