ಆರೋಗ್ಯ ಕವಚದೊಂದಿಗೆ 800 ಆ್ಯಂಬುಲೆನ್ಸ್‌ಗಳ ವಿಲೀನಕ್ಕೆ ಸಿದ್ಧತೆ

Team Udayavani, Apr 14, 2017, 12:01 PM IST

ambulance.jpg

ಬೆಂಗಳೂರು: ರಾಜ್ಯದಲ್ಲಿರುವ ಆರೋಗ್ಯ ಕವಚ 108 ಸೇವೆಯೊಂದಿಗೆ ವಿವಿಧ ಆಸ್ಪತ್ರೆಗಳಲ್ಲಿರುವ ಆ್ಯಂಬುಲೆನ್ಸ್‌ಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ಪ್ರತಿ 10ರಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಆ್ಯಂಬುಲೆನ್ಸ್‌ಗಳನ್ನು ನಿಲುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಪ್ರಸ್ತುತ 711 ಆರೋಗ್ಯ ಕವಚ 108 ಸೇವೆಯ ಆ್ಯಂಬುಲೆನ್ಸ್‌ಗಳಿದ್ದು, ಇವುಗಳ ಜತೆಗೆ ವಿವಿಧ ಆಸ್ಪತ್ರೆಗಳ ಸುಮಾರು 800 ಆ್ಯಂಬುಲೆನ್ಸ್‌ ಗಳನ್ನು ಆರೋಗ್ಯ ಕವಚ ಯೋಜನೆಯಡಿ ವಿಲೀನಗೊಳಿಸುವ ಕುರಿತು 2017-18ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದರಂತೆ ವಿಲೀನ ಪ್ರಕ್ರಿಯೆ ಆರಂಭಿಸಲಾಗಿದೆ.

ರಾಜ್ಯದ ಆ್ಯಂಬುಲೆನ್ಸ್‌ಗಳ ವಿಲೀನ ಮತ್ತು ಅವುಗಳಿಗೆ ತುರ್ತು ಚಿಕಿತ್ಸಾ ಸೇವೆ ಒದಗಿಸಲು ಸೇವಾದಾರರ ಆಯ್ಕೆ ಮತ್ತು ಇತರೆ ಚಟುವಟಿಕೆಗಳು ಜಾರಿಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ 711 ಆರೋಗ್ಯ ಕವಚ ಮತ್ತು 800 ಇತರೆ ಆ್ಯಂಬುಲೆನ್ಸ್‌ಗಳನ್ನು ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು 10-15 ಕಿ.ಮೀ. ವ್ಯಾಪ್ತಿಯಲ್ಲಿ ನಿಲುಗಡೆ ಮಾಡಿ ತುರ್ತು ಚಿಕಿತ್ಸೆ ಕರೆಗೆ ಸ್ಪಂದಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಈ ಯೋಜನೆ ಜಾರಿಗೊಳಿಸುವ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ನೀಡಲಾಗಿದೆ.

ಲಭ್ಯವಿರುವ 1511 ಆ್ಯಂಬುಲೆನ್ಸ್‌ಗಳನ್ನು ನಿಗದಿತ ಸ್ಥಳಗಳಲ್ಲಿ ಒಬ್ಬ ಚಾಲಕ ಇರುವ ಆ್ಯಂಬುಲೆನ್ಸ್‌ಗಳನ್ನು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಹಾಗೂ ಇಬ್ಬರು ಚಾಲಕರು ಲಭ್ಯವಿರುವ ಆ್ಯಂಬುಲೆನ್ಸ್‌ಗಳನ್ನು ಬೆಳಗ್ಗೆ 8ರಿಂದ ಸಂಜೆ ನಾಲ್ಕರವರೆಗೆ ಮೊದಲ ಪಾಳಿ ಹಾಗೂ ಸಂಜೆ 4ರಿಂದ ಮಧ್ಯರಾತ್ರಿ 12ರವರೆಗೆ ಎರಡನೇ ಪಾಳಿಯಲ್ಲಿ ನಿಲ್ಲಿಸಬೇಕು. ಉಳಿದ ಅವಧಿಯಲ್ಲಿ ತಮ್ಮ ಆಸ್ಪತ್ರೆಗಳ ಜಾಗದಲ್ಲಿ ನಿಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಅಲ್ಲದೆ, ವಿಲೀನಗೊಳ್ಳುತ್ತಿರುವ 800 ಆ್ಯಂಬುಲೆನ್ಸ್‌ ಚಾಲಕರ ಮೊಬೈಲ್‌ ಸಂಖ್ಯೆಗಳು ಸಂಬಂಧಿಸಿದ ಆಸ್ಪತ್ರೆ ವೈದ್ಯಾಧಿಕಾರಿಗಳು, ತುರ್ತು ಚಿಕಿತ್ಸಾ ವಿಭಾಗ ಮತ್ತು ಇತರೆ ವಿಭಾಗ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಬಳಿ ಇರಬೇಕು. ಜತೆಗೆ ಈ ಸಂಖ್ಯೆಯನ್ನು 108 ಕರೆ ಕೇಂದ್ರಕ್ಕೂ ಒದಗಿಸಲಾಗುವುದು ಎಂದು ಹೇಳಲಾಗಿದೆ.

ಆ್ಯಂಬುಲೆನ್ಸ್‌ಗಳಿಗೆ ಇಂಧನ ಒದಗಿಸುವುದು, ಅವುಗಳ ಕಾರ್ಯನಿರ್ವಹಣೆ ಪರಿಶೀಲನೆ ಕುರಿತು ಕೂಡ ಕೆಲವು ಸೂಚನೆಗಳನ್ನು ನೀಡಲಾಗಿದೆ. ಅಲ್ಲದೆ, ತಾಲೂಕು ವೈದ್ಯಾಧಿಕಾರಿಗಳು ಪ್ರತಿ ವಾರ ತಮ್ಮ ತಾಲೂಕಿನ ಆ್ಯಂಬುಲೆನ್ಸ್‌ಗಳ ವರದಿ ಪಡೆದು ಯೋಜನೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅಗತ್ಯ ಬಿದ್ದರೆ ವರದಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಅಥವಾ ಅವರ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದೂ ಸೂಚನೆ ನೀಡಲಾಗಿದೆ.

ಸರ್ಕಾರಿ ಆಸ್ಪತ್ರೆಗೇ ದಾಖಲಿಸಬೇಕು
ಆ್ಯಂಬುಲೆನ್ಸ್‌ ಚಾಲಕರು ತಮ್ಮ ವಾಹನದಲ್ಲಿ ಕರೆದೊಯ್ಯುವ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೇ ದಾಖಲಿಸಬೇಕು. ವಿಶೇಷ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೆ ಅದಕ್ಕೆ ರೋಗಿಗಳ ಸಂಬಂಧಿಕರ ಸಹಿಯೊಂದಿಗೆ ಸೂಕ್ತ ಸಮಜಾಯಿಷಿಯನ್ನು ರೋಗಿಗಳ ನಿರ್ವಹಣೆ ದಾಖಲೆಯಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.