ನಂಜನಗೂಡಿನ ಅಭಿವೃದ್ಧಿಗೆ “ಕೈ’ ಹಿಡಿದ ಮತದಾರ


Team Udayavani, Apr 14, 2017, 12:53 PM IST

mys6.jpg

ಮೈಸೂರು: ಜಾತಿ ರಾಜಕಾರಣವನ್ನು ಮೀರಿ ನಿಂತು ನಂಜನಗೂಡಿನ ಸ್ವಾಭಿಮಾನಿ ಮತದಾರರು ಅಭಿವೃದ್ಧಿಗೆ ಮತ ನೀಡಿದ್ದಾರೆ ಎಂದು ರಾಜಕೀಯ ನಾಯಕರು ವಿಶ್ಲೇಷಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ಕ್ಷೇತ್ರದ ಶಾಸಕ ರಾಗಿದ್ದ ವಿ. ಶ್ರೀನಿವಾಸಪ್ರಸಾದ್‌, ಕಂದಾಯ ಮಂತ್ರಿಯಾಗಿಯೂ ಕ್ಷೇತ್ರದ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ ಎಂಬ ಮಾತಿಗೆ ಮನ್ನಣೆ ದೊರೆತಿದ್ದು,

ಕ್ಷೇತ್ರದ ಪ್ರತಿನಿಧಿಯಾಗಿ ತಾನು ಮಾಡಿದ ಅಭಿವೃದ್ಧಿ ಕಾರ್ಯ ಜನರ ಮುಂದಿಟ್ಟು ಮತ ಕೇಳುವ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಚ್‌.ಸಿ.ಮಹದೇವಪ್ಪ ಹಾಗೂ ಸಂಸದ ಆರ್‌.ಧ್ರುವನಾರಾಯಣ ಸೇರಿದಂತೆ ಕಾಂಗ್ರೆಸ್‌ ನಾಯಕರನ್ನು ಹೀನಾಯ ಮಾನವಾಗಿ ಬೈಯುವುದನ್ನೇ ರಾಜಕೀಯ ಅನುಭವ ಎಂದುಕೊಂಡಿದ್ದ ಪ್ರಸಾದ್‌ಗೆ ಪಾಠ ಕಲಿಸಿದ್ದಾರೆ ಎಂದು ರಾಜಕೀಯ ನಾಯಕರು ಹೇಳುತ್ತಾರೆ.

ಶ್ರೀನಿವಾಸಪ್ರಸಾದ್‌ ಅವರ ಟೀಕೆಯ ಉದ್ದೇಶ ಅರಿತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದುದ್ದಕ್ಕೂ ಅಪ್ಪಿ$ತಪ್ಪಿಯೂ ಪ್ರಸಾದ್‌ ಅವರ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡಲಿಲ್ಲ. ಆದರೆ, ಚುನಾವಣಾ ಕಾರ್ಯಕ್ಕೆ ನಿಯುಕ್ತಗೊಂಡಿದ್ದ ಮಂತ್ರಿಗಳು ಮತ್ತು ಕಾಂಗ್ರೆಸ್‌ ಮುಖಂಡರು ಪ್ರಸಾದ್‌ ಅವರಿಗೆ ತಿರುಗೇಟು ನೀಡುವ ಕೆಲಸ ಸಮರ್ಪಕವಾಗಿ ಬಳಸಿಕೊಂಡರು.

ಈ ಉಪ ಚುನಾವಣೆಯ ಫ‌ಲಿತಾಂಶ ಮುಂಬರುವ ಚುನಾವಣೆಗೆ ದಿಕ್ಸೂಚಿ ಎಂದು ಬಣ್ಣಿಸುತ್ತಾ ಸುಮಾರು 20 ದಿನಗಳ ಕಾಲ ಮೈಸೂರಿನಲ್ಲೇ ಠಿಕಾಣಿ ಹೂಡಿ ನಂಜನಗೂಡು- ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ನಿರಂತರ ವಾಗಿ ಪ್ರಚಾರ ಮಾಡುತ್ತಾ ಈ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಬಿಂಬಿಸಿ ಕೊಂಡಿದ್ದ ಬಿಜೆಪಿ ರಾಜಾÂಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನಾಯಕತ್ವಕ್ಕೆ ಈ ಫ‌ಲಿತಾಂಶ ದೊಡ್ಡ ಪೆಟ್ಟು ನೀಡಿದೆ.

