ಶ್ರೀರಾಮ ಸೇನೆ ಸ್ವತಂತ್ರ ಚುನಾವಣೆ ಸ್ಪರ್ಧೆ: ಮುತಾಲಿಕ್
Team Udayavani, Apr 25, 2017, 12:02 PM IST
ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕೆಲವು ಕಡೆ ಶ್ರೀರಾಮ ಸೇನೆ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
2009ರ ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಲು ಸೋಮವಾರ ಆಗಮಿಸಿದ ಅವರು ಸುದ್ದಿ ಗಾರರ ಜತೆ ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಶ್ರೀರಾಮ ಸೇನೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲೆಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
ವ್ಯವಸ್ಥಿತ ಸಂಚು
ರಾಜ್ಯದಲ್ಲಿ ಹಿಂದೂ ನಾಯಕರ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದೆ. ಈ ಸಂಚಿನ ಹಿಂದೆ ಪಿಎಫ್‌ಐ ಕೈವಾಡ ಇದೆ. ರಾಜ್ಯ ಸರಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸುವ ಬದಲು ಅದಕ್ಕೆ ಪ್ರೋತ್ಸಾಹಿಸುತ್ತಿದೆ ಎಂದು ಮುತಾಲಿಕ್ ಆರೋ ಪಿಸಿದರು. ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ್, ಮೂಡಬಿದಿರೆಯ ಪ್ರಶಾಂತ್, ಹುಣಸೂರಿನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಕೊಲೆ ಮಾಡಿರುವುದು ಪಿಎಫ್‌ಐ ಸಂಘಟನೆ. ಆದರೆ ಸರಕಾರ ಮೈಸೂರು, ಹಾಸನ, ಶಿವಮೊಗ್ಗಗಳಲ್ಲಿ ಪಿಎಫ್‌ಐ ಮೇಲಿದ್ದ 200ಕ್ಕೂ ಅಧಿಕ ಪ್ರಕರಣಗಳನ್ನು ವಾಪಸ್ ಪಡೆದಿದೆ. ಈ ಮೂಲಕ ರಾಜ್ಯದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸರಕಾರವೇ ಪ್ರೋತ್ಸಾಹ ನೀಡಿದಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.