ಹಾಸ್ಟೆಲ್ಗಳ ಪರಿಶೀಲನೆಗೆ ಸೂಚನೆ
Team Udayavani, Apr 14, 2017, 11:46 AM IST
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಹಾಸ್ಟೆಲ್ಗಳು (ವಸತಿ ನಿಲಯ) ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿ ದೆಯೇ ಅಥವಾ ಇಲ್ಲವೋ ಎನ್ನುವುದನ್ನು ಪರಿ ಶೀಲಿಸಿ, ಅನುಮತಿ ಪಡೆಯದೇ ಇದ್ದಲ್ಲಿ ಮಾನ್ಯತೆ ರದ್ದತಿಗೆ ಶಿಫಾರಸ್ಸು ಮಾಡುವಂತೆ ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಲಾಗಿದೆ.
ಹಾಸ್ಟೆಲ್ಗಳು ಸಕ್ಷಮ ಪ್ರಾಧಿಕಾರದ ನಿಯಮ ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುದನ್ನು ಪಿಯು ಕಾಲೇಜು ಆಡಳಿತ ಮಂಡಳಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ,ಪರಿಶೀಲಸಬೇಕು. ಆಡಳಿತ ಮಂಡಳಿಯು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ನಡೆಸುತ್ತಿದ್ದಲ್ಲಿ, ಇಲಾಖೆ ನಿಯಮ ದಂತೆ ಮೂಲ ಸೌಕರ್ಯ ಹೊಂದಿದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಲು ನಿರ್ದೇಶಿಸಲಾಗಿದೆ.
ಹಾಸ್ಟೆಲ್ಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಇದ್ದಲ್ಲಿ, ಅನಧೀಕೃತವಾಗಿದೆ ಎಂಬುದರ ಬಗ್ಗೆ ಆಡಳಿತ ಮಂಡಳಿಗೆ ನೋಟಿಸ್ ನೀಡಿ, ಅಂತಹ ವಸತಿ ನಿಲಯವನ್ನು ತಕ್ಷಣವೇ ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿ, ಜಿಲ್ಲಾಧಿಕಾಧಿರಿಗಳ ಗಮನಕ್ಕೆ ತರುವಂತೆ ಆದೇಶಿಸಲಾಗಿದೆ.
ಹಾಗೆಯೇ ಆಡಳಿತ ಮಂಡಳಿ ಒಂದು ಕಾಲೇಜಿಗೆ ಶೈಕ್ಷಣಿಕ ಮಾನ್ಯತೆ ಪಡೆದು, ಅದೇ ಮಾನ್ಯತೆಯಿಂದ ಬೇರೆ ಸ್ಥಳಗಳಲ್ಲಿ ಕಾಲೇ ಜಿನ ಶಾಖೆಯನ್ನು ಅನಧಿಕೃತ ವಾಗಿ ಪ್ರಾರಂಭಿ ಸಿರುವುದು ಗಮನಕ್ಕೆ ಬಂದರೆ, ಕಾಲೇಜಿನ ಮಾನ್ಯತೆ ರದ್ದು ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.