ನವೀಕೃತ ಬಿಬಿಎಂಪಿ ಹೆರಿಗೆ ಆಸ್ಪತ್ರೆಗೆ ಚಾಲನೆ
Team Udayavani, Apr 18, 2017, 12:16 PM IST
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಲಕ್ಷ್ಮೀದೇವಿನಗರ ವಾರ್ಡ್‌ನಲ್ಲಿ 61 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾದ ಬಿಬಿಎಂಪಿ ಹೆರಿಗೆ ಆಸ್ಪತ್ರೆಗೆ ಸೋಮವಾರ ಚಾಲನೆ ನೀಡಿಲಾಯಿತು.
ಮೇಯರ್ ಜಿ.ಪದ್ಮಾವತಿ ನವೀಕೃತ ಆಸ್ಪತ್ರೆ ಉದ್ಘಾಟಿಸಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳಿರುವುದು ಕಂಡು ಬಂದಿತ್ತು. ಅದರ ಹಿನ್ನೆಲೆಯಲ್ಲಿ ಮೊದಲ ಮಹಡಿ ನಿರ್ಮಾಣ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದು ಆಸ್ಪತ್ರೆಯನ್ನ ಈಗ ನವೀಕರಣಗೊಳಿಸಲಾಗಿದೆ ಎಂದರು.
ಈ ಪ್ರದೇಶದಲ್ಲಿ ಹೆರಿಗೆ ಆಸ್ಪತ್ರೆಯನ್ನು ನವೀಕರಣ ಮಾಡಲಾಗಿರುವುದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ. ಲಕ್ಷಿದೇವಿ ನಗರದಲ್ಲಿ ಒಟ್ಟು 7 ಕೊಳಚೆ ಪ್ರದೇಶಗಳಿದ್ದು ಕಡು ಬಡವರೇ ಇಲ್ಲಿ ಹೆಚ್ಚಿದ್ದಾರೆ. ಸಾರ್ವಜನಿಕರು ಸಮರ್ಪಕವಾಗಿ ಆಸ್ಪತ್ರೆಯನ್ನು ಬಳಕೆ ಮಾಡಿಕೊಳ್ಳಬೇಕು.
ಶೀಘ್ರದಲ್ಲಿಯೇ ನರ್ಮ್ ಯೋಜನೆಯಡಿ ಆಸ್ಪತ್ರೆಯಲ್ಲಿ ಪ್ರಯೋಗಾಲಯವನ್ನು ಆರಂಭಿಸಲಾಗುವುದು. ಜನನಿ ಸುರಕ್ಷಾ ಯೋಜನೆ, ಜನನಿ ಮಡಿಲು ಕಿಟ್, ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಜನರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಸಕ ಮುನಿರತ್ನ ಮಾತನಾಡಿ, ಆಸ್ಪತ್ರೆಯ ನವೀಕರಣ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ 4 ತಿಂಗಳಲ್ಲಿ 14 ಬೆಡ್‌ಗಳ ಉಚಿತ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುವುದು. ಇದರೊಂದಿಗೆ ಯಶವಂತಪುರದಲ್ಲಿ 68 ಬೆಡ್‌ಗಳ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯವುಳ್ಳ ಆಸ್ಪತ್ರೆ ಸಹ ತೆರೆಯಲಾಗುವುದು ಎಂದರು.
ಸರ್ಕಾರ ಮತ್ತು ಬಿಬಿಎಂಪಿ ಜನರ ಆರೋಗ್ಯ ಸುಧಾರಣೆಗೆ ಹಲವು ಯೋಜನೆಗಳನ್ನು ಆರಂಭಿಸಿದ್ದು, ಪಾಲಿಕೆ ಆಸ್ಪತ್ರೆಗಳಿಗೆ ಅತ್ಯಾಧುನಿಕ ತಂತ್ರಧಿಜ್ಞಾನದ ಯಂತ್ರೋಪಕರಣಗಳನ್ನು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ನಾಯಕಿ ರಮಿಳಾ ಉಮಾಶಂಕರ್, ಸ್ಥಳೀಯ ಪಾಲಿಕೆ ಸದಸ್ಯ ವೇಲು ನಾಯಕ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Renukaswamy Case: ಶೆಡ್‌ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ
KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ
BJP ; ವಿಜಯೇಂದ್ರ ಬಣದಿಂದ ಚಾಮುಂಡೇಶ್ವರಿ ದರ್ಶನ: ದುಷ್ಟ ಸಂಹಾರವಾಗಲೇಬೇಕು!
Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
Bantwal: 5ನೇ ಮದುವೆಗೆ ಸಿದ್ಧತೆ.. 4ನೇ ಪತ್ನಿಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.