ನಗರದ ಮರಗಳ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳೇನು?
Team Udayavani, Apr 14, 2017, 11:12 AM IST
ಬೆಂಗಳೂರು: ರಾಜಧಾನಿಯ ವಿವಿಧ ಭಾಗಗಳಲ್ಲಿ ಬೆಳೆದಿರುವ ಮರಗಳ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿ, ಅರಣ್ಯ ಇಲಾಖೆ ಹಾಗೂ ಪೊಲೀಸ್ ವಿಭಾಗಕ್ಕೆ ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಗುರುವಾರ ತಾಕೀತು ಮಾಡಿದ್ದಾರೆ.
ಮಾರತ್‌ಹಳ್ಳಿ ರಿಂಗ್ ರಸ್ತೆ ಹಾಗೂ ನಗರದ ಹಲವು ಪ್ರದೇಶಗಳಲ್ಲಿ ಬೆಳೆದಿರುವ ಮರಗಳಿಗೆ ದುಷ್ಕರ್ಮಿಗಳು ಆ್ಯಸಿಡ್ ಹಾಕಿದ್ದ ದೂರಿಗೆ ಸಂಬಂಧಪಟ್ಟಂತೆ ಅಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಅವರು, ಈ ಮೌಖೀಕ ಸೂಚನೆ ನೀಡಿದರು.
ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದ ಬಿಬಿಎಂಪಿ ಉಪ ವಿಭಾಗ-1ರ ಸಹಾಯಕ ಅರಣ್ಯ ಸಂರಕ್ಷಣಾಕಾರಿ ಎನ್.ಶಾಂತಕುಮಾರ್, ಈಗಾಗಲೇ ನಗರದಲ್ಲಿ ಮರಗಳನ್ನು ಅಕ್ರಮವಾಗಿ ಕಡಿಯುವ ಆರೋಪಿಗಳಿಗೆ 10 ಸಾವಿರ ರೂ. ದಂಡ ವಿಸಲಾಗುತ್ತಿದೆ. ಮಾರ್‌ತ್‌ಹಳ್ಳಿಯ ರಿಂಗ್ ರಸ್ತೆಯಲ್ಲಿ ಒಂದು ಡಜನ್‌ಮರಗಳ ಬುಡಕ್ಕೆ ಆ್ಯಸಿಡ್ ಹಾಕಿರುವ ಆರೋಪಿಗಳು ಪತ್ತೆಯಾಗಬೇಕಿದೆ ಎಂದು ವಿವರಣೆ ನೀಡಿದರು.
ವಿಚಾರಣೆಗೆ ಗೈರು!
ಇನ್ನು ಮರಗಳ ಬುಡಕ್ಕೆ ಆ್ಯಸಿಡ್ ಹಾಕಿದವರ ವಿರುದ್ಧ ಕೈಗೊಂಡ ಕ್ರಮಗಳ ದೂರಿನ ಬಗ್ಗೆ ಪ್ರತಿವಾದಿಗಳಾಗಿರುವ ನಗರಾಭಿವೃದ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, ಬಿಡಿಎ ಆಯುಕ್ತರು, ಪೊಲೀಸ್ ಆಯುಕ್ತರು ನಗರದ ಜಿಲ್ಲಾ ಅರಣ್ಯ ಸಂರಕ್ಷಣಾಕಾರಿಗಳು ವಿಚಾರಣೆಗೆ ಗೈರು ಹಾಜರಾಗಿದ್ದರು. ಈ ಕುರಿತು ಮಾತನಾಡಿದ ಲೋಕಾಯುಕ್ತ ಪಿ. ವಿಶ್ವನಾಥಶೆಟ್ಟಿಯವರು, ಗೈರು ಹಾಜರಾದ ಅಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಮತ್ತೂಮ್ಮೆ ಕಾಲಾವಕಾಶ ನೀಡಿ ಏ.26ಕ್ಕೆ ವಿಚಾರಣೆಯನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.