ಮೇ ಮೊದಲ ವಾರ ಇಂದಿರಾ ಕ್ಯಾಂಟೀನ್ ಶುರು: ಮೇಯರ್
Team Udayavani, Apr 18, 2017, 12:00 PM IST
ಬೆಂಗಳೂರು: ಮೇ ಮೊದಲ ವಾರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೇಯರ್ ಪದ್ಮಾವತಿ ಹೇಳಿದರು. ನಗರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವ “ಇಂದಿರಾ ಕ್ಯಾಂಟೀನ್’ ಪ್ರಾರಂಭಿಸುವ ಸಂಬಂಧ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,
ನಗರದ 198 ವಾರ್ಡ್ಗಳಲ್ಲಿ ಸೂಕ್ತ ಸ್ಥಳ ಗುರುತಿಸುವ ಕಾರ್ಯ ನಡೆದಿದೆ. ಟೆಂಡರ್ ಯಾರಿಗೆ ನೀಡಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ತಿಳಿಸಿದರು. ಈ ವೇಳೆ ಮಾತನಾಡಿದ ಸಚಿವ ಜಾರ್ಜ್, ಹೋಟೆಲ್ ಮಾಲೀಕರ ಸಂಘವು ಕ್ಯಾಂಟೀನ್ ನಿರ್ವಹಣೆ ಹೊಣೆ ಹೊರಲು ಸಿದ್ಧವಿಲ್ಲದ ಕಾರಣ, ಪರ್ಯಾಯ ಮಾರ್ಗೋಪಾಯ ಹುಡುಕುವ ಅಗತ್ಯವಿದೆ. ಜತೆಗೆ 198 ವಾರ್ಡ್ಗಳಲ್ಲಿ ಕ್ಯಾಂಟೀನ್ ತೆರೆಯಲು ಸೂಕ್ತ ಸ್ಥಳ ಗುರುತಿಸಿ ಅಂತಿಮಗೊಳಿಸುವಂತೆ ಸೂಚನೆ ನೀಡಿದರು.
ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಇಂದಿರಾ ಕ್ಯಾಂಟೀನ್ಗಾಗಿ 198 ವಾರ್ಡ್ಗಳಲ್ಲಿ ಸ್ಥಳ ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ವಾರ್ಡ್ಗಳಲ್ಲೂ ಎರಡು ಮೂರು ಸ್ಥಳಗಳನ್ನು ಗುರುತಿಸಿದ್ದು ಇನ್ನೂ ಅಂತಿಮವಾಗಿಲ್ಲ. ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.