ದುಶ್ಚಟಗಳಿಂದ ಆರೋಗ್ಯ ಏರುಪೇರು
Team Udayavani, Apr 14, 2017, 3:02 PM IST
ಧಾರವಾಡ: ಇಂದಿನ ಆಧುನಿಕ ಜೀವನ ಶೈಲಿ ಹಾಗೂ ದುಶ್ಚಟಗಳಿಗೆ ಬಲಿಯಾದ ಪರಿಣಾಮ ಆರೋಗ್ಯದಲ್ಲಿ ಏರುಪೇರುಗಳು ಆಗುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಯೋಜನಾ ಸಂಯೋಜಕ ಡಾ|ವಿಶ್ವನಾಥ ಹಿರೇಮಠ ಹೇಳಿದರು.
ತಾಲೂಕಿನ ಮನಸೂರು ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಟರಿಣಾಮಗಳು ಮತ್ತು 2003ರ ಕಾಯ್ದೆ ಕುರಿತು ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಆರೋಗ್ಯ ಹೊಂದಬೇಕಾದರೆ ನಮ್ಮ ಜೀವನ ಶೈಲಿ ಅದರಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಉತ್ತಮ ಜೀವನ ಶೈಲಿ, ಉತ್ತಮ ಗುಣಮಟ್ಟದ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದರು. ಇಂದಿನ ದಿನಮಾನದಲ್ಲಿ ಸಕ್ಕರೆ ಖಾಯಿಲೆ, ರಕ್ತದೊತ್ತಡಗಳು ಜನರ ಜೀವ ಹಿಂಡುತ್ತಿದ್ದು, ಇವುಗಳ ಕಡಿವಾಣಕ್ಕೆ ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ.
ಆರೋಗ್ಯದ ಕಡೆ ನಿರ್ಲಕ್ಷ ಮಾಡದೇ ಆಗಾಗ ಆರೋಗ್ಯ ತಪಾಸಣೆ ಮಾಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬಹುದಾಗಿದೆ ಎಂದರು. ಜಿಲ್ಲಾ ಎನ್.ಸಿ.ಡಿ.ಕ್ಲಿನಿಕ್ ವೈದ್ಯಾಧಿಕಾರಿ ಭಾಸ್ಕರ್ ಉಗರಗೋಳ ಮಾತನಾಡಿ, ವಯೋವೃದ್ಧರ ಸಣ್ಣ-ಪುಟ್ಟ ಆರೋಗ್ಯದ ಸಮಸ್ಯೆಗಳ ಬಗ್ಗೆ ನಿರ್ಲಕ್ಷé ಮಾಡದೇ ಅವರ ಯೋಗಕ್ಷೇಮದತ್ತ ವಿಶೇಷ ಕಾಳಜಿ ವಹಿಸಬೇಕು.
ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ವೃದ್ಧರಿಗೆ ವಿಶೇಷ ಮತ್ತು ಉಚಿತ ಸೇವೆಗಳು ಲಭ್ಯವಿದೆ ಎಂದರು. 30 ವರ್ಷ ಮೇಲ್ಪಟ್ಟವರು ತಮ್ಮ ಹತ್ತಿರದ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಮಧುಮೇಹ ಮತ್ತು ರಕ್ತದೊತ್ತಡವನ್ನು ಉಚಿತವಾಗಿ ತಪಾಸಿಸಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಸರಕಾರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದರು.
ಅತಿಥಿಯಾಗಿದ್ದ ಕವಿವಿಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ|ಸಂಗೀತಾ ಆರ್. ಮಾನೆ ಮಾತನಾಡಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತೆ ವೀಣಾ, ತಂಬಾಕು ಸೇವನೆಯ ದುಷ್ಟರಿಣಾಮದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಮನಸೂರ ಗ್ರಾಪಂ ಅಧ್ಯಕ್ಷೆ ರುಕ್ಮಿಣಿ ತೇಗೂರ ಅಧ್ಯಕ್ಷತೆ ವಹಿಸಿದ್ದರು.
ಡಾ| ಆಶಾಲತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಸಹಾಯಕರು,ಗ್ರಾಪಂ ಸದಸ್ಯರು ಪಾಲ್ಗೊಂಡಿದ್ದರು. ಕವಿವಿ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಹೊನ್ನಮ್ಮಾ ಓಲೇಕಾರ, ಅರ್ಚನಾ ದೇವತ್ತಿ ಸ್ವಾಗತಿಸಿ, ನಿರೂಪಿಸಿದರು. ಮರಿಯಪ್ಪಾ ಸಾವಲ್ಲಗಿ ವಂದಿಸಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಕ್ಲಿನಿಕ್, ಜಿಲ್ಲಾ ತಂಬಾಕು ವ್ಯಸನಮುಕ್ತ ಕೇಂದ್ರ, ಜಿಲ್ಲಾಸ್ಪತ್ರೆ, ಕವಿವಿಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗ, ಯುವ ಸ್ಪಂದನ ಕೇಂದ್ರ ಹಾಗೂ ಮನಸೂರ ಗ್ರಾಪಂ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.