ಪೊಲೀಸ್‌ ಪಹರೆಯಲ್ಲಿ ತರಬೇಕು ಇಲ್ಲಿಗೆ ಕಸ

Team Udayavani, Apr 19, 2017, 11:48 AM IST

gabrage-sigehalli.jpg

ಬೆಂಗಳೂರು: ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ನಗರದ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆರಂಭ­ವಾದ ಸೀಗೇಹಳ್ಳಿ ತ್ಯಾಜ್ಯ ಸಂಸ್ಕರಣೆ ಘಟಕ ಅವೈಜ್ಞಾನಿಕ ನಿರ್ವಹಣೆಯಿಂದಾಗಿ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ಪೊಲೀಸ್‌ ಪಹರೆಯಲ್ಲಿ ಘಟಕಕ್ಕೆ ತ್ಯಾಜ್ಯ ಸಾಗಿಸಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ. 

ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಿ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಸೀಗೇಹಳ್ಳಿಯಲ್ಲಿ ಸುಮಾರು ಏಳು ಎಕರೆ ಜಮೀನಿನಲ್ಲಿ ಘಟಕ ನಿರ್ಮಿಸಲಾಯಿತು. ಆದರೆ, ಗುತ್ತಿಗೆ ಪಡೆದ ಸಂಸ್ಥೆ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳದ ಕಾರಣ ತ್ಯಾಜ್ಯ ಸುರಿಯಲು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವುದು ಪಾಲಿಕೆಗೆ ತಲೆನೋವಾಗಿ ಪರಿಣಮಿಸಿದೆ.

ಆದರೆ, ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ರಾತ್ರಿ ವೇಳೆ ಕದ್ದು ಮುಚ್ಚಿ ಅಥವಾ ಪೊಲೀಸ್‌ ರಕ್ಷಣೆಯಲ್ಲಿ ತ್ಯಾಜ್ಯವನ್ನು ಘಟಕಕ್ಕೆ ತರುವ ಅನಿವಾರ್ಯತೆ ಎದುರಾಗಿದೆ. ಈ ಹಿಂದೆ 2012ರ ಆಗಸ್ಟ್‌ನಲ್ಲಿ ನಗರದಲ್ಲಿ ತ್ಯಾಜ್ಯ ಸಮಸ್ಯೆ ಉಲ್ಬಣಿಸಿತ್ತು. ಹಲವು ದಿನ ತ್ಯಾಜ್ಯ ವಿಲೇವಾರಿ ಸ್ಥಗಿತಗೊಂಡು ಸಾವಿರಾರು ಟನ್‌ ಕಸ ರಸ್ತೆಯಲ್ಲೇ ಉಳಿದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲಿಕೆ ಮಾನ ಹರಾಜಾಗಿತ್ತು. ಅದಾದ ಬಳಿಕ ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗಾಗಿ ಸೀಗೇಹಳ್ಳಿ ಸೇರಿದಂತೆ ಆರು ಸ್ಥಳಗಳಲ್ಲಿ ಘಟಕಗಳನ್ನು ಬಿಬಿಎಂಪಿ ನಿರ್ಮಿಸಿದಾಗ ವೈಜ್ಞಾನಿಕ ಸಂಸ್ಕರಣೆಯಾಗುವ ನಿರೀಕ್ಷೆ ಜನರಲ್ಲಿ ಮೂಡಿತ್ತು. 

ನಗರದ ತ್ಯಾಜ್ಯವನ್ನು ಸಂಸ್ಕರಿಸಿ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಸುಮಾರು ಏಳು ಎಕರೆ ಜಮೀನಿನಲ್ಲಿ ಘಟಕ ನಿರ್ಮಿಸಲಾಗಿದೆ. ಆದರೆ, ಪಾಲಿಕೆಯಿಂದ ಗುತ್ತಿಗೆ ಪಡೆದ ಸಂಸ್ಥೆ ಘಟಕದಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳದ ಕಾರಣ ಸಮಸ್ಯೆ ತಲೆದೋರಿತು. ಇದರೊಂದಿಗೆ ಸುತ್ತಮುತ್ತಲಿನ ಭಾಗದಲ್ಲಿ ದುರ್ವಾಸನೆ ಹರಡಿ ಸ್ಥಳೀಯರು ತೊಂದರೆ ಅನುಭವಿಸುವಂತಾಗಿತ್ತು.

ಘಟಕದಲ್ಲಿ ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಪೂರಕವಾಗಿ ಗುತ್ತಿಗೆದಾರರು ತ್ಯಾಜ್ಯವನ್ನು ಘಟಕದ ಹೊರಭಾಗದಲ್ಲಿ ಶೇಖರಣೆ ಮಾಡಿರುವುದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದುರ್ವಾಸನೆ ಹರಡಿದೆ. ಜತೆಗೆ ನೊಣ, ಸೊಳ್ಳೆಗಳ ಕಾಟದಿಂದ ಸುತ್ತಮುತ್ತಲಿನ ಗ್ರಾಮಸ್ಥರು ತೊಂದರೆಪಡುವಂತಾಗಿತ್ತು.