ನಂಜಗೂಡು ಕ್ಷೇತ್ರದ ಚುನಾವಣಾ ಉಸ್ತುವಾರಿ ಯಾಗಿ ತನ್ನ ಅತ್ಯಾಪ್ತರಾದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣರನ್ನು ನೇಮಿಸಿದ್ದ ಯಡಿಯೂರಪ್ಪತಾವೇ ಅಭ್ಯರ್ಥಿ ಎಂದು ಹೇಳುತ್ತಾ ಹಳ್ಳಿ ಹಳ್ಳಿ ಸುತ್ತಿದರು. ಆದರೆ, ಅಭ್ಯರ್ಥಿಯಾಗಿದ್ದ ಪ್ರಸಾದ್‌ ಭೇಟಿ ನೀಡಿದ ಹಳ್ಳಿಗಳ ಸಂಖ್ಯೆ ಎರಡಂಕಿಯನ್ನು ದಾಟಲಿಲ್ಲ. ಇದಕ್ಕೆ ಅವರ ಆರೋಗ್ಯಕೂಡ ಸ್ಪಂದಿಸಲಿಲ್ಲ.

ಜತೆಗೆ ಹಿರಿಯ ನಾಯಕನಾದ ನನ್ನ ಬಳಿಗೆ ಮತದಾರರು ಬರಬೇಕು ಎಂಬ ಅವರ ಸ್ವಾಭಿಮಾನ ದೊಡ್ಡ ಪೆಟ್ಟು ನೀಡಿತು. ಜತೆಗೆ ಈ ಉಪ ಚುನಾವಣೆಯಲ್ಲಿ ಗೆದ್ದರೆ ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಬಲಗೊಳ್ಳುತ್ತದೆ ಎಂಬ ಕಾರಣಕ್ಕೆ ಅವರ ವಿರೋಧಿ ಗುಂಪು ನೀಡಿದ ಒಳ ಏಟುಗಳೂ ಕೂಡ ಭಾರೀ ಅಂತರದ ಸೋಲಿಗೆ ಕಾರಣ ಎಂದು ವಿಶ್ಲೇಷಿಸ ಲಾಗುತ್ತಿದೆ. 

ಇದಕ್ಕೆ ಪ್ರತಿಯಾಗಿ ಕಳಲೆ ಕೇಶವಮೂರ್ತಿ ಯನ್ನು ಕಾಂಗ್ರೆಸ್‌ಗೆ ಕರೆತಂದು ಅಭ್ಯರ್ಥಿಯಾಗಿಸು ವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಸದ ಆರ್‌. ಧ್ರುವನಾರಾಯಣ ತಮ್ಮ ಪಕ್ಷದ ಅಭ್ಯರ್ಥಿಗಳ ಜತೆಗೆ ಹಳ್ಳಿ ಹಳ್ಳಿ ತಿರುಗಿದರು. ಅಭ್ಯರ್ಥಿ ಆಯ್ಕೆ ಬಗ್ಗೆ ಆರಂಭದಲ್ಲಿ ಅಸಮಾ ಧಾನಗೊಂಡಿದ್ದ ಸಚಿವ ಎಚ್‌.ಸಿ.ಮಹದೇವಪ್ಪ ಕೂಡ ನಂತರದ ದಿನಗಳಲ್ಲಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಿದರು.

ಅಂತಿಮ ವಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 8 ದಿನಗಳ ಕಾಲ ಮೈಸೂರಲ್ಲಿ ಠಿಕಾಣಿ ಹೂಡಿ ಚುನಾವಣಾ ರಣತಂತ್ರ ರೂಪಿಸಿದ್ದಲ್ಲದೆ, ಕ್ಷೇತ್ರದಲ್ಲಿ ನಾಲ್ಕುದಿನಗಳ ಕಾಲ ರೋಡ್‌ ಶೋ ನಡೆಸಿ, ಯಾರ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡದೆ ನಾಲ್ಕು ವರ್ಷಗಳ ನಮ್ಮ ಕೆಲಸಕ್ಕೆ ಕೂಲಿ ಕೊಡಿ ಎಂದು ಮತಯಾಚನೆ ಮಾಡಿದ್ದು ಅಂತಿಮವಾಗಿ ಫ‌ಲ ನೀಡಿದೆ.

