ಕಾಂಗ್ರೆಸ್‌ಗೆ ಜಯ: ಕಾರ್ಯಕರ್ತರ ಸಂಭ್ರಮ
Team Udayavani, Apr 14, 2017, 12:40 PM IST
ಕೆ.ಆರ್.ನಗರ: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಕಳಲೆ ಎನ್. ಕೇಶವಮೂರ್ತಿ, ಗೀತಾ ಮಹದೇವಪ್ರಸಾದ್ ಗೆಲುವು ಸಾಧಿಸುತ್ತಿದ್ದಂತೆಯೇ ಇತ್ತ ತಾಲೂಕಿನ ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಗ್ರಾಮದ ಆಸ್ವತ್ರೆ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್. ಹೆಚ್.ಸಿ.
ಮಹದೇವಪ್ಪ, ತನ್ವೀರ್, ಶಾಸಕ ಕೆ.ವೆಂಕಟೇಶ್ ಅವರ ಪರವಾಗಿ ಜಯದ ಘೋಷಣೆಗಳನ್ನು ಕೂಗಿ ಅಲ್ಲಿನ ಮತದಾರರನ್ನು ತಾಲೂಕಿನ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದಿಸಿದರು
ಜಿಲ್ಲಾ ಡಿಡಿಸಿ ಸದಸ್ಯ ಹೆಚ್.ಜೆ.ರಮೇಶ್ ಮತ್ತು ಹಳಿಯೂರು ಗ್ರಾಪಂ ಸದಸ್ಯ ಹೆಚ್.ಎಲ್.ಮಹದೇವ ಮುಖ್ಯಮಂತ್ರಿ ಸಿದ್ದರಾಮಯ್ಯರ ಹತ್ತಾರು ಜನಪರ ಕಾರ್ಯಕ್ರಮಗಳು ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ರಕ್ಷೆಯಾಗಿದ್ದು ಇದು ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದರು.
ಗ್ರಾಪಂ ಮಾಜಿ ಉಪಾಧ್ಯಕ್ಷ ಮಂಜುನಾಥ್, ಮಾಜಿ ಸದಸ್ಯ ಹೆಚ್.ಎಸ್.ರವಿ, ಡೈರಿ ಅಧ್ಯಕ್ಷ ಸುರೇಶ್, ಮುಖಂಡರಾದ ಶ್ರೀನಿವಾಸ್, ಕಾಯಿರೇವಣ್ಣ, ಮಹಾಲಿಂಗು, ದಿಡ್ಡಹಳ್ಳಿ ಕಾರ್‌ಮಹೇಶ್, ಐಪಿ ವೆಂಕಟೇಶ್, ಮಹೇಂದ್ರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.