ತಲಪಾಡಿ ಟೋಲ್‌ ಸಿಬಂದಿ ಗೂಂಡಾಗಿರಿ:ವೃದ್ಧ ಚಾಲಕ, ಯುವಕನಿಗೆ ಹಲ್ಲೆ


Team Udayavani, Apr 14, 2017, 11:13 AM IST

13ul1Sarafath.jpg

ಉಳ್ಳಾಲ  ತಲಪಾಡಿ ಟೋಲ್‌ಗೇಟ್‌ ಬಳಿ ವೃದ್ಧರೊಬ್ಬರಿಗೆ  ಗುರುವಾರ ಟೋಲ್‌ ಸಿಬಂದಿ ಹಲ್ಲೆ ನಡೆಸಿದ್ದನ್ನು  ಪ್ರಶ್ನಿಸಿದ ಯುವಕನೊಬ್ಬನಿಗೆ ಟೋಲ್‌ ಸಿಬಂದಿ ಹಲ್ಲೆಗೈದು ಗಾಯಗೊಂಡ ಆತ  ಆಸ್ಪತ್ರೆಗೆ ದಾಖಲಾಗಿದ್ದಾನೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂದಕ ನಿವಾಸಿ ಅಬ್ದುಲ್‌ ಹಮೀದ್‌ ಸರಾಫತ್‌ (25)  ಹಲ್ಲೆಗೊಳಗಾದವರು.  ಕೆಲಸದ ನಿಮಿತ್ತ ಮಂಗಳೂರಿನಿಂದ ಕಾಸರಗೋಡಿಗೆ  ಕಾರಿನಲ್ಲಿ  ತೆರಳುವ ಸಂದರ್ಭ ಈ ಘಟನೆ ನಡೆದಿದ್ದು, ಸರಾಫತ್‌ ಅವರು ತನ್ನ ಕಾರಿನಲ್ಲಿ  ಅಪರಾಹ್ನ 2.30ರ ವೇಳೆ  ತಲಪಾಡಿ ಟೋಲ್‌ ಗೇಟ್‌ ತಲುಪುತ್ತಿದ್ದಂತೆ ಟೋಲ್‌ ಸಿಬಂಧಿದಿ ವಾಹನ ಚಾಲಕ ವೃದ್ಧರೋರ್ವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಸರಾಫತ್‌ ಟೋಲ್‌ ಸಿಬಂದಿಯಲ್ಲಿ ಹಲ್ಲೆಯ ಕಾರಣ ವಿಚಾರಿಸಿ ಚಾಲಕರ ತಪ್ಪಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು.  

ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಸರಿಯಲ್ಲ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಟೋಲ್‌ ಗೇಟ್‌ನ ಸಿಬಂದಿ ಏಕಾಏಕಿ ಹಲ್ಲೆ ವಿಚಾರವನ್ನು ಪ್ರಶ್ನಿಸಿದ ಸರಾಫತ್‌ರನ್ನು ಸುತ್ತುವರಿದು ಹಲ್ಲೆ ನಡೆಸಿ ತೆರಳಿದರು ಎನ್ನಲಾಗಿದೆ. ಗಾಯಗೊಂಡಿದ್ದ ಸರಾಫತ್‌ನನ್ನು ಸ್ಥಳೀಯರೊಬ್ಬರು ಉಳ್ಳಾಲದ ಸರೋಜ್‌ ಆಸ್ಪತ್ರೆಗೆ ದಾಖಲಿಸಿದರು ಎನ್ನಲಾಗಿದೆ. ಹಲ್ಲೆ ನಡೆಸಿದ ಎಲ್ಲರಲ್ಲೂ ಗುರುತಿನ ಚೀಟಿಯ ಬ್ಯಾಜ್‌ ಇದ್ದು, ಇದರಿಂದ ಟೋಲ್‌ ಗೇಟ್‌ ಸಿಬಂದಿಯೇ ಹಲ್ಲೆ ನಡೆಸಿದ್ದಾರೆ ಎಂದು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಸರಾಫತ್‌ ದೂರು ದಾಖಲಿಸಿದ್ದಾರೆ.

ಹೆಚ್ಚುವರಿ ಹಣ ವಸೂಲಿ : ಕೇರಳದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ವಿಮಾನ ನಿಲ್ದಾಣದಿಂದ ಕಾಸರಗೋಡಿಗೆ ತೆರಳುವ ಪ್ರಯಾಣಿಕರಿಂದ ಹೆಚ್ಚುವರಿ ಹಣ ವಸೂಲು ಮಾಡಲಾಗುತ್ತದೆ. ಹೆಚ್ಚಾಗಿ ಬೆಂಗಳೂರು, ಹೈದರಾಬಾದ್‌ ಸೇರಿದಂತೆ ದೊಡ್ಡ ದೊಡ್ಡ ಟೋಲ್‌ಗೇಟ್‌ಗಳಲ್ಲಿ ಸಿಬಂದಿ ಮತ್ತು ಪೊಲೀಸರು ಇರುತ್ತಾರೆ. ಆದರೆ ಮಂಗಳೂರು ಕೇಂದ್ರಿಕರಿಸಿರುವ ಟೋಲ್‌ ಗೇಟ್‌ಗಳಲ್ಲಿ ಮತ್ತು ತಲಪಾಡಿ ಟೋಲ್‌ಗೇಟ್‌ಗಳಲ್ಲಿ ಸಿಬಂದಿಯೊಂದಿಗೆ ಕೆಲವರು ಗೂಂಡಾಗಳಂತೆ ವರ್ತಿಸುತ್ತಾರೆ ಎಂದು ಹಲ್ಲೆಗೊಳಗಾದ ಸರಾಫತ್‌ ಸಂಬಂಧಿ ಸೈಫ್‌ ಸುಲ್ತಾನ್‌ ತಿಳಿಸಿದರು.
ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.