ಮಲ್ಯ ಆಸ್ತಿ ಜಪ್ತಿ: ನಿಲುವು ತಿಳಿಸಲು ಹೈ ಸೂಚನೆ
Team Udayavani, Apr 18, 2017, 11:41 AM IST
ಬೆಂಗಳೂರು: ಜಪ್ತಿ ಮಾಡಿದ ಮದ್ಯದ ದೊರೆ ವಿಜಯ್ ಮಲ್ಯ ಒಡೆತನದ ಯುನೈಟೆಡ್ ಬ್ರಿವರೀಸ್ ಹೋಲ್ಡಿಂಗ್ ಲಿಮಿಟೆಡ್(ಯುಬಿಎಚ್‌ಎಲ್)ನ ಷೇರುಗಳನ್ನು ಮಾರಾಟ ಮಾಡಿದ ಹಣವನ್ನು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಖಾತೆಯಲ್ಲಿ ಠೇವಣಿ ಇಡುವ ಕುರಿತು ತಮ್ಮ ನಿಲುವು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್ ಸೂಚಿಸಿದೆ.
ವಿಚಾರಣೆ ವೇಳೆ ಕಂಪನಿ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ಯುಬಿಎಚ್‌ಎಲ್‌ನ ಷೇರುಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಇವು ನಿಷ್ಕ್ರಿಯವಾಗಲು ಬಿಡಬಾರದು. ಈ ಷೇರುಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಬ್ಯಾಂಕ್‌ಗಳ ಸಾಲ ಮರುಪಾವತಿಗೆ ಬಳಸಬಹುದು ಅಥವಾ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಬಳಿಯಾದರೂ ಇರಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಇಡಿ ಪರ ವಕೀಲ ಎಸ್.ಮಹೇಶ್, ಮುಂದಿನ ವಿಚಾರಣೆ ವೇಳೆ ಈ ಸಂಬಂಧ ಸೂಕ್ತ ಮಾಹಿತಿ ನೀಡಲಾಗುವುದು ಎಂದು ಪ್ರತಿಕ್ರಿಯಿಸಿದರು. ವಾದ ಆಲಿಸಿದ ದ್ವಿಸದಸ್ಯ ನ್ಯಾಯಪೀಠ, ವಿಚಾರಣೆಯನ್ನು ಏ.20ಕ್ಕೆ ಮುಂದೂಡಿತು.
ದೇಶದ ವಿವಿಧ ಬ್ಯಾಂಕ್‌ಗಳಿಂದ ಪಡೆದಿದ್ದ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಉದ್ಯಮಿ ವಿಜಯ್ ಮಲ್ಯ ಒಡೆತನದ ಯುಬಿಎಚ್‌ಎಲ್ ಸಂಸ್ಥೆ ಮುಚ್ಚಲು ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ
Bengaluru: ಬಸ್ ಕಂಡಕ್ಟರ್, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ
MUST WATCH
ಹೊಸ ಸೇರ್ಪಡೆ
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ
Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.