ಜಾನಪದ ಕಾರ್ಯಕ್ರಮ ಕೆಲವರ ಸೊತ್ತಲ್ಲ
Team Udayavani, Apr 15, 2017, 3:48 PM IST
ಚಿತ್ತಾಪುರ: ಸರ್ಕಾರದ ಜಾನಪದ ಕಾರ್ಯಕ್ರಮಗಳು ಕೆಲವರ ಸೊತ್ತಾಗಬಾರದು ಎಂದು ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪೊಲೀಸ್ ಪಾಟೀಲ ಹೇಳಿದರು. ತಾಲೂಕಿನ ರಾಮತೀರ್ಥ ಗ್ರಾಮದಲ್ಲಿ ಗಣೇಶಾಂಜನೇಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಾನಪದ ಝೇಂಕಾರ ಹಾಗೂ ವಚನ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜಾನಪದ ಕಲಾವಿದರಿದ್ದಾರೆ. ಅವರಿಗೆ ಸರ್ಕಾರದ ಕಾರ್ಯಕ್ರಮಗಳು ಸಿಗುವಂತಾಗಬೇಕು. ಆದರೆ ಈಗ ಸರ್ಕಾರಿ ಕಾರ್ಯಕ್ರಮಗಳು ಕೆಲವರ ಸೊತ್ತಾಗುತ್ತಿವೆ. ಇದರಿಂದ ಮೂಲ ಜಾನಪದ ಕಲಾವಿದರು ಬೆಳಕಿಗೆ ಬಾರದೇ ವಂಚಿತಗೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ನಾಗಯ್ಯ ಸ್ವಾಮಿ ಅಲ್ಲೂರ ಮಾತನಾಡಿ, ಗ್ರಾಮೀಣ ಭಾಗದ ಮೂಲ ಜಾನಪದ ಕಲಾವಿದರನ್ನು ಗುರುತಿಸಿ ಅವರಿಗೆ ವೇದಿಕೆ ಒದಗಿಸಿ ಸನ್ಮಾನಿಸುವುದು ಜಿಲ್ಲಾದ್ಯಂತ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಅದಕ್ಕೆ ಜನರು ಕಲಾವಿದರಿಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಕಜಾಪ ತಾಲೂಕು ಅಧ್ಯಕ್ಷ ಚನ್ನವೀರ ಕಣಗಿ, ವಲಯ ಅಧ್ಯಕ್ಷ ಭೀಮರಾಯ ಆಡಕಿ, ಹೊಂಗಿರಣ ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಮಹ್ಮದ್ ಇಬ್ರಾಹಿಂ, ಗ್ರಾಪಂ ಸದಸ್ಯ ದೇವಿಂದ್ರಪ್ಪ ಜೈನ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗಣೇಶಾಂಜನೇಯ ದೇವಸ್ಥಾನದ ಅಧ್ಯಕ್ಷ ಸಿದ್ದಣ್ಣ ಕಾವಲದಾರ ಅಧ್ಯಕ್ಷತೆ ವಹಿಸಿದ್ದರು.
ಜಾನಪದ ಝೇಂಕಾರದಲ್ಲಿ ಕಲಾವಿದರಾದ ವೀರಣ್ಣ ಮಾಸ್ತರ ಅಲ್ಲೂರ ವಚನ ಗಾಯನ ಹಾಡಿದರು. ನೈನೋದ್ದಿನ್ ಮಂಗಲಗಿ, ಕಾಶಿನಾಥ ನೀಲಹಳ್ಳಿ, ಶಂಕರ ಶಾಸ್ತ್ರಿ, ತಮ್ಮರಾಯ ಕಾಮೊನೋರ್, ಶಾಂತಕುಮಾರ ಭಂಕಲಗಿ, ದೇವಿಂದ್ರಪ್ಪ ಹಕ್ಕಿ, ಮುಕ್ತಂಸಾಬ್ ಮುಲ್ಲಾ, ಮಹಾದೇವಿ, ಚಂದಮ್ಮ ಅವರಿಂದ ವಿವಿಧ ಜಾನಪದ ಕಲಾ ಪ್ರದರ್ಶನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.