ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸಿದ್ಧ


Team Udayavani, Apr 19, 2017, 3:29 PM IST

gul5.jpg

ಕಲಬುರಗಿ: ಮಹಾನಗರದ ತ್ಯಾಜ್ಯ (ಒಳಚರಂಡಿ) ನೀರು ನೇರವಾಗಿ ಭೀಮಾ ನದಿ ಸರಡಗಿ ಬ್ಯಾರೇಜ್‌ ಗೆ ಸೇರಿ ಅದೇ ನೀರಿನಲ್ಲಿ ಬೆರೆತು ವಾಪಸ್ಸು ಬರುತ್ತಿರುವುದಕ್ಕೆ ಬ್ರೇಕ್‌ ಬೀಳುತ್ತಿದ್ದು, ಇನ್ಮುಂದೆ ಮಹಾನಗರಕ್ಕೆ ಕಲುಷಿತ ಕುಡಿಯುವ ನೀರು ಬದಲು ಶುದ್ಧ ನೀರು ಪೂರೈಕೆಯಾಗಲಿದೆ. 

ತ್ಯಾಜ್ಯ ನೀರು ಶುದ್ಧೀಕರಣಗೊಳಿಸುವ ನಂದಿಕೂರ ಬಳಿ ವಿಶಾಲವಾದ 45 ಎಕರೆ ಭೂಮಿಯಲ್ಲಿ ಆತ್ಯಾಧುನಿಕ 47 ಕೋಟಿ ರೂ. ವೆಚ್ಚದಲ್ಲಿ ಘಟಕ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಸಂಪೂರ್ಣವಾಗಿ ಕಾರ್ಯರೂಪಗೊಳ್ಳಲಿದೆ. 2014ರಲ್ಲಿ ಆರಂಭಗೊಂಡ 40 ಎಂಎಲ್‌ಡಿ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಈಗ ಸಂಪೂರ್ಣಗೊಂಡಿದ್ದರಿಂದ ಶೀಘ್ರದಲ್ಲಿಯೇ ಸಮರ್ಪಣೆಯಾಗಲಿದೆ. 

ಹಳೆ ಮಾದರಿಯಲ್ಲಿ ಕೋಟನೂರ ಬಳಿ ಈಗಿರುವ ನೀರು ತ್ಯಾಜ್ಯ ನೀರು ಶುದ್ಧೀಕರಣ ಸಮರ್ಪಕವಾಗಿ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ 2014ರಲ್ಲಿ ನಂದಿಕೂರ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ (ಕೆಯುಐಎಫ್‌ ಡಿಸಿ) ಅಡಿ ಪಾಲಿಕೆ ಆಯುಕ್ತರ ಸುಪರ್ದಿಯಲ್ಲಿ ಆರಂಭಗೊಂಡ ಕಾಮಗಾರಿ ಈಗ ಪೂರ್ಣಗೊಂಡಿದೆ. 

ತ್ಯಾಜ್ಯ ನೀರು ಶುದ್ಧೀಕರಣದ ಎಲ್ಲ ಹಂತದ ಘಟಕಗಳು ಸಿದ್ಧವಾಗಿವೆ. ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಅವರು ಮಂಗಳವಾರ ಘಟಕಕ್ಕೆ ಭೇಟಿ ನೀಡಿ ಸಮಗ್ರವಾಗಿ ಅವಲೋಕಿಸಿದರು. ಕೋಟನೂರ ಬಳಿಯಿಂದ ನಂದಿಕೂರ ಹತ್ತಿರದ ನೂತನ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಹೋಗುವ 1.8 ಕಿಮೀ ದೂರದ ಪೈಪ್‌ಲೈನ್‌ ಕಾಮಗಾರಿಯಲ್ಲಿ ಈಗ ಕೇವಲ 500 ಮೀಟರ್‌ ಬಾಕಿ ಉಳಿದಿದೆ.

