ಶಿಕ್ಷಣ ಎಲ್ಲಾ ಸಮಸ್ಯೆಗಳಿಗೂ ಸಂಜೀವಿನಿ
Team Udayavani, Apr 21, 2017, 12:36 PM IST
ಮೈಸೂರು: ಸ್ಪರ್ಧಾತ್ಮಕ ಯುಗದಲ್ಲಿ ಸಮರ್ಥವಾಗಿ ಬದುಕು ಕಟ್ಟಿಕೊಳ್ಳಲು ಶಿಕ್ಷಣ ಬಹುಮುಖ್ಯ ಎಂದು ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು. ನಗರದ ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಬನುಮೋತ್ಸವ ಸಮಾರೋಪ, ಅಂತರಕಾಲೇಜು ಭಾವಗೀತೆ ಮತ್ತು ಜಾನಪದ ಗೀತೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಸವಾಲಿನ ಜಗತ್ತು ನಮ್ಮ ಮುಂದಿದೆ. ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡಮಟ್ಟದ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಂತಹ ಸವಾಲುಗಳನ್ನು ಸ್ವೀಕರಿಸಬೇಕಾದರೆ ಎದೆಗಾರಿಕೆ ಬೇಕು. ಬದುಕನ್ನು ಸವಾಲಾಗಿ ಸ್ವೀಕರಿಸಿದರೆ ಏನನ್ನಾದರೂ ಸಾಧಿಸಬಹುದು ಎಂದರು.
ಶಿಕ್ಷಣಕ್ಕೆ ಅಗಾಧ ಶಕ್ತಿಯಿದೆ. ಶಿಕ್ಷಣ ಎಲ್ಲಾ ಸಮಸ್ಯೆಗಳಿಗೂ ಸಂಜೀವಿನಿ. ಇಂದಿನ ವಿದ್ಯಾರ್ಥಿಗಳು ಶಾಲಾ ಶಿಕ್ಷಣವನ್ನು ಪರಿಗಣಿಸಿದಷ್ಟು ಗಂಭೀರವಾಗಿ ಪದವಿ ಶಿಕ್ಷಣವನ್ನು ಪರಿಗಣಿಸುತ್ತಿಲ್ಲ. ವಿದ್ಯಾರ್ಥಿಗಳು ಶಿಕ್ಷಣವನ್ನು ಅಸ್ತ್ರವಾಗಿ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ಗಟ್ಟಿಯಾಗಿಸಿಕೊಳ್ಳುವ ಹಠಕ್ಕೆ ಬೀಳಬೇಕು.
ಸದಾ ಎತ್ತರದ ಕನಸುಗಳನ್ನು ಕಾಣಬೇಕು. ಅಪರಿಮಿತ ಕನಸುಗಳ ಸಾಕಾರಕ್ಕಾಗಿ ನಿರಂತರವಾಗಿ ಶ್ರಮಪಡಬೇಕು. ಜೀವನವನ್ನು ಕಟ್ಟಿಕೊಳ್ಳುವ ಭರದಲ್ಲಿ ಪರಿಸರವನ್ನು ಮರೆಯಬಾರದು. ನಮ್ಮ ಬದುಕನ್ನು ಪ್ರೀತಿಸುವುದರ ಜತೆಗೆ ಸಮಾಜ, ಪರಿಸರ, ಪ್ರಾಣಿ-ಪಕ್ಷಿಗಳನ್ನೂ ಸಹ ಪ್ರೀತಿಸಬೇಕು ಎಂದರು.
ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ವಿ.ಬಿ. ಜಯದೇವ, ಆಡಳಿತಾಧಿಕಾರಿ ಡಾ. ಎನ್. ತಿಮ್ಮಯ್ಯ, ಗೌರವ ಕಾರ್ಯದರ್ಶಿ ಎಸ್.ಜೆ.. ಲಕ್ಷೆಗೌಡ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಸಂಚಾಲಕ ಪೊ›. ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.