ತಿಂಗಳಲ್ಲಿ ವಾರ್ಡ್ ಸಮಿತಿ ರಚಿಸಲು ಹೈ ತಾಕೀತು
Team Udayavani, Apr 25, 2017, 12:32 PM IST
ಬೆಂಗಳೂರು: ಮುಂದಿನ ಒಂದು ತಿಂಗಳಲ್ಲಿ ವಾರ್ಡ್ ಕಮಿಟಿ ರಚಿಸಿ ವರದಿ ನೀಡುವಂತೆ ಬಿಬಿಂಎಪಿಗೆ ಹೈಕೋರ್ಟ್ ತಾಕೀತು ಮಾಡಿದೆ. ವಾರ್ಡ್ ಕಮಿಟಿ ರಚನೆ ವಿಳಂಬ ಹಾಗೂ ಗುತ್ತಿಗೆ ಪೌರಕಾರ್ಮಿಕರ ಬೇಡಿಕೆಗಳ ಕುರಿತು ಸಲ್ಲಿಕೆಯಾಗಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಅಶೋಕ್ ಬಿ. ಹಿಂಚಿಗೇರಿ
ಹಾಗೂ ನ್ಯಾ. ಕೆ.ಎಸ್ ಮುದ್ಗಲ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಗೆ ಹಾಜರಾಗಿದ್ದ ಬಿಬಿಎಂಪಿ ವಾರ್ಡ್ ಕಮಿಟಿ ರಚನೆ ವಿಶೇಷ ಆಯುಕ್ತ ಸಫìರಾಜ್ ಖಾನ್ ಅವರಿಗೆ, ಮುಂದಿನ ಒಂದು ತಿಂಗಳಲ್ಲಿ ಕಡ್ಡಾಯವಾಗಿ ವಾರ್ಡ್ ಕಮಿಟಿ ರಚಿಸಬೇಕು ಎಂದು ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘದ ಪರ ವಕೀಲರು, ಬಿಬಿಎಂಪಿ ಪೌರಕಾರ್ಮಿಕರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸದೇ ಬೇಕಾಬಿಟ್ಟಿ ನಡೆಸಿಕೊಳ್ಳುತ್ತಿದೆ. ಹೀಗಾಗಿ ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಬಗ್ಗೆ ನಿಯಮಾವಳಿಯೊಂದನ್ನು ರೂಪಿಸುವಂತೆ ನಿರ್ದೇಶಿಸಬೇಕು ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಪೌರಕಾರ್ಮಿಕರನ್ನು ಸರಿಯಾಗಿ ನಡೆಸಿಕೊಳ್ಳಬೇಕು, ಕನಿಷ್ಟ ಅವರು ಕೆಲಸ ಮಾಡುವಾಗ ಕೈಗವಸು, ಶೂ ಮತ್ತಿತರ ಪರಿಕರಗಳನ್ನು ನೀಡಿ ಅವರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿತು.
ಬಿಬಿಎಂಪಿ ಆಯುಕ್ತರಿಗೆ ನೋಟಿಸ್
ಬೆಂಗಳೂರು: ರಾಜಾಜಿನಗರದ 16ನೇ ಕ್ರಾಸ್‌ನಲ್ಲಿರುವ ಸಾರ್ವಜನಿಕ ಉದ್ಯಾನವನದ ಸಮೀಪದ ಜಾಗವನ್ನು ಡಂಪಿಂಗ್ ಯಾರ್ಡ್ ಮಾಡಿರುವ ಬಿಬಿಎಂಪಿ ಕ್ರಮ ಪ್ರಶ್ನಿಸಿ ಸ್ಥಳೀಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಸ್ಥಳೀಯ ನಿವಾಸಿ ಸೀತಾರಾಮ ಶೆಟ್ಟಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾ. ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ, ಈ ಸಂಬಂಧ ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ರಾಜಾಜಿ ನಗರ 5ನೇ ಬ್ಲಾಕ್, 16ನೇ ಕ್ರಾಸ್‌ನಲ್ಲಿರುವ ಉದ್ಯಾನವನ ಪಕ್ಕದ ಜಾಗವನ್ನು ಪಾಲಿಕೆ ಕಸ ವಿಲೇವಾರಿ ಸ್ಥಳವಾಗಿಸಿದೆ. ಕಸದಿಂದ ದುರ್ವಾಸನೆ ಬರುತ್ತಿದ್ದು, ಉದ್ಯಾನಕ್ಕೆ ಬರುವ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ.
ಅಲ್ಲದೆ ಸ್ಥಳೀಯರು ಹಾಗೂ ಸಮೀಪದ ನ್ಯಾಶನಲ್ ಪಬ್ಲಿಕ್ ಶಾಲೆಯ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕಸ ಸುರಿಯುವ ಸ್ಥಳ ಬದಲಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪಾಲಿಕೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ದೂರಿರುವ ಅರ್ಜಿದಾರರು, ಉದ್ಯಾನದ ಬಳಿ ಕಸ ಸುರಿಯುವುದನ್ನು ಕೂಡಲೇ ನಿಲ್ಲಿಸುವಂತೆ ಬಿಬಿಎಂಪಿಗೆ ನಿರ್ದೇಶಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.