ಸಮಸ್ಯೆಗಳಿಂದ ರೋಸಿ ಹೋದ ಗ್ರಾಮಸ್ಥರು ಘಟಕವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಉಗ್ರ ಹೋರಾಟ ನಡೆಸಿದರ ಹಿನ್ನೆಲೆಯಲ್ಲಿ ಬಿಬಿಎಂಪಿ  ಘಟಕದಲ್ಲಿ ಸಂಸ್ಕರಣೆಯನ್ನು ಸ್ಥಗಿತಗೊಳಿಸಿತ್ತು. ಒಂದೊವರೆ ತಿಂಗಳ ನಂತರ ಮತ್ತೆ ಘಟಕವನ್ನು ಪುನರಾರಂಭಿಸಿರುವ ಬಿಬಿಎಂಪಿ ಗ್ರಾಮಸ‚§ರ ಪ್ರತಿಭಟನೆಗೆ ಬೆದರಿ ಪೊಲೀಸರ ಸರ್ಪಗಾವಲಿನಲ್ಲಿ ಘಟಕಕ್ಕೆ ತ್ಯಾಜ್ಯ ಸಾಗಿಸುತ್ತಿದೆ.

ಸಮಸ್ಯೆಗೆ ಕಾರಣ?: ಘಟಕದಲ್ಲಿ ಸಂಸ್ಕರಿಸಿ ಉತ್ಪಾದಿಸಲಾದ ಗೊಬ್ಬರ ಮತ್ತು ರೆಫ್ಯೂಸ್‌ ಡೆರೈವ್‌ ಫ‌ುಯೆಲ್‌ನಿಂದಾಗಿ (ಆರ್‌ಡಿಎಫ್) ಘಟಕ ಸ್ಥಗಿತಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆರ್‌ಡಿಎಫ್ಅನ್ನು ಘಟಕದ ಹೊರಭಾಗದಲ್ಲಿ ಶೇಖರಿಸಿರುವುದರಿಂದ ಹೊಸ ತ್ಯಾಜ್ಯ ಸಂಸ್ಕರಣೆಗೆ ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ಮಳೆ ಸುರಿದಾಗ ಇಲ್ಲವೇ ಜೋರಾಗಿ ಗಾಳಿ ಬೀಸಿದಾಗ ದುರ್ವಾಸನೆ ಹೆಚ್ಚುತ್ತಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. 

ತ್ಯಾಜ್ಯ ರಸ ಸಂಸ್ಕರಣಾ ಘಟಕಕ್ಕಾಗಿ ಟೆಂಡರ್‌ 
ಬೆಂಗಳೂರು:
ಬೆಲ್ಲಹಳ್ಳಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ತ್ಯಾಜ್ಯರಸ (ಲಿಚೆಟ್‌) ಸಂಸ್ಕರಣಾ ಘಟಕ ಸ್ಥಾಪನೆಗೆ ಮುಂದಾಗಿರುವ ಬಿಬಿಎಂಪಿ, ಈ ಸಂಬಂಧ ಟೆಂಡರ್‌ ಕರೆದಿದೆ. ನಿತ್ಯ 120 ಕಿ.ಲೀ. (ಕೆಎಲ್‌ಡಿ) ಸಾಮರ್ಥ್ಯದ ಲಿಚೆಟ್‌ ದ್ರಾವಣ ಸಂಸ್ಕರಣಾ ಘಟಕ ಸ್ಥಾಪನೆಗೆ ಯೋಜನೆ ರೂಪಿಸಿ ಟೆಂಡರ್‌ ಕರೆಯಲಾಗಿದ್ದು, ಇದರ ಗುತ್ತಿಗೆ ಪಡೆಯುವ ಸಂಸ್ಥೆಯು ವರ್ಷದಲ್ಲಿ ಘಟಕ ಸ್ಥಾಪಿಸಲಿದೆ. ನಂತರ ನಿರ್ವಹಣೆಯನ್ನೂ ಗುತ್ತಿಗೆ ಸಂಸ್ಥೆ ಮಾಡಬೇಕು.
 
