ದಿವಾಕರ ಶಾಸ್ತ್ರಿ ವಿರುದ್ಧದ ಸಮನ್ಸ್ ರದ್ದು
Team Udayavani, Apr 19, 2017, 12:07 PM IST
ಬೆಂಗಳೂರು: ಪುತ್ತೂರಿನ ಸಿ. ಆರ್ ಶ್ಯಾಮಶಾಸ್ತ್ರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರ ದಿವಾಕರ ಶಾಸ್ತ್ರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾರಿಗೊಳಿಸಿದ್ದ ಸಮನ್ಸ್ ಅನ್ನು ಮಂಗಳವಾರ ಹೈಕೋರ್ಟ್ ರದ್ದುಗೊಳಿಸಿದೆ.
ಖಾಸಗಿ ದೂರಿನ ಅನ್ವಯ ಪುತ್ತೂರು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಅಧೀನ ನ್ಯಾಯಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ದಿವಾಕರ ಶಾಸ್ತ್ರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ, ಅಧೀನ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸಿ ಆದೇಶ ನೀಡಿತು.
ಪ್ರಕರಣದ ಹಿನ್ನೆಲೆ: ಪುತ್ತೂರಿನ ಕೆದಿಲ ಗ್ರಾಮದ ನಿವಾಸಿ ಸಿ.ಆರ್ ಶ್ಯಾಮಶಾಸ್ತ್ರಿ 2014ರ ಆಗಸ್ಟ್ 31 ರಂದು ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಗೋವಿಂದ ಶಾಸ್ತ್ರಿ ಎಂಬುವವರು, ಶ್ಯಾಮಶಾಸ್ತ್ರಿ ಸಾವಿನಲ್ಲಿ ಅವರ ಸಹೋದರ ದಿವಾಕರ ಶಾಸ್ತ್ರಿ ಮತ್ತಿತರ ಕೈವಾಡವಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೋರಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ದಿವಾಕರ ಶಾಸ್ತ್ರಿಯವರಿಗೆ ಸಮನ್ಸ್ ಜಾರಿಗೊಳಿಸಿತ್ತು.
ಸಹೋದರ ಶ್ಯಾಮಶಾಸ್ತ್ರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಯುತ್ತಿದೆ. ಹೀಗಿದ್ದರೂ, ವೈಯಕ್ತಿಕ ದ್ವೇಷ ಸಾಧನೆ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಖಾಸಗಿ ದೂರು ಸಲ್ಲಿಕೆಯಾಗಿದ್ದು,ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಪ್ರಕರಣ ರದ್ದುಗೊಳಿಸುವಂತೆ ಕೋರಿ ದಿವಾಕರ ಶಾಸ್ತ್ರಿ ಹೈಕೋರ್ಟ್ ಮೊರೆಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.