ದೊಡ್ಡ ಸಂವಿಧಾನ ಕರ್ತೃ ಅಂಬೇಡ್ಕರ್
Team Udayavani, Apr 15, 2017, 3:47 PM IST
ಶಹಾಬಾದ: ವಿಶ್ವದ ಅತಿ ದೊಡ್ಡ ಸಂವಿಧಾನ ರಚಿಸುವ ಮೂಲಕ ಭಾರತೀಯರ ಬದುಕು ರೂಪಿಸಿದ ಮಹಾನ್ ನಾಯಕ ಅಂಬೇಡ್ಕರ್ ರಾಗಿದ್ದಾರೆ ಎಂದು ಎಸ್.ಜಿ. ವರ್ಮಾ ಹಿಂದಿ ಶಾಲೆ ಶಿಕ್ಷಕ ಬಾಬಾಸಾಹೇಬ ಸಾಳುಂಕೆ ಹೇಳಿದರು.
ಶುಕ್ರವಾರ ನಗರದ ಎಸ್.ಜಿ. ವರ್ಮಾ ಹಿಂದಿ ಶಾಲೆಯಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್‌ರ ಸತತ ಪರಿಶ್ರಮದ ಫಲವಾಗಿ ಸಂವಿಧಾನ ರೂಪುಗೊಂಡಿದೆ.
ದೀನ ದಲಿತರಿಗೆ ಬೆಳಕು ನೀಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದ್ದಾರೆ. ಹೀಗಾಗಿ ಅವರು ದೇಶದ ಪ್ರತಿಯೊಬ್ಬರ ಮನದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ ಎಂದು ಬಣ್ಣಿಸಿದರು. ವೀರಯ್ನಾ ಹಿರೇಮಠ ಮಾತನಾಡಿ, ಅಂಬೇಡ್ಕರ್‌ರ ಜೀವನ ಆದರ್ಶ ನಮಗೆಲ್ಲರಿಗೂ ಮಾರ್ಗದರ್ಶನ. ಅವರ ಹೋರಾಟವೇ ನಮಗೆ ಸ್ಫೂರ್ತಿ.
ಭಾರತ ಇದೀಗ ಮುಂದುವರಿಯುತ್ತಿರುವುದು ಅವರ ಚಿಂತನೆಯ ಫಲವಾಗಿದ್ದು, ದೇಶವು ಸದಾ ಕಾಲ ಅವರನ್ನು ಸ್ಮರಿಸಲಿದೆ ಎಂದರು. ಎಸ್.ಜಿ.ವರ್ಮಾ ಹಿಂದಿ ಶಾಲೆಯ ಗುರುಮಾತೆ ದಮಯಂತಿ ಸೂರ್ಯವಂಶಿ, ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಸುಧಿಧೀರ ಕುಲಕರ್ಣಿ,ಈರಣ್ಣ ಕೆಂಬಾವಿ, ಕುನಾಲ, ಮಲ್ಲಿನಾಥ ಪಾಟೀಲ, ರಮೇಶ ಮಹೇಂದ್ರಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.