ಒಡೆತನದ ಹಕ್ಕು ಪತ್ರ ವಿತರಣೆಗೆ ಕ್ರಮ
Team Udayavani, Apr 21, 2017, 1:11 PM IST
ಹರಪನಹಳ್ಳಿ: ಅನೇಕ ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡಿಕೊಂಡು ಬಂದಿರುವ ಬಡ ಜನರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸುಮಾರು 1200 ಫಲಾನುಭವಿಗಳಿಗೆ ಭೂಮಿ ಒಡೆತನದ ಹಕ್ಕು ಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಪಿ.ರವೀಂದ್ರ ತಿಳಿಸಿದರು.
ತಾಲೂಕಿನ ಅಡವಿಹಳ್ಳಿ ಗ್ರಾಪಂ ವ್ಯಾಪ್ತಿಯ ಚೆಕ್ಡ್ಯಾಂ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಲೇ 350 ಜನ ರೈತರ ಪಟ್ಟಾ ಸಿದ್ಧವಾಗಿವೆ. ಸುಮಾರು ಜನರು ಅರ್ಜಿ ಸಲ್ಲಿಸಿರುವುದರಿಂದ ಅವರ ಜಮೀನಿನ ಕುರಿತ ದಾಖಲೆ ಪತ್ರಗಳ ಪರಿಶೀಲನೆ ನಡೆಯುತ್ತಿದೆ.
ಪರಿಶೀಲನೆ ಪೂರ್ಣಗೊಂಡ ನಂತರ ಮುಖ್ಯಮಂತ್ರಿಗಳಿಂದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. ಆದರೆ ಜಮೀನಿನ ಪಟ್ಟಾ ಕೊಡಿಸುವುದಾಗಿ ಬಡ ರೈತರಿಂದ ಹಣ ವಸೂಲಿ ದಂಧೆ ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ರೈತರು ಯಾರಿಗೂ ನಯಾಪೈಸೆ ಕೊಡಬೇಡಿ ಎಂದು ಮನವಿ ಮಾಡಿದರು.
ಗರ್ಭಗುಡಿ ಬಿಡ್ಜ್ ಕಂ ಬ್ಯಾರೇಜ್ ಯೋಜನೆ ಮುಂದಿನ ದಿನಗಳಲ್ಲಿ ಕ್ಯಾಬಿನೆಟ್ ಗೆ ಬರಲಿದೆ. 50 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ತೆಲಂಗಾಣ ಮಾದರಿಯ ಪೈಪ್ಗ್ಳನ್ನು ಅಳವಡಿಸಲು ರೂಪರೇಷೆ ತಯಾರಿಸಲಾಗಿದೆ. ಹಾಗಾಗಿ 257 ಕೋಟಿ ರೂ.ಗಳ ಬದಲಾಗಿ 312 ಕೋಟಿ ರೂ.ಗೆ ಅನುದಾನ ಹೆಚ್ಚಳವಾಗಿದೆ.
ಈ ಯೋಜನೆ ಬಜೆಟ್ನಲ್ಲಿ ಘೋಷಣೆಯಾಗಿದ್ದು, ಶೀಘ್ರವೇ ಕ್ಯಾಬಿನೆಟ್ ಅನುಮತಿ ಪಡೆದು ಮುಖ್ಯಮಂತ್ರಿ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಪಟ್ಟಣದ ಕೆಇಬಿ ಹಿಂಭಾಗದ ಉಚ್ಚೆಂಗೆಮ್ಮದೇವಿ ದೇವಸ್ಥಾನವಿರುವ ಗುಡ್ಡದಲ್ಲಿ ಅರಣ್ಯ ಇಲಾಖೆ ವತಿಯಿಂದ 1.35 ಕೋಟಿ ರೂ.ವೆಚ್ಚದಲ್ಲಿ ನಗರ ಸಸ್ಯ ಉದ್ಯಾನವನ ನಿರ್ಮಾಣ ಮಾಡಲಾಗುತ್ತಿದ್ದು, ಸದ್ಯ 35 ಲಕ್ಷರೂ. ಗಳ ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಭಕ್ತರಿಗೆ, ವಾಯು ವಿಹಾರಿಗಳಿಗೆ ವಾಕಿಂಗ್ ಪಾತ್, ಸಸಿ ನೆಡುವುದು, ಆಸನ ವ್ಯವಸ್ಥೆ, ಪರಗೋಲ ಸೇರಿದಂತೆ 25 ಎಕರೆ ಪ್ರದೇಶ ಅಭಿವೃದ್ಧಿಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು.
ಜಿಗಟೇರಿ ಐಬಿ ಬಳಿರುವ ಜಿಂಕೆ ವಶ ಪುನರುಜ್ಜೀವನಗೊಳಿಸಲು ಅಲ್ಲಿಯೂ ನಾರದಮುನಿ ದೈವಿ ವನ ನಿರ್ಮಾಣ ಮಾಡಲಾಗುವುದು ಎಂದರು. ಉಚ್ಚೆಂಗೆಮ್ಮದೇವಿ ದೇವಸ್ಥಾನದ ಗುಡ್ಡದಲ್ಲಿ ನಡೆಯುತ್ತಿರುವ ಕಾಮಗಾರಿ, ಹೊಂಬಳಗಟ್ಟಿ ಗ್ರಾಮ, ತೋಗರಿಕಟ್ಟೆ ಗ್ರಾ.ಪಂ ವ್ಯಾಪ್ತಿಯ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿದರು.
ಮುಖಂಡರಾದ ಎಂ.ವಿ.ಅಂಜಿನಪ್ಪ, ಕೋಡಿಹಳ್ಳಿ ಭೀಮಪ್ಪ, ಕೆ.ಎಂ.ಬಸವರಾಜಯ್ಯ, ತಾಪಂ ಸದಸ್ಯೆ ಯಲಮ್ಮ, ಐ.ಎಂ. ಬಸವರಾಜ್, ಸಿದ್ದಲಿಂಗಸ್ವಾಮಿ, ಚನ್ನಪ್ಪ, ಪಿ.ಪ್ರೇಮಕುಮಾರಗೌಡ, ಅಲ್ಮರಸೀಕೆರೆ ರಾಜಣ್ಣ, ಪೂಜಾರ ಬಸಪ್ಪ, ದಕ್ಷಿಣಮೂರ್ತಿ, ಎಂ.ಹಾಲೇಶ್, ಮಲ್ಲೇಶ್, ದೊಡ್ಡ ಹಾಲಪ್ಪ, ಬಸಪ್ಪ, ರಾಮಪ್ಪ ಮತ್ತಿರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.