ಉಳಿದ ಕಾಮಗಾರಿ ವಾರದಲ್ಲಿಯೇ ಪೂರ್ಣಗೊಳ್ಳಲಿದೆ. ಅಂದರೆ ಬರುವ ಮೇ ಆರಂಭದ ಹೊತ್ತಿಗೆ ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಶುದ್ಧತೆ ಬರಲಿದೆ. ಇದರಿಂದ ಪ್ರತಿವರ್ಷ ಮಳೆಗಾಲದಲ್ಲಿ ಕಲುಷಿತ ನೀರು ಕುಡಿದು ಇಷ್ಟು ಜನರು ಕಾಲರಾ ದಾಳಿ ಎಂಬ ಆತಂಕ ದೂರಾಗಲಿದೆ. ನಂದಿಕೂರ ಬಳಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮಹಾನಗರದ ಶೇ. 70ರಷ್ಟು ತ್ಯಾಜ್ಯ ನೀರು ಬಂದು ಸೇರುತ್ತದೆ.

ಕಲಬುರಗಿ ಉತ್ತರ ಭಾಗದಲ್ಲಿ ಕಪನೂರ ಬಳಿ 25 ಎಂಎಲ್‌ಡಿ ತ್ಯಾಜ್ಯ ನೀರು ಸಾಮರ್ಥ್ಯದ ಘಟಕದ ಕಾಮಗಾರಿ ನಡೆದು ಇಷ್ಟರಲ್ಲಿಯೇ ಪೂರ್ಣಗೊಳ್ಳಲಿದೆ. ಅದೇ ರೀತಿ ಅಮೃತ ಯೋಜನೆ ಅಡಿ ಉತ್ತರ ಭಾಗದಲ್ಲಿಯೇ ಮಗದೊಂದು ಘಟಕ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಈ ಎಲ್ಲವುಗಳು ಪೂರ್ಣಗೊಂಡಿದ್ದಲ್ಲಿ ಮಹಾನಗರ ಸಂಪೂರ್ಣ ಶುದ್ಧ ಕುಡಿಯುವ ನೀರು ಪೂರೈಕೆಯಾಗಲಿದೆ. 

ತ್ಯಾಜ್ಯ ನೀರು ಶುದ್ಧೀಕರಣದ ಜತೆಗೆ ಚೋರಗುಂಬಜ್‌ ಬಳಿಯ μಲ್ಟರ್‌ಬೆಡ್‌ ಕಾರ್ಯದಲ್ಲೂ ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಹಳೆಯದಾದ ಯಂತ್ರಗಳನ್ನು ಬದಲಾಯಿಸಲಾಗಿದೆ. ಇದಲ್ಲದೇ ಮಹಾನಗರದ ನೀರು ಪೂರೈಕೆ ಪೈಪ್‌ಲೈನ್‌ ನಲ್ಲಿ ಅಲ್ಲಲಿ ಸೋರಿಕೆ ತಡೆಗೆ ಕ್ರಮ ಕೈಗೊಳ್ಳಲು ಸಹ ಹೆಜ್ಜೆ ಇಡಲಾಗಿದೆ.

ಒಟ್ಟಾರೆ ಈ ಎಲ್ಲ ಕಾರ್ಯಗಳನ್ನು ಅವಲೋಕಿಸಿದರೆ ಕಲಬುರಗಿ ಮಹಾನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವುದು ನಿಶ್ಚಿತ ಎಂದು ಪಾಲಿಕೆ ಆಯುಕ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಂದಿಕೂರ ಬಳಿ ತ್ಯಾಜ್ಯ ಶುದ್ಧೀಕರಣಕ್ಕೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹಲವು ಸಲ ಹೋರಾಟ ಮಾಡಿದ್ದರಲ್ಲದೇ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.

ಅದರ ಪರಿಣಾಮ ಘಟಕ ಸಿದ್ಧವಾಗಿ ನಿಂತಿದೆ. ಒಟ್ಟಾರೆ ಅಶುದ್ಧ ಕುಡಿಯುವ ನೀರು ಪೂರೈಕೆಗೆ ಬ್ರೇಕ್‌ ಬಿದ್ದು, ಶುದ್ಧ ಕುಡಿಯುವ ನೀರು ಪೂರೈಕೆಯಾಗುವುದನ್ನು ಮಹಾನಗರದ ಜನರು ಕಾತರದಿಂದ ಕಾಯುತ್ತಿದ್ದಾರೆ. 

* ಹಣಮಂತರಾವ ಭೈರಾಮಡಗಿ 

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.