ಪರಿಷ್ಕೃತ ವೇತನ ಬಿಡುಗಡೆಗೆ ಆಗ್ರಹಿಸಿ ಪೌರ ಕಾರ್ಮಿಕರಿಂದ ಪ್ರತಿಭಟನೆ
Team Udayavani, Apr 14, 2017, 11:05 AM IST
ಬೆಂಗಳೂರು: ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರಿಗೆ ಸರ್ಕಾರದಿಂದ ಹೆಚ್ಚಿಸಲಾಗಿರುವ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ನೂರಾರು ಪೌರಕಾರ್ಮಿಕರು ಬಿಬಿಎಂಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಜತೆಗೆ ಈ ಕೂಡಲೇ ಸರ್ಕಾರ ಹೆಚ್ಚಿಸಿದ ಕನಿಷ್ಠ ವೇತನ ಬಿಡುಗಡೆ ಮಾಡದಿದ್ದರೆ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎ.ಜೇಯರಿಮ್, ಸರ್ಕಾರ ಗುತ್ತಿಗೆ ಪೌರಕಾರ್ಮಿಕರಿಗೆ ವೇತನವನ್ನು ಪರಿಷ್ಕರಿಸಿ ಆರು ತಿಂಗಳು ಕಳೆದಿದೆ.
ಆದರೆ, ಈವರೆಗೆ ಬಿಬಿಎಂಪಿ ಅಕಾರಿಗಳು ಪೌರಕಾರ್ಮಿಕರಿಗೆ ಪರಿಷ್ಕೃತ ವೇತನ ನೀಡಲು ಮುಂದಾಗುತ್ತಿಲ್ಲ.
ಇದರೊಂದಿಗೆ ಆಗಸ್ಟ್ ತಿಂಗಳಿಂದ ಪೌರಕಾರ್ಮಿಕರಿಗೆ ಪರಿಷ್ಕೃತ ಬಾಕಿ ವೇತನ ನೀಡಬೇಕಾಗಿದೆ. ಪಾಲಿಕೆಯಿಂದ ಶೀಘ್ರ ಪರಿಷ್ಕೃತ ವೇತನ ಮತ್ತು ಹಳೆಯ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.