2018ರ ಮಾರ್ಚ್‌ನಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ
Team Udayavani, Apr 22, 2017, 3:52 PM IST
ಕಲಬುರಗಿ: ಬಹು ನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣ 2018ರ ಮಾರ್ಚ್ ಹೊತ್ತಿಗೆ ಪೂರ್ಣಗೊಳ್ಳಲಿದ್ದು, ವಿಮಾನ ಹಾರಾಟ ಶುರುವಾಗುವ ಬಹು ದಿನಗಳ ಕನಸು ಸಾಕಾರಗೊಳ್ಳಲಿದೆ.
ಕಲಬುರಗಿ-ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ 109 ಕೋಟಿ ರೂ. ವೆಚ್ಚದಿಂದ ನಿರ್ಮಿಸಲಾಗುತ್ತಿರುವ ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ 10-11 ತಿಂಗಳಲ್ಲಿ ಪೂರ್ಣಗೊಂಡು ಕಾರ್ಯಾರಂಭ ಮಾಡಲಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಶುಕ್ರವಾರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಈಗಾಗಲೇ ಮೊದಲನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, 2ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಅಲ್ಲದೇ 3ನೇ ಹಂತದ 15.90 ಕೋಟಿ ರೂ. ವೆಚ್ಚದ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.
ಕಾಮಗಾರಿಯನ್ನು ಕ್ಷಿಪ್ರ ಗತಿಯಲ್ಲಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ವರೆಗೆ ವಿಮಾನ ನಿಲ್ದಾಣದ ವಿವಿಧ ಕಾಮಗಾರಿಗಳಿಗಾಗಿ 63 ಕೋಟಿ ರೂ. ಖರ್ಚು ಮಾಡಲಾಗಿದೆ. ಬರುವ ಜನವರಿಯೊಳಗೆ ವಿಮಾನ ನಿಲ್ದಾಣ ತಾಂತ್ರಿಕ ಅನುಮೋದನೆ ಪಡೆಯುವ ಕಾರ್ಯ ಮುಗಿಯಲಿದೆ ಎಂದು ವಿವರಿಸಿದರು.
ವಿಮಾನ ನಿಲ್ದಾಣದ ಕಾಮಗಾರಿಗೆ ಶ್ರೀನಿವಾಸ ಸರಡಗಿ ಗ್ರಾಮಸ್ಥರು 742 ಎಕರೆ ಜಮೀನು ಒದಗಿಸಿದ್ದಕ್ಕೆ ಗ್ರಾಮಸ್ಥರು ಅಭಿನಂದನಾರ್ಹರು. ಈವರಗೆ ವಿಮಾನ ನಿಲ್ದಾಣದ ಶೇ. 40ರಷ್ಟು ಭೌತಿಕ ಮತ್ತು ಶೇ. 35ರಷ್ಟು ಆರ್ಥಿಕ ಪ್ರಗತಿಯಾಗಿದೆ. ಕಲಬುರಗಿಯಲ್ಲಿರುವ μÅಕ್ವೆನ್ಸಿ ಯಂತ್ರವನ್ನು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರ ಎಂಒಯು ಒಪ್ಪಂದ ಮಾಡಿಕೊಳ್ಳುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟದ ಅನುಮೋದನೆಯನ್ನು ಪಡೆಯಲಾಗುವುದು. ವಿಮಾನ ನಿಲ್ದಾಣದ ಕಾಮಗಾರಿಗೆ ಯಾವುದೇ ಹಣಕಾಸಿನ, ಭೂಮಿಯ ಹಾಗೂ ತಾಂತ್ರಿಕ ಸಮಸ್ಯೆ ಇಲ್ಲ. ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಕಲಬುರಗಿ ಜನತೆಯ ವಿಮಾನ ಹಾರಾಟದ ಕನಸು ಸಾಕಾರಗೊಳಿಸಬೇಕಾಗಿದೆ ಎಂದು ಹೇಳಿದರು.
ಸಂಸದರ ಜತೆಗೆ ಆಗಮಿಸಿದ್ದ ಶ್ರೀನಿವಾಸ ಸರಡಗಿ ಗ್ರಾಮದವರೇ ಆಗಿರುವ ಡಿಸಿಸಿ ಬ್ಯಾಂಕ್‌ನ ಹಿಂದಿನ ಅಧ್ಯಕ್ಷ ಸೋಮಶೇಖರ ಗೋನಾಯಕ ಅವರೊಂದಿಗೆ ರಾಜ್ಯ ಹೆದ್ದಾರಿಯಿಂದ ಶ್ರೀನಿವಾಸ ಸರಡಗಿ ಗ್ರಾಮದವರೆಗಿನ ರಸ್ತೆ ಅಗಲೀಕರಣ ಹಾಗೂ ಇತರ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದರು. ಇದೇ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬುರಾವ ರಾಠೊಡ, ಯುವ ಮುಖಂಡ ಚೇತನ ಗೋನಾಯಕ ಇದ್ದರು.
ಗ್ರಾಮೀಣ ಕ್ಷೇತ್ರದ ಶಾಸಕ ಜಿ. ರಾಮಕೃಷ್ಣ, ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಧಿಕಾರದ ಅಧಿಧಿಕಾರಿ ಬೂವರಹನ್, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಪ್ರಮೋದರೆಡ್ಡಿ, ಸೂಪರಿಟೆಂಡೆಂಟ್ ಇಂಜಿನಿಯರ್ ಪ್ರಕಾಶ ಶ್ರೀಹರಿ, ಕಾರ್ಯನಿರ್ವಾಹಕ ಇಂಜಿನಿಯರ್ ಮಹ್ಮದ್ ಅಜೀಜುದ್ದೀನ್ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.