ಡಾ| ರಾಜಕುಮಾರ್ ಅದ್ಭುತ ಶಕ್ತಿ
Team Udayavani, Apr 25, 2017, 1:02 PM IST
ದಾವಣಗೆರೆ: ಕಲಾ ತಪಸ್ವಿ ಡಾ| ರಾಜಕುಮಾರ್ ಕನ್ನಡ ನಾಡು, ನುಡಿ, ಗಡಿ ಹೋರಾಟಗಳಿಗೆ ಮಾತ್ರ ಸ್ಫೂರ್ತಿ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂದು ಕರ್ನಾಟಕ ಜನಮನ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಾಗೇಂದ್ರ ಬಂಡೀಕರ್ ಅಭಿಪ್ರಾಯಪಟ್ಟಿದ್ದಾರೆ.
ಡಾ| ರಾಜಕುಮಾರ್ ಜನ್ಮದಿನದ ನಿಮಿತ್ತ ಮಜ್ಜಿಗೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ| ರಾಜಕುಮಾರ್ ಕನ್ನಡ ಚಲನಚಿತ್ರ ರಂಗ ಸೇರಿದಂತೆ ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಈ ನಾಡಿಗೆ ಸದಾ ಸ್ಫೂರ್ತಿ ಸೆಲೆಯಾಗಿ ಇರಲಿದ್ದಾರೆ.
ಕಲ್ಲು ಮುಳ್ಳುಗಳ ಹಾದಿಯಲ್ಲೇ ಅವರು ಅತ್ಯಂತ ಕಠಿಣ ಪರಿಶ್ರಮದಿಂದ ಕನ್ನಡಿಗರ ಹೃದಯಸಿಂಹಾಸನದಲ್ಲಿ ಭದ್ರವಾದ ನೆಲೆ ಕಂಡುಕೊಳ್ಳುವ ಮೂಲಕ ಜನಮಾನಸದಲ್ಲಿ ಚಿರಾಯುವಾಗಿ ಉಳಿದಿದ್ದಾರೆ ಎಂದರು. ರಾಜಕುಮಾರ್‌ರ ಆದರ್ಶ ಇಂದಿನ ಪೀಳಿಗೆಗೆ ತಿಳಿಯಬೇಕಿದೆ.
ಉತ್ತಮ ಸಾಮಾಜಿಕ ವ್ಯವಸ್ಥೆ ಹೊಂದಲು ಅವರು ಎಲ್ಲರಿಗೂ ಮಾದರಿ. ಡಾ| ರಾಜ್ ಚಿತ್ರಗಳಲ್ಲಿರುವ ಅಂಶಗಳನ್ನು ಅರಿತು ಬಾಳಿದರೆ ಸುಂದರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ವೇದಿಕೆಯ ಉಪಾಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಪಿ. ಶಿವಕುಮಾರ್ ಸುಂಕಾಪುರ, ಕಾರ್ಯದರ್ಶಿ ಮನ್ಸೂರ್, ಖಜಾಂಚಿ ಎಸ್. ವಿಷ್ಣು, ಮಹಿಳಾ ಸಂಚಾಲಕಿ ಮಹಾದೇವಿ ರುದ್ರೇಶ್, ಡಿ.ಎಸ್. ಪ್ರವೀಣ, ಎಂ. ತಿಪ್ಪೇಶ, ಆನಂದ, ಟಿ.ಸಿ. ಜಯಮೂರ್ತಿ, ಕುಮಾರ್ ಇತರರು ಈ ವೇಳೆ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.