ಹಾಗೆ ನೋಡಿದರೆ ಕ್ಷೇತ್ರ ಪುರ್ನವಿಂಗಡಣೆ ನಡೆದ ಪ.ಜಾತಿ ಮೀಸಲು ಕ್ಷೇತ್ರವಾದ ನಂಜನಗೂಡು ಕ್ಷೇತ್ರಕ್ಕೆ 2008ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿತ್ತು. 2013ರ ಚುನಾವಣೆಯ ವೇಳೆಗೆ ಬಿಜೆಪಿ ಒಡೆದ ಮನೆಯಾಗಿ ಕೆಜೆಪಿ, ಬಿಎಸ್‌ಆರ್‌ ಕಾಂಗ್ರೆಸ್‌ ಆದ ಹಿನ್ನೆಲೆ ಈ ಒಡಕಿನ ಲಾಭ ಪಡೆದ ಕಳಲೆ ಕೇಶವಮೂರ್ತಿ ಜೆಡಿಎಸ್‌ ಅಭ್ಯರ್ಥಿಯಾಗಿ 8941 ಮತಗಳ ಅಂತರದಿಂದ ಪ್ರಸಾದ್‌ ವಿರುದ್ಧ ಸೋಲು ಕಂಡಿದ್ದರು.

ಮಾಜಿ ಸಚಿವ ಡಿ.ಟಿ.ಜಯಕುಮಾರ್‌ ನಿಧನಾನಂತರ ಕ್ಷೇತ್ರದಲ್ಲಿ ಮುಂಚೂಣಿಗೆ ಬಂದಿದ್ದ ಕಳಲೆ ಕೇಶವಮೂರ್ತಿ ತಮ್ಮ ಸರಳತೆ, ಎಲ್ಲರೊಂದಿಗೆ ಬೆರೆಯುವ ಗುಣದಿಂದಾಗಿ ಜನರಿಗೆ ಹತ್ತಿರವಾಗಿದ್ದರು. ಎರಡು ಬಾರಿ ಪ್ರಸಾದ್‌ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಆ ಅನುಕಂಪವೂ ಈ ಚುನಾವಣೆಯಲ್ಲಿ ಕೆಲಸ ಮಾಡಿದೆ.

ಜತೆಗೆ ಶ್ರೀನಿವಾಸಪ್ರಸಾದ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಉಪ ಚುನಾವಣೆಯನ್ನು ದೃಷ್ಟಿ ಯಲ್ಲಿಟ್ಟುಕೊಂಡು ಇಡೀ ರಾಜ್ಯದಲ್ಲಿ ನಂಜನಗೂಡನ್ನು ಪೈಲಟ್‌ ಯೋಜನೆಯನ್ನಾಗಿ ತೆಗೆದುಕೊಂಡು ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ಕ್ಷೇತ್ರದ 20 ಸಾವಿರ ಜನರಿಗೆ ಸಬ್ಸಿಡಿ ಸಾಲ ನೀಡಲಾಯಿತು.

ಜತೆಗೆ ಪಟ್ಟಣದಲ್ಲಿ 125 ಕೋಟಿ ರೂ. ಸೇರಿದಂತೆ ಕ್ಷೇತ್ರಾದ್ಯಂತ 600 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ನಂಜನಗೂಡಿನ ಅಭಿವೃದ್ಧಿ ಪರ್ವ ಆರಂಭವಾಯಿತು ಎಂದು ಜನತೆಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್‌ ನಾಯಕರು ಸಫ‌ಲರಾಗಿದ್ದು, ಈ ಚುನಾವಣೆ ಗೆಲುವಿಗೆ ಕಾರಣ ಎನ್ನಲಾಗುತ್ತಿದೆ. ಜತೆಗೆ ಮಾಜಿ ಸಚಿವ ದಿ.ಎಂ.ಮಹದೇವು ಜತೆಗೆ ಹೊಂದಿದ್ದ ಹಗೆತನದ ಕಾರಣ ಕೂಡ ಶ್ರೀನಿವಾಸಪ್ರಸಾದ್‌ ಸೋಲಿನಲ್ಲಿ ಪಾತ್ರವಹಿಸಿದೆ ಎನ್ನುತ್ತಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

OM BIrla

Waqf ಸಮಿತಿಯಿಂದ ದೂರ: ಇಂದು ಸ್ಪೀಕರ್‌ ಜತೆ ವಿಪಕ್ಷ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.