ಪ್ರತಿ ದಿನ ತ್ಯಾಜ್ಯ ವಿಲೇವಾರಿ ಘಟಕದಿಂದ ಎಷ್ಟು ಲಿಚೆಟ್‌ ಉತ್ಪಾದನೆಯಾಗಿದೆ? ಅದರಲ್ಲಿ ಎಷ್ಟು ಸಂಸ್ಕರಿಸಲಾಗಿದೆ? ಎಂಬ ಬಗ್ಗೆ ಮಾಹಿತಿ ನೀಡಬೇಕು. ಹಾಗೂ ಸಂಸ್ಕರಣೆ ಸಂದರ್ಭದಲ್ಲಿ ಯಾವುದೇ ರೀತಿಯ ದುರ್ವಾಸನೆ ಬರದಂತೆ ನೋಡಿಕೊಳ್ಳಬೇಕು ಎಂಬುದು ಟೆಂಡರ್‌ ಷರತ್ತುಗಳು.  ತ್ಯಾಜ್ಯದಿಂದ ಗೊಬ್ಬರ ತಯಾರಿ­ಸುವ ಘಟಕಗಳಿಂದ ದುರ್ವಾಸನೆ ಬರುತ್ತಿದೆ ಮತ್ತು ಅಲ್ಲಿ ಉತ್ಪತ್ತಿಯಾಗುವ ಲಿಚೆಟ್‌ ದ್ರಾವಣದಿಂದ ಸುತ್ತಲಿನ ನೀರಿನ ಮೂಲಗಳು ಹಾಳಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಹೀಗಾಗಿ ಲಿಚೆಟ್‌ ಸಂಸ್ಕರಣಾ ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದಾಗಿದೆ.

ಆರ್‌ಡಿಎಫ್ಗಾಗಿ ಹೊಂಡ
ತ್ಯಾಜ್ಯ ಸಂಸ್ಕರಣೆಯಿಂದ ರೂಪಿಸಿದ ಆರ್‌ಡಿಎಫ್ಅನ್ನು ಸಿಮೆಂಟ್‌ ಕಾರ್ಖಾನೆಯಲ್ಲಿ ಬಳಸಲಾ­ಗುತ್ತದೆ. ಅದರಂತೆ ಘಟಕದಲ್ಲಿ ಶೇಖರಣೆ ಮಾಡಲಾಗಿರುವ ಆರ್‌ಡಿಎಫ್ ಪಡೆಯಲು ಸಿಮೆಂಟ್‌ ಕಾರ್ಖಾನೆಗಳು ಆಸಕ್ತಿ ತೋರಿದ್ದರೂ ಸಾಗಣೆ ವೆಚ್ಚ ಭರಿಸುವಂತೆ ಪಾಲಿಕೆಯನ್ನು ಕೋರಿವೆ. ಆದರೆ ಪಾಲಿಕೆ ಸಾಗಣೆ ವೆಚ್ಚ ಭರಿಸಲು ಹಿಂದೇಟು ಹಾಕಿದೆ. ಆ ಹಿನ್ನೆಲೆಯಲ್ಲಿ ಘಟಕದಲ್ಲಿರುವ ಆರ್‌ಡಿಎಫ್ಅನ್ನು ಖಾಲಿ ಮಾಡಿ, ಮತ್ತೆ ಘಟಕದಲ್ಲಿ ತ್ಯಾಜ್ಯ ಸಂಸ್ಕರಣೆ ಆರಂಭಿಸಲು ಘಟಕದ ಆವರಣದಲ್ಲಿ ಸುಮಾರು ಒಂದೂವರೆ ಎಕರೆ ಜಾಗದಲ್ಲಿ ಬೃಹತ್‌ ಹೊಂಡ ತೆಗೆಯಲಾಗಿದೆ.

ತ್ಯಾಜ್ಯ ಸಂಸ್ಕರಣೆ ಘಟಕದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಭಾಗ ಗಳಲ್ಲಿ ದುರ್ವಾಸನೆ ಹರಡಿದ್ದು, ಉಸಿರಾಡಲು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಕೊಳವೆಬಾವಿಗಳ ನೀರು ಸಹ ದುರ್ವಾಸನೆಯಿಂದ ಕೂಡಿದೆ.
-ಲಕ್ಷ್ಮಮ್ಮ, ಸೀಗೇಹಳ್ಳಿ 

ಒಂದು ಕೈಯಲ್ಲಿ ಊಟ ಮಾಡುತ್ತಿದ್ದರೆ ಮತ್ತೂಂದು ಕೈಯಲ್ಲಿ ನೊಣಗಳನ್ನು ಓಡಿಸ ಬೇಕಾದ ಸ್ಥಿತಿ ಇದೆ. ತ್ಯಾಜ್ಯ ವಿಲೇವಾರಿ ಮಾಡ ದಿರುವುದರಿಂದ ದುರ್ವಾ­ ಸನೆ ಹೆಚ್ಚಾಗಿದೆ. ಪ್ರತಿಭಟನೆ ನಡೆಸಿ­ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಭರವಸೆ ಭರವಸೆಗಳಾಗಿಯೇ ಉಳಿದಿವೆ. 
-ಶಿವಣ್ಣ, ಪಂಚಮುಖೀ ಬಡಾವಣೆ 

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.