ವಿದ್ಯಾರ್ಥಿಗಳಿಗೆ ಅಂಬೇಡ್ಕರ್‌ ಸ್ಫೂರ್ತಿಯಾಗಲಿ: ಸಚಿವ ಪ್ರಮೋದ್‌ 


Team Udayavani, Apr 15, 2017, 2:43 PM IST

140417Astro01.jpg

ಉಡುಪಿ: ವಿದ್ಯಾರ್ಥಿಗಳು ಸಾಧನೆ ಮಾಡಲು ಡಾ| ಬಿ.ಆರ್‌. ಅಂಬೇಡ್ಕರ್‌ ಆದರ್ಶಗಳು ಸ್ಫೂರ್ತಿಯಾಗಲಿ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶದ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪುರಭವನದಲ್ಲಿ ಶುಕ್ರವಾರ ನಡೆದ ಡಾ| ಬಿ.ಆರ್‌. ಅಂಬೇಡ್ಕರ್‌ ರಾಜ್ಯಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತ ನಾಡಿದರು.

ಅಸ್ಪೃಶ್ಯತೆ ಕಾರಣದಿಂದ ಬಾಲ್ಯದಲ್ಲಿ ಶಾಲೆಯ ಹೊಸ್ತಿಲಲ್ಲಿ ಕುಳಿತು ವಿದ್ಯಾಭ್ಯಾಸ ಮಾಡಿದ ಅಂಬೇಡ್ಕರ್‌ ಅನಂತರ ಕೊಲಂಬಿಯ ವಿ.ವಿ.ಯಿಂದ ಡಾಕ್ಟರೇಟ್‌ ಸಹಿತ ಹಲವು ಡಿಗ್ರಿಗಳನ್ನು ಪಡೆದರು. ರಾಷ್ಟ್ರದ ಕಾನೂನುಸಚಿವರಾಗಿ ದುರ್ಬಲರು, ಶೋಷಿತರು,ಮಹಿಳೆಯರ ಪರವಾಗಿ ಹಲವು ಕಾನೂನು ರೂಪಿಸಲು ಶ್ರಮಿಸಿದ್ದರು. ಕಾರ್ಮಿಕ ಕಾನೂನು, ಹಿಂದೂ ಕೋಡ್‌ ಬಿಲ್‌ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಹಕ್ಕು ನೀಡುವ ಕುರಿತು ಪ್ರಥಮವಾಗಿ ಪ್ರಯತ್ನಿಸಿದ್ದರು. ಅಂಬೇಡ್ಕರ್‌ ಅವರನ್ನು ದಲಿತರ ಪ್ರತಿನಿಧಿಯಾಗಿ ಪ್ರತಿ ಬಿಂಬಿಸುವುದು ಸರಿಯಲ್ಲ, ಅವರು ಇಡೀ ಭಾರತಕ್ಕೆ ಮತ್ತು ವಿಶ್ವಕ್ಕೆ ಸೇರಿದ ಅಸಾಮಾನ್ಯ ವ್ಯಕ್ತಿ ಎಂದರು.

ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ಅಪರ ಜಿಲ್ಲಾದಿಕಾರಿ ಜಿ. ಅನುರಾಧಾ, ಮಹಿಳಾ ಸರಕಾರಿ ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಜಗದೀಶ ರಾವ್‌, ಚಿಂತಕ ಬೆಂಗಳೂರಿನ ಶಿವಸುಂದರ್‌, ಮಂಗಳೂರು ವಿ.ವಿ.ಯ ಎನ್ನೆಸ್ಸೆಸ್‌ ಸಂಯೋಜನಾಧಿಕಾರಿ ಪ್ರೊ| ವಿನಿತಾ ರೈ ಉಪಸ್ಥಿತರಿದ್ದರು.ರಾಜ್ಯ ಎನ್ನೆಸ್ಸೆಸ್‌ ಅಧಿಕಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಪದ ನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಎಕ್ಕಾರು ಸ್ವಾಗತಿಸಿದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 

“ಎನ್ನೆಸ್ಸೆಸ್‌, ಕ್ರೀಡೆ: ಗುರಿ-ಅನುದಾನ ಹೆಚ್ಚಳ’
ತಾನು ಸಚಿವನಾಗಿದ್ದಾಗ ರಾಜ್ಯದಲ್ಲಿ 3.5 ಲಕ್ಷ ಎನ್ನೆಸ್ಸೆಸ್‌ ಸ್ವಯಂ ಸೇವಕರಿದ್ದು, ಆದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಸೂಚನೆ ಕೊಟ್ಟಿದ್ದೆ. ಪ್ರಸ್ತುತ 4.75 ಲಕ್ಷ ಸ್ವಯಂಸೇವಕರಿದ್ದು, 1 ವರ್ಷದೊಳಗೆ 10 ಲಕ್ಷ ಗುರಿ ಮುಟ್ಟಲು ಶ್ರಮಿಸಲಾಗುವುದು. ರಾಜ್ಯದ ಬಜೆಟ್‌ನಲ್ಲಿ ನನ್ನ ಶಿಫಾರಸಿನ ಮೇರೆಗೆ ಎನ್ನೆಸ್ಸೆಸ್‌ಗೆ ನೀಡುವ ಅನುದಾನವನ್ನು 5 ಕೋ.ರೂ.ಯಿಂದ 13 ಕೋ. ರೂ. ಹಾಗೂ ಕ್ರೀಡಾ ಇಲಾಖೆಗೆ 145 ಕೋ. ರೂ.ಯಿಂದ 285 ಕೋ. ರೂ.ಗಳಿಗೆ ಹೆಚ್ಚಿಸಲಾಗಿದೆ. ಎನ್ನೆಸ್ಸೆಸ್‌ ಅನ್ನು ಬಲಪಡಿಸಲು ಹಾಗೂ ವಿದ್ಯಾರ್ಥಿಗಳನ್ನು ಆಕರ್ಷಿಸಲು ಅನೇಕ ಕಾರ್ಯಕ್ರಮ ರೂಪಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.