ಕರ್ನಾಟಕ ಹೈಸ್ಕೂಲ್ ಹಳೆ ವಿದ್ಯಾರ್ಥಿಗಳಿಂದ ಬಂಟರ ಸಂಘಕ್ಕೆ 7ಲಕ್ಷ ರೂ.
Team Udayavani, Apr 18, 2017, 5:35 PM IST
ಮುಂಬಯಿ: ಚೆಂಬೂರು ಕರ್ನಾಟಕ ಹೈಸ್ಕೂಲ್‌ನ ಕನ್ನಡ ಮಾಧ್ಯಮದ ಹಳೆವಿದ್ಯಾರ್ಥಿಗಳು ಮಾಜಿ ಪ್ರಾಂಶುಪಾಲ ಕೆ. ಆರ್. ಆಚಾರ್ಯ ಅವರ ಗುರುವಂದನ ಕಾರ್ಯಕ್ರಮವನ್ನು ಕಳೆದ ಎರಡು ವರ್ಷಗಳ ಹಿಂದೆ ಆಯೋಜಿಸಿರುವ ಸಂದರ್ಭ ದೇಣಿಗೆಯಾಗಿ ಸಂಗ್ರಹಗೊಂಡ ಮೊತ್ತದಲ್ಲಿ 7 ಲಕ್ಷ ರೂ. ಉಳಿತಾಯಗೊಂಡಿದ್ದು, ಈ ಮೊತ್ತವನ್ನು ಶಾಲೆಯ ಹಳೆವಿದ್ಯಾರ್ಥಿಗಳು, ಮಾಜಿ ಪ್ರಾಂಶುಪಾಲ ಕೆ. ಆರ್. ಆಚಾರ್ಯ ಹಾಗೂ ಅಭಿನಂದನ ಸಮಿತಿಯ ಅಧ್ಯಕ್ಷ ಸಿಎ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಎ. 12ರಂದು ಬಂಟರ ಸಂಘ ಮುಂಬಯಿಗೆ ಹಸ್ತಾಂತರಿಸಿದರು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರಲ್ಲದೆ, ಈ ಮೊತ್ತದಿಂದ ಬರುವ ಬಡ್ಡಿಯನ್ನು 2017-2018 ರ ಶೈಕ್ಷಣಿಕ ವರ್ಷದಿಂದ ಚೆಂಬೂರು ಕರ್ನಾಟಕ ಹೈಸ್ಕೂಲ್ ಹಾಗೂ ಕನ್ನಡ ಮಾಧ್ಯಮದಲ್ಲಿ ಕಲಿಯುವ ಇತರ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಜಾತಿ, ಮತದ ಭೇದವಿಲ್ಲದೆ ಪ್ರತಿವರ್ಷ ನೀಡುವಂತೆ ವಿನಂತಿಸಿದರು.
ಮಾಜಿ ಪ್ರಾಂಶುಪಾಲ ಕೆ. ಆರ್. ಆಚಾರ್ಯ ಹಾಗೂ ಕನ್ನಡ ಮಾಧ್ಯಮ ಹಳೆವಿದ್ಯಾರ್ಥಿಗಳು ರೂ. 7 ಲಕ್ಷದ ಚೆಕ್‌ನ್ನು ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್. ಶೆಟ್ಟಿ ಅವರು ಉಪಸ್ಥಿತರಿದ್ದರು. ಅಲ್ಲದೆ ಚೆಂಬೂರು ಕರ್ನಾಟಕ ಹೈಸ್ಕೂಲ್‌ನ ಕನ್ನಡ ಮಾಧ್ಯಮ ಶಾಲೆಯ ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.