ಓಮರ್ ಅಬ್ದುಲ್ಲಾ ಹೇಳಿಕೆಗೆ ಜೋಶಿ ಖಂಡನೆ
Team Udayavani, Apr 18, 2017, 1:11 PM IST
ಹುಬ್ಬಳ್ಳಿ: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಮಾಜಿ ಪ್ರಧಾನಿ ದೇವೇಗೌಡರನ್ನು ಪರ್ವೇಜ್ ಮುಷರಫ್ಗೆ ಹೋಲಿಕೆ ಮಾಡಿದ್ದನ್ನು ಸಂಸದ ಪ್ರಹ್ಲಾದ ಜೋಶಿ ಖಂಡಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಟೀಕೆ ಸಾಮಾನ್ಯ. ಆದರೆ ವೈಯಕ್ತಿಕವಾಗಿ ಟೀಕೆ ಮಾಡುವುದು ಸರಿಯಲ್ಲ.
ಹಿರಿಯ ರಾಜಕಾರಣಿಯನ್ನು ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್‌ಮುಷರ್ರಫ್ಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ಹಿಂದೆ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ ಓಮರ್, ದೇವೇಗೌಡರ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡಿರುವುದು ಖಂಡನೀಯ. ಓಮರ್ ವಿವಾದಾತ್ಮಕ ಟ್ವೀಟ್ ಅಳಿಸಿಹಾಕಿ ಕ್ಷಮೆ ಕೇಳಬೇಕು ಎಂದರು.
ತೆಲಂಗಾಣ ರಾಜ್ಯದಲ್ಲಿ ಮುಸಲ್ಮಾನರಿಗೆ ಹೆಚ್ಚಿನ ಪ್ರಮಾಣದ ಮೀಸಲಾತಿ ಕಲ್ಪಿಸಿರುವುದನ್ನು ಬಿಜೆಪಿ ವಿರೋಧಿಸುತ್ತದೆ. ಬಡವರು, ದೀನ ದುರ್ಬಲರಿಗೆ ಮೀಸಲಾತಿ ನೀಡಬೇಕೇ ಹೊರತು ಕೇವಲ ಮುಸಲ್ಮಾನರಿಗೆ ಮಾತ್ರ ಮೀಸಲಾತಿ ನೀಡುವುದು ಸರಿಯಲ್ಲ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಮೀಸಲಾತಿ ನೀಡಿರುವುದು ಖಂಡನೀಯ.
ಮುಸಲ್ಮಾನರನ್ನು ಓಲೈಸುವ ಉದ್ದೇಶದಿಂದ ಕೈಗೊಂಡ ಕ್ರಮವನ್ನು ವಿರೋಧಿಸಿ ಬಿಜೆಪಿ ವತಿಯಿಂದ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಜಮ್ಮು-ಕಾಶ್ಮೀರದಲ್ಲಿ ಸೈನಿಕರ ಮೇಲೆ ಅಲ್ಲಿನ ಕೆಲ ಯುವಕರು ಹಲ್ಲೆ ನಡೆಸಿರುವುದನ್ನು ಪ್ರತಿಯೊಬ್ಬ ದೇಶಪ್ರೇಮಿಯೂ ವಿರೋಧಿಸಬೇಕು.
ಕೆಲವರು ಸೈನಿಕರ ಮೇಲೆ ಹಲ್ಲೆ ನಡೆದಿದ್ದನ್ನು ಬೆಂಬಲಿಸಿರುವುದು ಖಂಡನೀಯ. ಸೈನಿಕರ ಮೇಲೆ ಹಲ್ಲೆ ನಡೆಸಿರುವುದು ದೇಶವಿರೋಧಿ ಕಾರ್ಯವಾಗಿದ್ದು, ನೀಚ ಕೃತ್ಯ ಮಾಡಿದವರಿಗೆ ಶಿಕ್ಷೆ ನೀಡಬೇಕು. ಸೈನಿಕರಿಗೆ ಕಲ್ಲೆಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.